ಮಳೆಗಾಲ: ವಾಹನ ಸವಾರರಿಗೆ ಮುನ್ನೆಚ್ಚರಿಕೆ

Team Udayavani, May 31, 2023, 4:11 PM IST

ಮಳೆಗಾಲ: ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಉಡುಪಿ: ಮಳೆಗಾಲ ಆರಂಭಗೊಂಡಿರುವ ನಡುವೆಯೇ ರಸ್ತೆ ಅಪಘಾತಗಳಂತಹ ಪ್ರಕರಣಗಳೂ ದಿನನಿತ್ಯ ಘಟಿಸುತ್ತಿವೆ. ಈ ಬಗ್ಗೆ ವಾಹನಸವಾರರು ಜಾಗರೂಕರಾಗಿರುವುದು ಅತೀ ಅಗತ್ಯವಾಗಿದೆ. ಮೊದಲ ಮಳೆ ಸುರಿದಾಗ ಹಾಗೂ ಅದರ ಬಳಿಕ ಎಚ್ಚರವಹಿಸುವುದು ಅತೀ ಅಗತ್ಯವಾಗಿರುತ್ತದೆ.

ದ್ವಿಚಕ್ರ ವಾಹನ ಸವಾರರಿಗೂ ಇತರ ಸಂದರ್ಭಗಳಲ್ಲಿ ನಿಯಂತ್ರಣದಲ್ಲಿರುವಷ್ಟು ಮಳೆ ಬಿದ್ದಾಗ ಇರುವುದಿಲ್ಲ. ಇದೇ ಕಾರಣಕ್ಕೆ ನಿಯಂತ್ರಣ ಕಳೆದುಕೊಂಡು ವಾಹನಗಳು ಸ್ಕಿಡ್‌ ಆಗುವುದು ಅಥವಾ ಬ್ರೇಕ್‌ ಸರಿಯಾಗಿ ಕಾರ್ಯನಿರ್ವಹಿಸದೆ ಅಪಘಾತಗಳು ಉಂಟಾಗುತ್ತವೆ.

ಉಡುಪಿಯಲ್ಲಿ ಮಂಗಳವಾರ ಸುರಿದ ಮಳೆಗೆ ಬಲೈಪಾದೆ ಬಳಿ ಗೇರುಬೀಜ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ. ಮಳೆಗೆ ಬ್ರೇಕ್‌ ಸರಿಯಾಗಿ ಕಾರ್ಯನಿರ್ವಹಿಸದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆಸಂಭವಿಸಿದೆ. ಇದಕ್ಕೂ ಮುನ್ನ ಕಾಪು ಭಾಗದಲ್ಲಿ ಸುರಿದ ಭಾರೀ ಮಳೆಗೆ ಸಂಚರಿಸುತ್ತಿದ್ದ ಆಟೋರಿಕ್ಷಾದ ಮೇಲೆ ಬೃಹತ್‌ ಗಾತ್ರದ ಮರ ಬಿದ್ದು ಸವಾರರಿಬ್ಬರು ಸಾವನ್ನಪ್ಪಿದ ಘಟನೆಯೂ ನಡೆದಿತ್ತು.

ಎಚ್ಚರಿಕೆ ಅಗತ್ಯ
ವಾಹನಗಳಿಂದ ಸುರಿದ ದ್ರವವಸ್ತುಗಳು ಬಿಸಿಲಿಗೆ ರಸ್ತೆಯಲ್ಲಿ ಗಟ್ಟಿಯಾಗಿದ್ದರೂ ಮಳೆಬಂದಾಗ ಎಣ್ಣೆಯ ಅಂಶಗಳು ಚದುರಲ್ಪಡುತ್ತವೆ. ಈ ವೇಳೆ ವಾಹನಸವಾರರು ತುಸು ಬ್ರೇಕ್‌ ಹಾಕಿದರೂ ಸ್ಕಿಡ್‌ ಆಗಿ ಬೀಳುವ ಸಂಭವವೇ ಅಧಿಕವಾಗಿರುತ್ತದೆ. ಇದು ದ್ವಿಚಕ್ರ ವಾಹನ ಮಾತ್ರವಲ್ಲದೆ ಘನ ವಾಹನಗಳ ಮೇಲೂ ಪರಿಣಾಮ ಬೀರುತ್ತದೆ. ಈ ಕಾರಣಕ್ಕೆ ನಿಧಾನಗತಿಯಲ್ಲಿ ಚಲಿಸುವುದೇ ಉತ್ತಮ.

ಗುಂಡಿಗಳ ಬಗ್ಗೆ ಎಚ್ಚರವಿರಲಿ
ರಸ್ತೆ ಗುಂಡಿಗಳಲ್ಲಿ ನೀರು ನಿಂತು ಸವಾರರಿಗೆ ಕಾಣದಂತಿರುತ್ತದೆ. ಇದು ಬೃಹತ್‌ ಗಾತ್ರದ ಹೊಂಡವೂ ಆಗಿರಬಹುದು. ದಿನನಿತ್ಯ ಅದೇ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಇದರ ಅರಿವಿದ್ದರೂ ಬೇರೆ ರಸ್ತೆಗಳಲ್ಲಿ ಸಂಚರಿಸಿದಾಗ ನೀರು ತುಂಬಿರುವೆಡೆ ಸಂಚಾರ ಮಾಡುವಾಗ ಬಹಳಷ್ಟು ಜಾಗರೂಕರಾಗಿರಬೇಕು.

ಮರದಡಿ ವಾಹನ ನಿಲುಗಡೆ ಬೇಡ
ಬೇಸಗೆ ಕಾಲದಲ್ಲಿ ನೆರಳಿನ ಆಶ್ರಯಕ್ಕಾಗಿ ಮರದಿಡಿ ವಾಹನ ನಿಲುಗಡೆ ಮಾಡುಲು ಅಭ್ಯಾಸವನ್ನು ಹಲವಾರು ಮಂದಿ ಹೊಂದಿದ್ದರು. ಆದರೆ ಮಳೆಗಾಲಕ್ಕೂ ಇದನ್ನೇ ಮುಂದುವರಿಸಿದರೆ ಅಪಾಯ ಖಚಿತ. ಮರದ ಗೆಲ್ಲುಗಳು ಬಿದ್ದು ವಾಹನಕ್ಕೆ ಹಾನಿಯಾಗುವ ಸಂಭವವೇ ಅಧಿಕವಾಗಿರುತ್ತವೆ.

ಶಿಥಿಲಾವಸ್ಥೆಯಲ್ಲಿರುವ ಮರಗಳು ಬುಡ ಸಹಿತ ಬೀಳುವ ಘಟನೆಗಳೂ ನಡೆದಿವೆ. ಈ ಕಾರಣಕ್ಕೆ ಮರದ ಕೆಳಭಾಗ ಹಾಗೂ ವಿದ್ಯುತ್‌ ತಂತಿಗಳು, ಕಂಬಗಳು ಇರುವಲ್ಲಿ ವಾಹನ ನಿಲ್ಲಿಸದಿರುವುದೇ ಒಳಿತು.

ಟಾಪ್ ನ್ಯೂಸ್

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ

hebbalkar1

Janata Darshan: ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು: ಹೆಬ್ಬಾಳ್ಕರ್

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

BJP FLAG 1

BJP: ಈ ವಾರವೇ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.