ಹಿರಿಯ ಭಾಷಾ ವಿಜ್ಞಾನಿ ಡಾ. ಯು.ಪಿ. ಉಪಾಧ್ಯಾಯರಿಗೆ ಗ್ರಾಮಸ್ಥರಿಂದ ನುಡಿನಮನ

Team Udayavani, Aug 6, 2020, 10:00 AM IST

ಹಿರಿಯ ಭಾಷಾ ವಿಜ್ಞಾನಿ ಡಾ. ಯು.ಪಿ. ಉಪಾಧ್ಯಾಯರಿಗೆ ಗ್ರಾಮಸ್ಥರಿಂದ ನುಡಿನಮನ

ಕಾಪು: ಇತ್ತೀಚೆಗೆ ಅಗಲಿದ ಹಿರಿಯ ಭಾಷಾ ವಿಜ್ಞಾನಿ, ಜಾನಪದ ವಿದ್ವಾಂಸ, ಹಿರಿಯ ಸಂಶೋಧಕರಾದ ಡಾ. ಯು. ಪಿ. ಉಪಾಧ್ಯಾಯ ಅವರ ಸಾರ್ವಜನಿಕ ಸಂಸ್ಮರಣೆ ಮತ್ತು ಶ್ರದ್ಧಾಂಜಲಿ ಸಮರ್ಪಣಾ ಕಾರ್ಯಕ್ರಮವು ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.4 ರಂದು ನಡೆಯಿತು.

ಜಾನಪದ ಸಂಶೋಧಕ ಕೆ.ಎಲ್. ಕುಂಡಂತಾಯ ಮಾತನಾಡಿ, ಡಾ. ಯು.ಪಿ. ಉಪಾಧ್ಯಾಯ ಅವರ ಬದುಕು ಸರ್ವರಿಗೂ ಅನುಕರಣೀ ಯವಾಗುವಂತದ್ದಾಗಿದೆ. ವೇದಾಧ್ಯಯನದ ಮೂಲಕ ಪ್ರಾರಂಭಗೊಂಡ ಅವರ ಜೀವನವು ಸಾಹಿತ್ಯ, ಜನಪದ, ಭಾಷೆ, ಸಂಸ್ಕೃತಿ, ಸಂಸ್ಕಾರಗಳ ಪ್ರತಿರೂಪವಾಗಿತ್ತು. ತುಳು‌ ನಿಘಂಟುಗಾರರರಾಗಿ ಮಹೋಪಾಧ್ಯಾಯರಾಗಿ ಗುರುತಿಸಿಕೊಂಡಿದ್ದ ಅವರು ಅಸಂಖ್ಯಾತ ಶಿಷ್ಯಂದಿರ ನೆಚ್ಚಿನ ಗುರುಗಳಾಗಿದ್ದು ತಾವು ನಡೆಸಿದ ಅಧ್ಯಯನದ ಜೀವನವನ್ನು ತಲೆ ತಲಾಂತರದವರೆಗೂ ಉಳಿಸಿಕೊಡುವ ಪ್ರಯತ್ನ ಮಾಡಿದ್ದಾರೆ. ಈ ಕಾರಣದಿಂದ ಅವರು ಎಲ್ಲರಿಗೂ ಸದಾ ಪ್ರಾತ:ಸ್ಮರಣೀಯರು ಎಂದರು.

ನುಡಿನಮನ ಸಲ್ಲಿಸಿದ ಲೇಖಕಿ ಕಾತ್ಯಾಯಿನಿ ಕುಂಜಿಬೆಟ್ಟು ಮಾತನಾಡಿ, ಡಾ. ಯು.ಪಿ. ಉಪಾಧ್ಯಾಯ ಮತ್ತು ಡಾ. ಸುಶೀಲಾ ಉಪಾಧ್ಯಾಯ ದಂಪತಿಯ ಸರಳ ಜೀವನ ಶೈಲಿ ಎಲ್ಲರಿಗೂ ಸದಾ ಅನುಕರಣೀಯವಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಜೊತೆಗೂಡಿ ಕೆಲಸ ಮಾಡಿದ ಅವರು ಭಾಷೆ, ಸಂಸ್ಕೃತಿ ಮತ್ತು ಜಾನಪದ ಕ್ಷೇತ್ರದ ಕೆಲಸವನ್ನು ತನ್ನ ಸ್ವಂತ ಕೆಲಸವೆಂಬಂತೆಯೇ ಅನುಭವಿಸುತ್ತಿದ್ದರು. ಬದುಕಲು ಬೇಕು ಶಿಕ್ಷಣ, ಬಾಳಲು ಬೇಕು ಸಂಸ್ಕೃತಿ ಎಂಬ ದ.ರಾ. ಬೇಂದ್ರೆಯವರ ಮಾತಿಗೆ ಅನ್ವರ್ಥವಾಗುವಂತೆ ಬದುಕಿದ ಉಪಾಧ್ಯಾಯ ಅವರು ಕೇವಲ ಹೊಟ್ಟೆಪಾಡಿಗಾಗಿ ಸಾಹಿತ್ಯ, ಜನಪದ, ಸಂಸ್ಕೃತಿ ಮತ್ತು ಭಾಷಾ ಪ್ರೀತಿಯನ್ನು ತೋರಿದ್ದಲ್ಲ. ಬದಲಾಗಿ ಅವುಗಳನ್ನು ಸಮಾಜದ ಮುಂದೆ ತೆರೆದಿಡಬೇಕು, ಮುಂದಿನ ಪೀಳಿಗೆಗೂ ಉಳಿಸಿಕೊಡಬೇಕೆಂಬ ಕಲ್ಪನೆಯೊಂದಿಗೆ ಅವರು ಕ್ಷೇತ್ರ ಕಾರ್ಯ ನಡೆಸಿದ್ದರು ಎಂದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಸರಳ ವ್ಯಕ್ತಿತ್ವದ ಉಪಾಧ್ಯಾಯ ದಂಪತಿ ಅವರು ತುಳುನಾಡಿನ‌ ನಿಜಾರ್ಥದ ಸಂಪತ್ತು. ಅಪಾರ ಜ್ಞಾನ ಭಂಡಾರವನ್ನು ಹೊಂದಿದ್ದ ಅವರು ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕವಾಗಿ ತುಳು ನಿಘಂಟುಗಾರರಾಗಿ ಇಡೀ ವಿಶ್ವಕ್ಕೆ ತುಳುವನ್ನು ಪರಿಚಯಿಸಿಕೊಟ್ಟ ಪ್ರಸಿದ್ಧಿಗೆ ಪಾತ್ರರಾಗಿದ್ದಾರೆ. ಅವರ ಅಕಾಲಿಕ ಅಗಲುವಿಕೆ ಇಡೀ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ನಿರಂತರ ಅಧ್ಯಯನಶೀಲರಾಗಿದ್ದ ಡಾ. ಯು. ಪಿ ಉಪಾಧ್ಯಾಯ ಅವರ ನಿಧನ ಕರಾವಳಿಗೆ ಬಲು ದೊಡ್ಡ ನಷ್ಟವನ್ನುಂಟು ಮಾಡಿದೆ. ಕೈಯ್ಯಾಡಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆಯ ತುತ್ತತುದಿಯನ್ನು ಏರಿದ್ದಾರೆ. ಇಂತಹ ಮೇರು ವ್ಯಕ್ತಿತ್ವದ ಸಾಧಕರ ನೆನಪನ್ನು ಮುಂದಿನ ಪೀಳಿಗೆಯವರೆಗೂ ಗುರುತಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಧರಣಿ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಲೀಲಾಧರ ಶೆಟ್ಟಿ  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಧರಣಿ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಲೀಲಾಧರ ಶೆಟ್ಟಿ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ ಕರಂದಾಡಿ ಕಾರ್ಯಕ್ರಮ ನಿರೂಪಿಸಿದರು. ನಾಗಭೂಷಣ್ ರಾವ್ ವಂದಿಸಿದರು.

ಟಾಪ್ ನ್ಯೂಸ್

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.