ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ವೈದ್ಯರೊಂದಿಗೆ ವೀಡಿಯೋ ಸಮಾಲೋಚನೆ ಸೌಲಭ್ಯ
Team Udayavani, Jul 20, 2020, 11:38 AM IST
ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಜು. 20ರಿಂದ ಜಾರಿಗೆ ಬರುವಂತೆ ರೋಗಿಗಳ ಅನುಕೂಲಕ್ಕಾಗಿ ವೀಡಿಯೋ ಸಮಾಲೋಚನೆ ಸೇವೆಯನ್ನು ಪ್ರಾರಂಭಿಸುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ ಶೆಟ್ಟಿ ಪ್ರಕಟಿಸಿದ್ದಾರೆ. ಕೋವಿಡ್ ವ್ಯಾಪಿಸುವುದನ್ನು ನಿಯಂತ್ರಿಸುವ ಸಲುವಾಗಿ ಹಲವು ನಿರ್ಬಂಧಗಳಿರುವುದರಿಂದ ಹೆಚ್ಚಿನ ರೋಗಿಗಳು ವೈದ್ಯರೊಂದಿಗೆ ಸಮಯೋಚಿತ ಸಮಾಲೋಚನೆ ಮತ್ತು ಮರು ಸಮಾಲೋಚನೆಯಿಂದ ವಂಚಿತರಾಗಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು ಆಸ್ಪತ್ರೆಯ ಆಡಳಿತ ಮಂಡಳಿ ನಿರ್ಧರಿಸಿದೆ.
ರೋಗಿಗಳ ಉತ್ತಮ ಸೇವೆಗಾಗಿ ಮತ್ತು ಯಾವುದೇ ಸಮಯದಲ್ಲಿ, ಎಲ್ಲಿಯಾದರೂ ಮತ್ತು ಯಾವುದೇ ಸಾಧನದಲ್ಲಿ ಸಮಾಲೋಚನೆಗಳನ್ನು ಒದಗಿಸಲು ಮೈ ಟೆಲಿ ಒಪಿಡಿ ಅಥವಾ ವೀಡಿಯೋ ಸಮಾಲೋಚನೆ ಒಂದು ಪ್ರಬಲ ಸಾಧನ. ವೈದ್ಯರು ಮತ್ತು ರೋಗಿಗಳು ಈಗ ಟೆಲಿಮೆಡಿಸಿನ್ ಅಥವಾ ವೀಡಿಯೋ ಸಮಾಲೋಚನೆಯನ್ನು ಆ್ಯಪ್ ಡೌನ್ಲೋಡ್ ಮಾಡದೆ ಬಳಸಬಹುದು. ಏಕೆಂದರೆ ಇದು ಎಲ್ಲ ಫೋನ್ಗಳಲ್ಲಿ ನೇರವಾಗಿ ಕಾರ್ಯನಿರ್ವಹಿಸುತ್ತದೆ.
ಈ ಸೇವೆಯಡಿ ಜನರು ಮನೆಯಲ್ಲಿ ಕುಳಿತು ವೈದ್ಯರನ್ನು ಸಂಪರ್ಕಿಸಬಹುದು. ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ದೂರವಾಣಿ ಕರೆ ಮೂಲಕ ಎಲ್ಲ ವಿಭಾಗಗಳ ವೈದ್ಯರನ್ನು ಸಂಪರ್ಕಿಸಬಹುದು. ಅಪಘಾತ ಮತ್ತು ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ 24ಗಿ7 ಕಾರ್ಯನಿರ್ವ ಹಿಸಲಿವೆ ಎಂದು ಪ್ರಕಟನೆ ತಿಳಿಸಿದೆ.
ಸಂಪರ್ಕ ಸಂಖ್ಯೆ: 080 47192235
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ