ಮಣಿಪಾಲ: ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ; ಗಾರ್ಡ್ ಬಂಧನ
Team Udayavani, Nov 17, 2019, 1:20 AM IST
ಉಡುಪಿ: ಹಲವಾರು ದಿನಗಳಿಂದ ಮುಂಜಾನೆ ಹಾಗೂ ರಾತ್ರಿ ವೇಳೆ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿ ಯರು ಹಾಗೂ ಮಹಿಳೆಯರರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಪರ್ಕಳ ಸಣ್ಣಕ್ಕಿಬೆಟ್ಟಿನ ದೀಪಕ್ ನಾಯಕ್ (22) ಎಂಬಾತನನ್ನು ಬಂಧಿಸಲಾಗಿದೆ.
ಸೆಕ್ಯುರಿಟ್ ಗಾರ್ಡ್ ಆಗಿದ್ದ ಈತ ವಿದ್ಯಾರತ್ನ ನಗರ, ಪೆರಂಪಳ್ಳಿ ರಸ್ತೆ, ಈಶ್ವರನಗರ, ಪ್ರಸ್ ಕಾರ್ನರ್ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಎಸ್ಪಿ ನಿಶಾ ಜೇಮ್ಸ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ಚಂದ್ರ ಅವರ ನಿರ್ದೇಶನದಲ್ಲಿ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು. ಡಿವೈಎಸ್ಪಿ ಟಿ. ಆರ್. ಜೈಶಂಕರ್ ಅವರ ಮಾರ್ಗದರ್ಶನದಲ್ಲಿ ಮಣಿಪಾಲ ಠಾಣಾಧಿಕಾರಿ ಮತ್ತು ಸಿಬಂದಿ ಆರೋಪಿಯನ್ನು ನ.15ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ