ಕ್ವಾರಂಟೈನ್ ನಿಂದ ಬಂದ ದಂಪತಿಗೆ ಸೋಂಕು ದೃಢ: ಮುಂಡ್ಕೂರು ಶಾಲೆ ಬಳಿ ಸೀಲ್ ಡೌನ್
Team Udayavani, Jun 8, 2020, 2:33 PM IST
ಬೆಳ್ಮಣ್: ಅನ್ಯರಾಜ್ಯದಿಂದ ಆಗಮಿಸಿ ಕ್ವಾರಂಟೈನ್ ನಲ್ಲಿದ್ದು ಮನೆಗೆ ಆಗಮಿಸಿದ್ದ ದಂಪತಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಮುಂಡ್ಕೂರು ಪ್ರಾಥಮಿಕ ಶಾಲೆಯ ಬಳಿಯ ಅವರ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ.
ಈ ದಂಪತಿಯು ಉಳಿದ ಆರು ಮಂದಿ ಸಂಬಂಧಿಕರೊಂದಿಗೆ ಕಾಪುವಿನಲ್ಲಿ ಒಂಬತ್ತು ದಿನ ಕ್ವಾರಂಟೈನ್ ನಲ್ಲಿದ್ದರು. ನಂತರ ಮನೆಗೆ ಆಗಮಿಸಿದ್ದು, ಮೂರು ದಿನಗಳ ಹಿಂದೆಯೇ ಕೋವಿಡ್ ಪಾಸಿಟಿವ್ ಬಂದಿತ್ತು. ಆದರೆ ಇವರು ನಂದಿಕೂರಿನ ಸಂಬಂಧಿಗಳ ಮನೆಯ ವಿಳಾಸ ನೀಡಿದ್ದ ಕಾರಣ ಅಧಿಕಾರಿಗಳು ಇವರನ್ನು ಸಂಪರ್ಕಿಸಲಾಗಿರಲಿಲ್ಲ.
ದಂಪತಿಗೆ ಅನಾರೋಗ್ಯ ಕಂಡುಬಂದ ಹಿನ್ನಲೆಯಲ್ಲಿ ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಿದ ನಂತರ ಇವರನ್ನು ರವಿವಾರ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಇವರ ನಿವಾಸದ ಬಳಿ ಸೀಲ್ ಡೌನ್ ಮಾಡಿದ್ದು, ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಕಾರ್ಕಳ ಕಂದಾಯ ಅಧಿಕಾರಿ ಗುರುಪ್ರಸಾದ್, ಮುಂಡ್ಕೂರು ಪಿಡಿಒ ರವಿರಾಜ್, ಸಚ್ಚೇರಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ
ಮದುವೆ ಹಾಲ್ನಲ್ಲಿ ಕಣ್ಮರೆಯಾದ ಚಿನ್ನದ ಸರ ದೈವ ಸನ್ನಿಧಿಯಲ್ಲಿ ಪತ್ತೆ!
ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ: ಶೋಭಾ ಕರಂದ್ಲಾಜೆ
ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಉಜ್ವಲ ಭವಿಷ್ಯಕ್ಕಾಗಿ T.A.T
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು
ತರಗತಿ, ಲೈಬ್ರೆರಿಗೆ ಹಿಜಾಬ್ ನಿಷಿದ್ಧ; ಮಂಗಳೂರು ವಿ.ವಿ. ಕಾಲೇಜಿನ ಸಮಿತಿಯಿಂದ ನಿರ್ಧಾರ
ಶಿಶಿಲ: ದೇವರ ಮೀನುಗಳಿಗೆ ನೀರುನಾಯಿ ಕಾಟ; ಭಕ್ತರಿಗೆ ಆತಂಕ; ಅರಣ್ಯ ಇಲಾಖೆಗೆ ಉಭಯ ಸಂಕಟ !