ಉದ್ಯಾವರ ಸೇತುವೆಗೆ ಢಿಕ್ಕಿ ಹೊಡೆದ ಕೆಎಸ್ ಆರ್ ಟಿಸಿ ಬಸ್ಸು: ಹಲವರಿಗೆ ಗಾಯ
Team Udayavani, May 29, 2020, 2:46 PM IST
ಕಾಪು: ಮಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ಸೊಂದು ಸೇತುವಿಗೆ ಢಿಕ್ಕಿ ಹೊಡೆದ ಕಾರಣ ಹಲವು ಗಾಯಗೊಂದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ.
ಘಟನೆಯಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘
ಸರ್ಕಾರಿ ಬಸ್ಸು ಮಂಗಳೂರಿನಿಂದ ಬೆಳಗಾವಿ ಕಡೆಗೆ ಹೊರಟಿತ್ತು. ಆದರೆ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಉದ್ಯಾವರ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.