Shirva ಸಮುದಾಯ ಆರೋಗ್ಯ ಕೇಂದ್ರ 24 x 7ಆರೋಗ್ಯ ಸೇವೆ; ಬಹುಕಾಲದ ಕನಸು ನನಸು


Team Udayavani, Aug 5, 2023, 10:16 AM IST

3-shirva

ಶಿರ್ವ: ಕಾಪು ತಾಲೂಕಿನ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಕಲ ಸೌಲಭ್ಯಗಳಿದ್ದು, ಆ. 1 ರಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಸಂಜೆ ಮತ್ತು ರಾತ್ರಿ ಇಬ್ಬರು ವೈದ್ಯರು ಸೇವೆ ನೀಡುತ್ತಿದ್ದು, ದಿನದ 24 ಗಂಟೆಗಳ ಕಾಲ ವೈದ್ಯಕೀಯ ಸೇವೆ ಪ್ರಾರಂಭಗೊಂಡಿದೆ.

ಗ್ರಾಮೀಣ ಭಾಗದ ಸರ್ವಸುಸಜ್ಜಿತ ಆಸ್ಪತ್ರೆಯಲ್ಲಿ 5 ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುಮಾರು 50 ಸಾವಿರ ಜನರಿಗೆ ಪ್ರಯೋಜನವಾಗಲಿದ್ದು, ಪರಿಸರದ ಜನರ ಬಹುಕಾಲದ ಕನಸು ನನಸಾಗುತ್ತಿದೆ.

ಈ ಆರೋಗ್ಯ ಕೇಂದ್ರವು ಮೇಲ್ದರ್ಜೆಗೇರಿ 22ವರ್ಷಗಳೇ ಕಳೆದಿದ್ದರೂ ಈವರೆಗೆ ದಿನದ 24 ಗಂಟೆಗಳ ಸೇವೆ ಲಭ್ಯವಿರಲಿಲ್ಲ. ದಿನವೊಂದಕ್ಕೆ 100ಕ್ಕೂ ಹೆಚ್ಚು ರೋಗಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಆರೋಗ್ಯ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಜತೆಗೆ ಎಲ್ಲಾ ಸೌಲಭ್ಯಗಳಿವೆ.

ಇದೀಗ ತುರ್ತು ಚಿಕಿತ್ಸೆಗಾಗಿ ಸಂಜೆ ಮತ್ತು ರಾತ್ರಿ ಓರ್ವ ಗೃಹವೈದ್ಯರು ಮತ್ತು ಓರ್ವ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿ ಹಾಗೂ 2 ನರ್ಸ್‌ಗಳು ಸೇವೆ ನೀಡುತ್ತಿದ್ದಾರೆ. ಶಿರ್ವ ಪರಿಸರದ ನಾಗರಿಕರ ಬಹುಕಾಲದ ಬೇಡಿಕೆ  ಈಡೇರಿದ್ದು, ದಿನದ 24 ಗಂಟೆಯ ವೈದ್ಯಕೀಯ ಸೇವೆ ಲಭ್ಯವಾಗಲಿದೆ.

ತುರ್ತು ಸಮಸ್ಯೆಗೆ ಮುಕ್ತಿ

ಶಿರ್ವ ಸಮುದಾಯ ಆರೋಗ್ಯ ಕೇಂದ್ರವು 30 ಹಾಸಿಗೆಗಳ ಆಸ್ಪತ್ರೆಯಾಗಿದ್ದು, ಹೊರರೋಗಿಗಳು ಮತ್ತು ಒಳರೋಗಿಗಳ ವಿಭಾಗ ಹೊಂದಿದೆ. ಹಿರಿಯ ನಾಗರಿಕರಿಗೆ, ಬಿ.ಪಿ.ಸಕ್ಕರೆ ಕಾಯಿಲೆ ರೋಗಿಗಳಿಗೆ ಬೇಕಾದ ಚಿಕಿತ್ಸೆಗೆ ಎನ್‌ಸಿಡಿ ವಿಭಾಗವಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಹಗಲು ಕಚೇರಿ ವೇಳೆೆಯಲ್ಲಿ ಮಣಿಪಾಲದ ಕೆಎಂಸಿ ವೈದ್ಯರ ತಂಡ ಬಂದು ಜನರಲ್‌ ಮೆಡಿಸಿನ್‌ ಚಿಕಿತ್ಸೆ ನೀಡುತ್ತಿದೆ. ಸಂಜೆ 5ರ ಬಳಿಕ ವೈದ್ಯರಿಲ್ಲದೆ ರೋಗಿಗಳಿಗೆ ಚಿಕಿತ್ಸೆ ದುರ್ಲಭವಾಗಿತ್ತು. ಕಚೇರಿ ಸಮಯ ಹೊರತುಪಡಿಸಿ ರಾತ್ರಿ ಹೊತ್ತು,ರವಿವಾರ ಅಥವಾ ಅಪಘಾತ ಯಾ ತುರ್ತು ಚಿಕಿತ್ಸೆಗೆ ಆಸ್ಪತ್ರೆಗೆ ಬಂದರೆ ವೈದ್ಯರಿಲ್ಲದೆ ರೋಗಿಗಳು ಪರದಾಡುವಂತಾಗಿತ್ತು. ಇದೀಗ ತುರ್ತು ಚಿಕಿತ್ಸೆಯ ಸಮಸ್ಯೆಗೆ ಮುಕ್ತಿ ದೊರೆತಂತಾಗಿದೆ.

ತಜ್ಞ ವೈದ್ಯರ ಹುದ್ದೆ ಖಾಲಿ

ಸ್ತ್ರೀರೋಗ ತಜ್ಞರು,ಮಕ್ಕಳ ತಜ್ಞರ ಹುದ್ದೆ ಖಾಲಿಯಿದೆ. ತಜ್ಞ ವೈದ್ಯರ ಕೊರತೆಯಿಂದ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ನೀಡಲು ಹಿನ್ನಡೆಯಾಗಿದೆ. ಓರ್ವ ವೈದ್ಯರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಸ್ಪತ್ರೆಗೆ ಹೆಚ್ಚುವರಿ ಕರ್ತವ್ಯಕ್ಕೆ ಉಡುಪಿಯಲ್ಲಿ ನಿಯೋಜನೆಗೊಂಡಿದ್ದು, ಅವರ ಸೇವೆ ಲಭ್ಯವಾದಲ್ಲಿ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ. ಶಿರ್ವ ಸುತ್ತಮುತ್ತ ಖಾಸಗಿ ಮಕ್ಕಳ ತಜ್ಞರು ಇಲ್ಲ. ಆದ್ದರಿಂದ ತೀರಾ ಅಗತ್ಯವಿರುವ ಮಕ್ಕಳ ತಜ್ಞರ ಕೊರತೆ ಹಲವಾರು ವರ್ಷಗಳಿಂದ ಕೇಳಿಬರುತ್ತಿದ್ದು,ಮಕ್ಕಳ ಆರೋಗ್ಯದಲ್ಲಿ ಏರುಪೇರಾದರೆ, ಉಡುಪಿ ಯಾ ಮಣಿಪಾಲದ ಆಸ್ಪತ್ರೆಯನ್ನು ಅವಲಂಬಿಸಬೇಕಾದ ಅನಿವಾರ್ಯತೆಯಿದೆ.

ಕೇಂದ್ರದಲ್ಲಿ ನೂತನವಾಗಿ ನಿರ್ಮಾಣಗೊಂಡ ಆಕ್ಸಿಜನ್‌ ಘಟಕ,ಸುಸಜ್ಜಿತ ಪ್ರಯೋಗಾಲಯ,ಎಕ್ಸ್‌ರೇ ವಿಭಾಗ,ದಂತ ಚಿಕಿತ್ಸಾ ವಿಭಾಗ,ಕ್ಯಾನ್ಸರ್‌ ವಿಭಾಗವಿದ್ದು ಟೆಕ್ನಿಶಿಯನ್‌ಗಳು ಇದ್ದಾರೆ. ದಾನಿಗಳ ಸಹಕಾರದಿಂದ 25 ಕೆವಿಎ ಜನರೇಟರ್‌ ಸೌಲಭ್ಯ ಕಲ್ಪಿಸಲಾಗಿದೆ. ಅಂಬುಲೆನ್ಸ್‌ ಸೇವೆಯೂ ಇದ್ದು ಚಾಲಕರಿದ್ದಾರೆ.

ಬೇಕಿದೆ ಶೀತಲೀಕೃತ ಶವಾಗಾರ

ಶಿರ್ವ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನವರು ವಿದೇಶಗಳಲ್ಲಿ ಇದ್ದಾರೆ.ತುರ್ತು ಸಂದರ್ಭಗಳಲ್ಲಿ ಶೀತಲೀಕೃತ ಶವಾಗಾರಕ್ಕಾಗಿ ದೂರದ ಉಡುಪಿ, ಮಣಿಪಾಲ,ಕಾರ್ಕಳದ ಶವಾಗಾರವನ್ನು ಆಶ್ರಯಿಸಬೇಕಾಗಿದೆ. ಈ ಕೊರತೆಯನ್ನು ನೀಗಿಸಲು ಸರಕಾರ, ಜನಪ್ರತಿನಿಧಿಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮನಸ್ಸು ಮಾಡಬೇಕಿದೆ.

ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೇಲಾಧಿಕಾರಿಗಳ ಮತ್ತು ಮಣಿಪಾಲ ಕೆಎಂಸಿ ಆಸ್ಪತ್ರೆಯ ಸಹಭಾಗಿತ್ವದಲ್ಲಿ ರೋಗಿಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಖಾಲಿಯಿರುವ ತಜ್ಞ ವೈದ್ಯರು ಮತ್ತು ಸಿಬಂದಿಗಳ ನೇಮಕವಾಗಬೇಕಿದೆ. ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಉತ್ತಮ ಸಹಕಾರ ನೀಡುತ್ತಿದ್ದು, ಸ್ವಯಂ ಸೇವಾ ಸಂಸ್ಥೆಗಳು ಸಹಕರಿಸಿದಲ್ಲಿ ಇನ್ನೂ ಹೆಚ್ಚಿನ ಉತ್ತಮ ಸೇವೆ ನೀಡಬಹುದಾಗಿದೆ. –ಆಡಳಿತ ವೈದ್ಯಾಧಿಕಾರಿಗಳು, ಶಿರ್ವ ಸಮುದಾಯ ಆರೋಗ್ಯ ಕೇಂದ್ರ.

-ಸತೀಶ್ಚಂದ್ರ ಶೆಟ್ಟಿ, ಶಿರ್ವ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.