ಕಂದಾಯ ಕಡತ ವಿಲೇವಾರಿ: ಹೆಬ್ರಿ ತಾಲೂಕು ರಾಜ್ಯಕ್ಕೆ ಪ್ರಥಮ
Team Udayavani, Nov 13, 2020, 1:03 AM IST
ಹೆಬ್ರಿ: ಭೂಮಿ ಯೋಜನೆಯಡಿ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಶೀಘ್ರ ವಿಲೇವಾರಿ ಮಾಡುವು ದರಲ್ಲಿ ಹೆಬ್ರಿ ತಾಲೂಕು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ನ. 11ರಂದು ಹೆಬ್ರಿ ತಹಶಿಲ್ದಾರ್ ಕೆ. ಮಹೇಶ್ಚಂದ್ರ ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿದರು. ಈ ಹಿಂದೆಯೂ ಹೆಬ್ರಿ ತಾಲೂಕು ಕಡತ ವಿಲೇವಾರಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮೊದಲ ಸ್ಥಾನದೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿತ್ತು.
ಹಿಂದೆ ಕಂದಾಯ ನೀರಿಕ್ಷರಾಗಿದ್ದ ಮಂಜುನಾಥ ನಾಯಕ್ ಹಾಗೂ ತಾಲೂಕು ಕಚೇರಿಯ ಸಿಬಂದಿಯ ವಿಶೇಷ ಸಹಕಾರದಿಂದ ಹೆಬ್ರಿ ತಾಲೂಕು ರಾಜ್ಯದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದು ತಹಶೀಲ್ದಾರ್ ಕೆ. ಮಹೇಶ್ಚಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ