ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ


Team Udayavani, Dec 14, 2022, 9:36 AM IST

3

ಶಿರ್ವ: ತುಳುನಾಡಿನ ಧಾರ್ಮಿಕ ಆಚರಣೆಗಳ ಹಿನ್ನೆಲೆಯಿರುವ 27ನೇ ವರ್ಷದ ಐತಿಹಾಸಿಕ ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಸಂಪ್ರದಾಯಬದ್ಧ ಜೋಡುಕರೆ ಕಂಬಳವು ಡಿ.13 ರಂದು ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು.

ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕೇ¤ಸರ ಎಲ್ಲೂರುಗುತ್ತು ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ ಜೋಡುಕರೆಗೆ ಕಾಯಿ ಒಡೆಯುವುದರ ಮೂಲಕ ಕಂಬಳವನ್ನು ಉದ್ಘಾಟಿಸಿದರು.

ಧಾರ್ಮಿಕ ಹಿನ್ನೆಲೆಯನ್ನು ಹೊಂದಿರುವ ಶಿರ್ವ ನಡಿಬೆಟ್ಟು ಕಂಬಳವು ನಡಿಬೆಟ್ಟು ಚಾವಡಿಯ ದೈವ ಜುಮಾದಿಗೆ ಪೂಜೆ ಪುರಸ್ಕಾರ ನಡೆದ ಬಳಿಕ ಬಂಟ ಕೋಲ ನಡೆದು ಮೆರವಣಿಗೆಯಲ್ಲಿ ಕೊಂಬು, ವಾದ್ಯಘೋಷಗಳೊಂದಿಗೆ ಮನೆಯ ಕೋಣಗಳನ್ನು ಗದ್ದೆಗಿಳಿಸಲಾಯಿತು.

ಹಗ್ಗ ಕಿರಿಯ ವಿಭಾಗದಲ್ಲಿ 30 ಜತೆ ಕೋಣಗಳು ಮತ್ತು ಸಬ್‌ಜೂನಿಯರ್‌ ವಿಭಾಗದಲ್ಲಿ 48 ಜತೆ ಒಟ್ಟು 78 ಜತೆ ಕೋಣಗಳು ಕಂಬಳದಲ್ಲಿ ಭಾಗವಹಿಸಿದ್ದವು. ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನಗೊಂಡಿತು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉದ್ಯಮಿ ಸುರೇಶ್‌ ಶೆಟ್ಟಿ ಗುರ್ಮೆ, ಶಿರ್ವ ಗ್ರಾ.ಪಂ. ಅಧ್ಯಕ್ಷ ರತನ್‌ ಕುಮಾರ್‌ ಶೆಟ್ಟಿ, ಮಾಜಿ ಅಧ್ಯಕ್ಷ ಕೆ.ಆರ್‌. ಪಾಟ್ಕರ್‌, ಪಿಲಾರು ಸುಧಾಕರ ಭಂಡ್ರಿಯಾಲ್‌, ಅಟ್ಟಿಂಜ ಶಂಭು ಶೆಟ್ಟಿ, ಸಚ್ಚಿದಾನಂದ ಹೆಗ್ಡೆ, ಸುಂದರ ಶೆಟ್ಟಿ, ಕಾನಬೆಟ್ಟು ಬಡ್ಡು ಪೂಜಾರಿ, ಗ್ರಾ.ಪಂ. ಸದಸ್ಯ ಪ್ರವೀಣ್‌ ಸಾಲಿಯಾನ್‌, ರಾಜೇಶ್‌ ನಾಯ್ಕ, ವಿಟ್ಠಲ ಅಂಚನ್‌, ತಮ್ಮಣ್ಣ ಪೂಜಾರಿ, ರತ್ನವರ್ಮ ಹೆಗ್ಡೆ, ರಘುರಾಮ ನಾಯ್ಕ, ಮೊದಲಾದವರು ಉಪಸ್ಥಿತರಿದ್ದರು.

ಶಿರ್ವ ನಡಿಬೆಟ್ಟು ಮನೆತನದ ಯಜಮಾನ ದಾಮೋದರ ಚೌಟ ಅವರ ಮುಂದಾಳತ್ವದಲ್ಲಿ ವ್ಯವಸ್ಥಾಪಕ ಶಿರ್ವ ನಡಿಬೆಟ್ಟು ಶಶಿಧರ ಹೆಗ್ಡೆಯವರು ಊರವರ ಸಹಕಾರದೊಂದಿಗೆ ಕಂಬಳ ನಡೆಸಿಕೊಂಡು ಬರುತ್ತಿದ್ದು, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಫಲಿತಾಂಶ

ಹಗ್ಗ ಕಿರಿಯ ವಿಭಾಗದಲ್ಲಿ ನಿಟ್ಟೆ ಪರಪ್ಪಾಡಿ ವಿಹಾನ್‌ ಕೋಟ್ಯಾನ್‌ ಪ್ರಥಮ, ಮಾರ್ಪಳ್ಳಿ ಕಂಬಳಮನೆ ರಾಜೇಶ್‌ ಶೆಟ್ಟಿ ದ್ವಿತೀಯ, ಸಬ್‌ ಜೂನಿಯರ್‌ ವಿಭಾಗದಲ್ಲಿ ಬೈಂದೂರು ತಗ್ಗರ್ಸೆ ನೀಲಕಂಠ ಹುದಾರ್‌ ಪ್ರಥಮ ಮತ್ತು ಭಟ್ಕಳ ಎಚ್‌.ಎನ್‌. ನಿವಾಸ ಪಿನ್ನು ಪಾಲ್‌ ದ್ವಿತೀಯ ಬಹುಮಾನ ಗಳಿಸಿದರು.

ಕನ್ನಡ ಸಂಸ್ಕೃತಿ ಇಲಾಖೆಯ ರಮೇಶ್‌ ದೇವಾಡಿಗ, ಮುತ್ತುರಾಜ್‌, ಶಿರ್ವ ಠಾಣಾಧಿಕಾರಿ ರಾಘವೇಂದ್ರ ಸಿ., ಶಿರ್ವ ಗ್ರಾ.ಪಂ. ಅಧ್ಯಕ್ಷ ರತನ್‌ ಕುಮಾರ್‌ ಶೆಟ್ಟಿ, ಪೊಲೀಸ್‌ ಇಲಾಖೆಯ ಶಶಿಧರ್‌ ಎರಡೂ ವಿಭಾಗಗಳಲ್ಲಿ ಗೆದ್ದ ಕೋಣಗಳ ಮಾಲಕರಿಗೆ ಮತ್ತು ಕೋಣ ಓಡಿಸಿದವರಿಗೆ ಶಾಶ್ವತ ಫಲಕ ಸಹಿತ ನಗದು ಬಹುಮಾನ ನೀಡಿ ಗೌರವಿಸಿದರು.

ಹಿರಿಯರಾದ ಶಿರ್ವ ನಡಿಬೆಟ್ಟು ಸುರೇಂದ್ರ ಹೆಗ್ಡೆ, ಕಿಶೋರ್‌ಚಂದ್ರ ಹೆಗ್ಡೆ, ಚಂದ್ರಶೇಖರ ಹೆಗ್ಡೆ, ಅಟ್ಟಿಂಜೆ ಸುಧೀರ್‌ ಶೆಟ್ಟಿ, ಪ್ರದೀಪ್‌ ಶೆಟ್ಟಿ, ಕುತ್ಯಾರು ಸಾಯಿನಾಥ ಶೆಟ್ಟಿ, ಶಿಕ್ಷಕ ರಿತೇಶ್‌ ಕುಮಾರ್‌ ಶೆಟ್ಟಿ ಮೊದಲಾದವರು ಉಪಸ್ಥಿತ‌ರಿದ್ದರು.

ಸುರೇಂದ್ರ ಪೂಜಾರಿ ಕೊಪ್ಪಲ ನಿರೂಪಿಸಿ, ವಂದಿಸಿದರು. ವೀರೇಂದ್ರ ಪೂಜಾರಿ ಸಹಕರಿಸಿದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.