
ಕೋವಿಡ್-19: ಉಡುಪಿ ದೊಡ್ಡಣಗುಡ್ಡೆಯಲ್ಲಿ ಮನೆ ಸೀಲ್ ಡೌನ್
Team Udayavani, Jun 5, 2020, 10:52 AM IST

ಉಡುಪಿ: ಮಹಾರಾಷ್ಟ್ರದಿಂದ ಆಗಮಿಸಿ ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ಮರಳಿದ್ದ ಇಬ್ಬರಲ್ಲಿ ಕೋವಿಡ್-19 ಸೋಂಕು ದೃಢವಾದ ಹಿನ್ನಲೆಯಲ್ಲಿ ಇಲ್ಲಿನ ದೊಡ್ಡಣಗುಡ್ಡೆಯನೇಕಾರರ ಕಾಲೊನಿಯ ಬಳಿಯ ಮನೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ.
ಇವರಿಬ್ಬರು ಮುಂಬೈನಿಂದ ಬಂದು ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದರು. ನಂತರ ಅವರು ದೊಡ್ಡಣಗುಡ್ಡೆಯ ಮನೆಗೆ ಬಂದಿದ್ದರು. ಸದ್ಯ ಅವರ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಸದ್ಯ ಇಬ್ಬರನ್ನೂ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅದಲ್ಲದೆ ದೊಡ್ಡಣಗುಡ್ಡೆಯ ನೇಕಾರರ ಕಾಲೊನಿಯ ಬಳಿಯ ಮನೆಯೊಂದನ್ನು ಅನ್ನು ಸೀಲ್ ಡೌನ್ ಮಾಡಲಾಗಿದೆ.
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್-19 ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ತಿಂಗಳ ಹಿಂದೆ ಯಾವುದೇ ಸಕ್ರಿಯ ಸೋಂಕು ಪ್ರಕರಣಗಳು ಇರದಿದ್ದ ಜಿಲ್ಲೆಯಲ್ಲಿ ಈಗ ಕೋವಿಡ್ ಸೋಂಕಿತರ ಸಂಖ್ಯೆ ಐನೂರರ ಗಡಿ ದಾಟಿದೆ. ಸೋಂಕಿತರ ಪಟ್ಟಿಯಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

expose!;ಬಸ್ಸಿನಲ್ಲಿ ಮಹಿಳೆ ಎದುರು ಹಸ್ತಮೈಥುನ ಮಾಡಿದ ಕಾಮುಕನ ಬಂಧನ

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ