Udupi MGM College ground: “ಬಿಲ್ಡ್‌ ಟೆಕ್‌-2024′ ಕಟ್ಟಡ ಸಾಮಗ್ರಿ ಪ್ರದರ್ಶನಕ್ಕೆ ಚಾಲನೆ


Team Udayavani, Feb 24, 2024, 1:04 AM IST

bUdupi MGM College ground: “ಬಿಲ್ಡ್‌ ಟೆಕ್‌-2024′ ಕಟ್ಟಡ ಸಾಮಗ್ರಿ ಪ್ರದರ್ಶನಕ್ಕೆ ಚಾಲನೆ

ಉಡುಪಿ: ಅಸೋಸಿಯೇಶನ್‌ ಆಫ್ ಕನ್ಸಲ್ಟಿಂಗ್‌ ಸಿವಿಲ್‌ ಎಂಜಿನಿಯರ್ ಆ್ಯಂಡ್‌ ಆರ್ಕಿಟೆಕ್ಟ್$Õ ಮತ್ತು ಬೆಂಗಳೂರಿನ ಯು.ಎಸ್‌. ಕಮ್ಯೂನಿಕೇಶನ್ಸ್‌ ವತಿಯಿಂದ ಫೆ. 25ರ ವರೆಗೆ ಎಂಜಿಎಂ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾದ “ಬಿಲ್ಡ್‌ ಟೆಕ್‌-2024′ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಕ್ರೆಡೈ ಉಡುಪಿ ಅಧ್ಯಕ್ಷ ಮನೋಹರ ಎಸ್‌. ಶೆಟ್ಟಿ ಉದ್ಘಾಟಿಸಿ, ಹಿಂದೆ ಮನೆ, ಕಟ್ಟಡಗಳನ್ನು ನಿರ್ಮಿಸಲು ಸಾಕಷ್ಟು ಕಷ್ಟ ಎದುರಿಸುವುದರೊಂದಿಗೆ ಸಮಯದ ಅಭಾವವೂ ಎದುರಾಗುತ್ತಿತ್ತು. ಆದರೆ ಪ್ರಸ್ತುತ ಆಧುನಿಕ ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಕಟ್ಟಡ, ಮನೆಗಳ ನಿರ್ಮಾಣ ಅತ್ಯಂತ ಸುಲಭವಾಗಿ ಪರಿಣಮಿಸಿದೆ ಎಂದರು.

ಕಟ್ಟಡ ನಿರ್ಮಾಣಕ್ಕೆ ಬೇಕಾದ ಎಲ್ಲ ಬಗೆಯ ಸಾಮಗ್ರಿಗಳನ್ನು ಒಟ್ಟುಗೂಡಿಸಲು ಹೆಚ್ಚು ಕಷ್ಟವಾಗದು. ಪ್ರಸ್ತುತ ಜನತೆಗೆ ಅವರ ಕನಸಿನ ಮನೆ ಕಟ್ಟಲು ವಿನ್ಯಾಸಗಾರರು, ವಾಸ್ತುತಜ್ಞರು, ಕಟ್ಟಡ ಸಾಮಗ್ರಿಗಳು, ಕಾರ್ಮಿಕರು ಇತ್ಯಾದಿ ಎಲ್ಲ ರೀತಿಯ ಸಹಾಯ ಸಹಕಾರ ಅತ್ಯಂತ ಸುಲಭವಾಗಿ ದೊರಕುತ್ತಿದೆ. ಜನರಿಗೆ ಇನ್ನಷ್ಟು ಪ್ರಯೋಜನವಾಗಬೇಕು ಎನ್ನುವ ನೆಲೆಯಲ್ಲಿ ಉಡುಪಿಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನದಲ್ಲಿ ಎಲ್ಲ ಸಾಮಗ್ರಿಗಳೊಂದಿಗೆ ಮಾಹಿತಿ ದೊರಕಲಿವೆ. ಜನರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾಲ ಬುಡದಲ್ಲೇ ಸೌಲಭ್ಯ
ಮಾಂಡವಿ ಬಿಲ್ಡರ್ ಆ್ಯಂಡ್‌ ಡೆವಲಪರ್ನ ಎಂಡಿ ಡಾ| ಜೆರ್ರಿ ವಿನ್ಸೆಂಟ್‌ ಡಯಾಸ್‌ ಮಾತನಾಡಿ, ಹಿಂದೆ ಕಟ್ಟಡ ಸಾಮಗ್ರಿಗಳಿಗಾಗಿ ದೂರದ ಪಟ್ಟಣಕ್ಕೆ ತೆರಳಬೇಕಿತ್ತು. ಆದರೆ ಪ್ರಸ್ತುತ ನಮ್ಮ ಕಾಲ ಬುಡದಲ್ಲೇ ಎಲ್ಲ ಬಗೆಯ ಸಾಮಗ್ರಿಗಳು ದೊರಕುತ್ತಿವೆ ಎಂದು ಹರ್ಷ ವ್ಯಕ್ತಪಡಿಸಿದರು.

ಅಸೋಸಿಯೇಶನ್‌ ಗೌರವಾಧ್ಯಕ್ಷ ಶ್ರೀನಾಗೇಶ್‌ ಹೆಗ್ಡೆ ಅವರು, ಒಂದೇ ಸೂರಿನಡಿ ಎಲ್ಲ ಬಗೆಯ ಉತ್ತಮ ಗುಣಮಟ್ಟದ ಸಾಮಗ್ರಿಗಳು ದೊರಕುತ್ತಿದ್ದು, ಎಲ್ಲರಿಗೂ ಅನುಕೂಲವಾಗಿದೆ ಎಂದು ತಿಳಿಸಿದರು.

ಶಾಂತಾ ಎಲೆಕ್ಟ್ರಿಕಲ್ಸ್‌ ಆ್ಯಂಡ್‌ ಎಂಜಿನಿಯರಿಂಗ್‌ನ ಎಂಡಿ ಶ್ರೀಪತಿ ಭಟ್‌, 3 ದಿನಗಳ ಪ್ರದರ್ಶನದ ಯಶಸ್ಸಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದರು.ಉಜ್ವಲ್‌ ಡೆವಲಪರ್ನ ಎಂಡಿ ಪುರುಷೋತ್ತಮ ಪಿ. ಶೆಟ್ಟಿ, ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಗೋಪಾಲ ಎಂ. ಭಟ್‌, ಯು.ಎಸ್‌. ಕಮ್ಯೂನಿಕೇಶನ್ಸ್‌ನ ಉಮಾಪತಿ, ಕೋಶಾಧಿಕಾರಿ ಲಕ್ಷ್ಮೀನಾರಾಯಣ ಉಪಾಧ್ಯ, ಅಸೋಸಿಯೇಶನ್‌ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಅಸೋಸಿಯೇಶನ್‌ ಅಧ್ಯಕ್ಷ ಪಾಂಡುರಂಗ ಆಚಾರ್‌ ಕೆ. ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ಯೋಗೀಶ್ಚಂದ್ರಧರ ವಂದಿಸಿದರು. ಅರ್ಚನಾ ಪ್ರೊಜೆಕ್ಟ್ ನ ಪಾಲುದಾರ ಅಮಿತ್‌ ಅರವಿಂದ್‌ ನಿರೂಪಿಸಿದರು.

ಕಟ್ಟಡ ಸಾಮಗ್ರಿಗಳ ಪ್ರದರ್ಶನ
ಎಲ್ಲ ತಾಲೂಕುಗಳ ಎಂಜಿನಿಯರ್, ಕಾಂಟ್ರಾಕ್ಟರ್, ಬಿಲ್ಡರ್, ಡೆವಲಪರ್, ಕಟ್ಟಡ ಸಾಮಗ್ರಿಗಳ ಉತ್ಪಾದಕರು ಮತ್ತು ಮಾರಾಟಗಾರರು, ಮೇಸನ್ಸ್‌, ಪೈಂಟರ್, ಫ್ಲಂಬರ್, ಟೈಲ್ಸ್‌ ಫಿಟ್ಟರ್, ಬಾರ್‌ ಬೆಂಡರ್ ಮತ್ತು ಸೆಂಟ್ರಿಂಗ್‌ ಇರುವರು. ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಅಗತ್ಯ ಸಾಲ ಸೌಲಭ್ಯಗಳ ಮಾಹಿತಿ ದೊರಕುವುದು. ರಾಷ್ಟ್ರ, ಅಂತಾರಾಷ್ಟ್ರೀಯ ಉತ್ಪಾದಕರಿಂದ ಕಟ್ಟಡ ಸಾಮಗ್ರಿಗಳು, ಇಂಟೀರಿಯರ್, ಎಕ್ಸ್‌ಟೀರಿಯರ್ ಉತ್ಪನ್ನಗಳು, ಕನ್‌ಸ್ಟ್ರಕ್ಷನ್‌ ಟೆಕ್ನಾಲಜೀಸ್‌, ಸೋಲಾರ್‌ ಪ್ರೊಡಕ್ಟ್, ಫ್ಲೋರಿಂಗ್‌ ಮತ್ತು ರೂಫಿಂಗ್‌ಗೆ ಸಂಬಂಧಿಸಿದ ಉತ್ಪನ್ನಗಳು, ಪೈಂಟ್ಸ್‌/ವಾಟರ್‌ ಪ್ರೂಫ್ ಕೆಮಿಕಲ್ಸ್‌, ಸ್ಟೀಲ್‌, ಸಿಮೆಂಟ್‌, ಪ್ಲೆವುಡ್‌, ಸೇಫ್ಟಿ ಮತ್ತು ಮೆಷಿನರಿ ಎಕ್ವಿಪ್‌ಮೆಂಟ್ಸ್‌, ಎಲಿವೇಟರ್ ಹೀಗೆ ಹತ್ತಾರು ಕಟ್ಟಡ ಸಾಮಗ್ರಿ ಇಲ್ಲಿನ ಆಕರ್ಷಣೆಯಾಗಿದೆ.

 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.