130 ಗ್ರಾ.ಪಂ.ಗಳಲ್ಲಿ ಸ್ವಾಮಿ ವಿವೇಕಾನಂದ ಯುವಸಂಘ


Team Udayavani, Dec 2, 2022, 8:28 AM IST

2

ಉಡುಪಿ: ಸಂಜೀವಿನಿ ಸಂಘಗಳ ಮೂಲಕ ಗ್ರಾ.ಪಂ. ಹಂತದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ರೂಪಿಸಿ, ಅವರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಟ್ಟಿರುವ ನಿಟ್ಟಿನಲ್ಲೇ ಗ್ರಾ.ಪಂ. ವ್ಯಾಪ್ತಿಯಲ್ಲಿ ಯುವಕರ ಸಂಘಟನೆ ಜತೆಗೆ ಉದ್ಯೋಗಾವಕಾಶಕ್ಕಾಗಿ ಸ್ವಾಮಿ ವಿವೇಕಾನಂದ ಯುವ ಸಂಘ ರಚಿಸಲು ಸರಕಾರ ಕಾರ್ಯಸೂಚಿ ನೀಡಿದೆ.

ಗ್ರಾ.ಪಂ. ಹಂತಗಳಲ್ಲಿ ಸ್ವಾಮಿ ವಿವೇಕಾನಂದ ಯುವಸಂಘಗಳನ್ನು ರಚಿಸಿ, ಆ ಸಂಘಗಳಿಗೆ ಸರಕಾರ ಅನುದಾನ ನೀಡುವ ಯೋಜನೆಗೆ ಜಿಲ್ಲೆಯಲ್ಲಿ 130 ಗ್ರಾ.ಪಂ.ಗಳಲ್ಲಿ ಪ್ರಕ್ರಿಯೆ ಆರಂಭಗೊಂಡಿದೆ.

ಯುವಸಂಘಗಳಿಗೆ ಸರಕಾರದಿಂದ ಪ್ರೋತ್ಸಾಹ ನಿಧಿಗೆ ಸರಕಾರ 10 ಕೋ. ರೂ. ಅನುದಾನವನ್ನು ಬಿಡುಗಡೆಗೊಳಿಸಿದೆ. ಪ್ರತಿ ಸಂಘಕ್ಕೆ 1.5 ಲಕ್ಷ ರೂ.ಗಳಿಂದ 10 ಲಕ್ಷ ರೂ.ವರೆಗೆ ಸಾಲಸೌಲಭ್ಯ ನಿಗದಿಗೊಳಿಸಲಾಗಿದೆ. ಈ ಮೂಲಕ ಯುವಸಂಘಗಳ ಉದ್ದಿಮೆ ಸ್ಥಾಪನೆ, ಜೀವನೋಪಾಯ ಯೋಜನೆಗಳ ಅನುಷ್ಠಾನಕ್ಕೆ ಆರ್ಥಿಕ ನೆರವು ನೀಡಲು ಸರಕಾರ ಮುಂದಾಗಿದೆ.

ಯುವಜನ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಇಲಾಖೆ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳ ಸಹಯೋಗದಲ್ಲಿ ಯೋಜನೆ ಅನು ಷ್ಠಾನಗೊಂಡಿದೆ. ಈ ಸೌಲಭ್ಯಕ್ಕಾಗಿ ಗ್ರಾ.ಪಂ. ಪಿಡಿಒ, ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಂದ ನಮೂನೆಗೆ ಸಹಿ ಪಡೆದು ಅನಂತರದ ಪ್ರಕ್ರಿಯೆಗಳ ಕುರಿತ ಮಾಹಿತಿ ಪಡೆಯಲು ವ್ಯವಸ್ಥೆ ರೂಪಿಸಲಾಗಿದೆ. ಯುವಸಂಘಗಳ ಗುಂಪುಗಳಿಗೆ ಕೌಶಲಾಭಿವೃದ್ಧಿ, ಉದ್ಯಮಶೀಲತೆ ತರಬೇತಿ ಮತ್ತು ಬ್ಯಾಂಕ್‌ ಸಾಲ ಜೋಡಣೆ ಯೋಜನೆ ಸೌಲಭ್ಯವನ್ನು ಆದ್ಯತೆ ಮೇರೆಗೆ ವಿತರಿಸಲಾಗುತ್ತಿದ್ದು, ಯೋಜನೆಯ 500 ಕೋ. ರೂ., ನಲ್ಲಿ 10 ಕೋ. ರೂ. ಅನುದಾನ ಬಿಡುಗಡೆಗೊಂಡಿದೆ.

ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಯಡಿ 18ರಿಂದ 29ರೊಳಗಿನ ವಯೋಮಾನದ 10ರಿಂದ 20 ಯುವಕರ ಗುಂಪಿನ ಸಂಘ ರಚನೆ ಬಳಿಕ ಆರಂಭಿಕ ಹಂತವಾಗಿ 10 ಸಾವಿರ ರೂ. ಸುತ್ತು ನಿಧಿ ನೀಡಲಾಗುತ್ತದೆ. ಈ ಸಂಘದಲ್ಲಿ ಅಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಸಂಘದ ರಚನೆ, ಸಾಲ ಸೌಲಭ್ಯ ಬಳಕೆ ಕುರಿತ ವರದಿ ಸಿದ್ಧಪಡಿಸಲು 6 ತಿಂಗಳ ಕಾಲಾವಕಾಶವಿದೆ. ಬಳಿಕ ಆರ್ಥಿಕ ಚಟುವಟಿಕೆಗಳಿಗೆ ಅನುಗುಣವಾಗಿ ಕನಿಷ್ಠ ಕಂತು ರೂಪದ ಮರುಪಾವತಿಗೆ 5ರಿಂದ 7 ವರ್ಷದವರೆಗೆ ಅವಕಾಶ ನೀಡಲಾಗುತ್ತದೆ.

ಯೋಜನೆ ಹೇಗೆ ಸಹಕಾರಿ?

ಗ್ರಾ.ಪಂ. ವ್ಯಾಪ್ತಿ ಯುವ ಸಂಘಗಳು ಯೋಜನೆಯನ್ನು ವ್ಯವಸ್ಥಿತವಾಗಿ ಬಳಸಿಕೊಂಡಲ್ಲಿ ಸ್ವೋದ್ಯೋಗ, ಉದ್ಯಮದ ಮೂಲಕ ಜೀವನೋಪಾಯಕ್ಕೆ ಅನುಕೂಲ. ಸ್ಥಳೀಯ ಮಟ್ಟದ ಯುವಕರ ಸ್ಟಾರ್ಟ್‌ಅಪ್‌ ಗಳಿಗೆ ಆರ್ಥಿಕ ನೆರವು. ಸ್ಥಳೀಯ ಮಟ್ಟದಲ್ಲಿ ಯೋಜನೆ ಬಗ್ಗೆ ಗ್ರಾ.ಪಂ. ಮೂಲಕ ಅರಿವು ಮೂಡಿಸಲಾಗುತ್ತಿದೆ. ನಿರುದ್ಯೋಗಿ ಯುವಕರು, ಉದ್ದಿಮೆ ಸ್ಥಾಪನೆಯತ್ತ ಆಸಕ್ತ ಗುಂಪುಗಳನ್ನು ರಚಿಸಲು ಮುಂದಾಗುವಂತೆ ಪ್ರೇರೇಪಿಸಲಾಗುತ್ತಿದೆ. ಈ ಯೋಜನೆಯಡಿ ಯುವ ಜನರಿಗೆ ಗುಂಪು ಆಧಾರಿತ ಆರ್ಥಿಕ ಚಟುವಟಿಕೆ ಮೂಲಕ ಸ್ವಯಂ ಉದ್ಯೋಗ ಕಲ್ಪಿಸಲು ಬ್ಯಾಂಕ್‌ ಮೂಲಕ ಸಾಲಸೌಲಭ್ಯ ನೆರವಾಗಲಿದೆ ಎನ್ನುತ್ತಾರೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್‌ ಶೆಟ್ಟಿ.

ಉತ್ತೇಜನ ಕಾರ್ಯ: ಗ್ರಾ.ಪಂ.ಗಳಲ್ಲಿ ಸಂಜೀವಿನಿ ಸಂಘಗಳ ಮಾದರಿಯಲ್ಲೇ ಯುವಕರ ಸ್ವ-ಸಹಾಯ ಸಂಘಗಳನ್ನು ರಚನೆ ಮಾಡಲಾಗುವುದು. ಸೊÌàದ್ಯೋಗ ಸಹಿತ ಸರಕಾರದ ವಿವಿಧ ಪ್ರೋತ್ಸಾಹಕ ಯೋಜನೆಯಡಿ ಈ ಯುವಕ ಸಂಘಗಳಿಗೆ ಉತ್ತೇಜನ ನೀಡಲಾಗುತ್ತದೆ. – ಪ್ರಸನ್ನ ಎಚ್‌., ಸಿಇಒ, ಜಿ.ಪಂ., ಉಡುಪಿ

-ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.