ಉಡುಪಿ ಆರ್‌ಟಿಒ ಕಚೇರಿ: ಶೇ.55ರಷ್ಟು ಹುದ್ದೆ ಖಾಲಿ!

ಕಾರ್ಯನಿರತ ಸಿಬಂದಿಗೆ ಹೆಚ್ಚುವರಿ ಒತ್ತಡ

Team Udayavani, Oct 22, 2020, 6:03 AM IST

ಉಡುಪಿ ಆರ್‌ಟಿಒ ಕಚೇರಿ: ಶೇ.55ರಷ್ಟು ಹುದ್ದೆ ಖಾಲಿ!

ಉಡುಪಿ: ಉಡುಪಿಯ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಶೇ.55ರಷ್ಟು ಹುದ್ದೆಗಳು ಖಾಲಿ ಇದ್ದು, ಇದರಿಂದಾಗಿ ಹೊಸ ವಾಹನಗಳ ನೋಂದಣಿ, ಚಾಲನೆ ಪರವಾನಿಗೆ ಪಡೆಯುವುದು ಸಹಿತ ಬಹಳಷ್ಟು ಕೆಲಸಗಳಿಗೆ ಹಿನ್ನಡೆಯಾಗುತ್ತಿದೆ. ಉಡುಪಿ ಸಾರಿಗೆ ಇಲಾಖೆಗೆ ಮಂಜೂರಾದ 36 ಹುದ್ದೆಗಳ ಪೈಕಿ ಕೇವಲ 16 ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಉಳಿದಂತೆ ಬರೋಬ್ಬರಿ 20 ಹುದ್ದೆಗಳಲ್ಲಿ ಸಿಬಂದಿ ಇಲ್ಲದೆ ಖಾಲಿ ಇವೆ. 36 ಮಂದಿ ಇರಬೇಕಾದ ಕಚೇರಿಯಲ್ಲಿ ಬೆರಳೆಣಿಕೆ ಯಷ್ಟು ಸಿಬಂದಿ ಇದ್ದಾರೆ. ಅವರ ಮೇಲೆಯೂ ಅಷ್ಟೇ ಕೆಲಸದ ಒತ್ತಡವಿರುತ್ತದೆ. ಈ ಬಗ್ಗೆ ಇಲ್ಲಿನ ಸಾರಿಗೆ ಇಲಾಖೆಯಿಂದಲೂ ರಾಜ್ಯ ಸರಕಾರಕ್ಕೆ ಅನೇಕ ಬಾರಿ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ.

ವಾಹನಗಳ ಪರವಾನಿಗೆ ನವೀಕರಣ, ಹೊಸ ಪರವಾನಿಗೆ ಪಡೆಯಲು, ದಾಖಲೆ ಸಲ್ಲಿಕೆ, ಸಹಿತ ವಿವಿಧ ಕೆಲಸಗಳಿಗೆ ದಿನನಿತ್ಯ ಹಲವು ಮಂದಿ ಆರ್‌ಟಿಒ ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ಸಿಬಂದಿ ಕಡಿಮೆ ಇರುವ ಕಾರಣದಿಂದಾಗಿ ಗ್ರಾಹಕರು ಅನಗತ್ಯವಾಗಿ ಸಮಯ ವ್ಯಯ ಮಾಡಬೇಕಾದ ಸನ್ನಿವೇಶವೂ ಎದುರಾಗುತ್ತಿದೆ.

2 ಮಂದಿ ಬೇರೆ ಕಚೇರಿಗೆ
ಉಡುಪಿ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಸಿಬಂದಿ ಕೊರತೆ ಇದ್ದರೂ ಇಬ್ಬರು ಸಿಬಂದಿಯನ್ನು ಬೇರೆ ಕಚೇರಿಗಳಿಗೆ ನಿಯೋಜನೆಗೆ ಒಳಪಡಿ ಸಿರುವುದು ವಿಶೇಷ.

ಓರ್ವ ಚಾಲಕ ಬೇರೆಡೆಗೆ ನಿಯೋಜನೆ
ಪ್ರಥಮ ದರ್ಜೆ ಸಹಾಯಕರು-1, ಓರ್ವ ಚಾಲಕ ಬೇರೆಡೆಗೆ ನಿಯೋಜನೆಗೊಂಡಿದ್ದಾರೆ. ಓರ್ವ ಮೋಟಾರು ವಾಹನ ನಿರೀಕ್ಷಕರು, ದ್ವಿತೀಯ ದರ್ಜೆ ಸಹಾಯಕರು, ಓರ್ವರು ಸಹಾಯಕ ಪ್ರಾದೇಶಿಕ ಅಧಿಕಾರಿ ಬೇರೆ ಜಿಲ್ಲೆಯಿಂದ ಇಲ್ಲಿ ಬಂದು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಖಾಲಿ ಇರುವ ಹುದ್ದೆಗಳು
ಉಡುಪಿ ಸಾರಿಗೆ ಕಚೇರಿಯಲ್ಲಿ ಮಂಜೂರಾದ 36 ಹುದ್ದೆಗಳ ಪೈಕಿ 20 ಹುದ್ದೆಗಳು ಖಾಲಿ ಇದ್ದು, ಮುಖ್ಯವಾಗಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ, ಲೆಕ್ಕ ಪತ್ರಾಧಿಕಾರಿ ಹುದ್ದೆ ಖಾಲಿಯಿದೆ. ಹಿರಿಯ ಅಧೀಕ್ಷಕರ ಎರಡು ಹುದ್ದೆಯೂ ಖಾಲಿ ಬಿದ್ದಿವೆ. ಕಚೇರಿ ಮೇಲ್ವಿಚಾರಕರ ಒಟ್ಟು 3 ಹುದ್ದೆಗಳಲ್ಲಿ 1 ಹುದ್ದೆ ಖಾಲಿಯಿದೆ. ಮೋಟಾರು ವಾಹನ ನಿರೀಕ್ಷಕರ 5 ಹುದ್ದೆಗಳಲ್ಲಿ ಮೂವರಷ್ಟೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಥಮ ದರ್ಜೆ ಸಹಾಯಕರ 6 ಹುದ್ದೆಗಳ ಪೈಕಿ ಎಲ್ಲವೂ ಭರ್ತಿಯಾಗಿವೆ. ಒಬ್ಬರು ಮಂಗಳೂರಿನಿಂದ ಇಲ್ಲಿಗೆ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬೆರಳಚ್ಚುಗಾರರ 2 ಹುದ್ದೆಯಲ್ಲಿ 1 ಹುದ್ದೆ ಖಾಲಿಯಿದೆ. ದ್ವಿತೀಯ ದರ್ಜೆ ಸಹಾಯಕರ 8 ಹುದ್ದೆಗಳ ಪೈಕಿ ಓರ್ವ ಸಿಬಂದಿ ಮಾತ್ರ ಇದ್ದಾರೆ.ಚಾಲಕ 3ಹುದ್ದೆಗಳ ಪೈಕಿ 1 ಹುದ್ದೆ ಭರ್ತಿಯಾಗಿದೆ. ಒಬ್ಬರನ್ನು ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಗ್ರೂಪ್‌ “ಡಿ’ ಅಧಿಕಾರಿಗಳ 4 ಹುದ್ದೆಗಳ ಪೈಕಿ 1 ಹುದ್ದೆ ಮಾತ್ರ ಭರ್ತಿಯಾಗಿದ್ದು, 3 ಹುದ್ದೆಗಳು ಖಾಲಿಯಾಗಿವೆ.

ಸರಕಾರದ ಗಮನಕ್ಕೆ ತರಲಾಗಿದೆ
ಉಡುಪಿಯ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಶೇ.50ಕ್ಕಿಂತಲೂ ಅಧಿಕ ಹುದ್ದೆ ಖಾಲಿಯಿವೆ. ಇದರಿಂದ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿಗೆ ಹೆಚ್ಚುವರಿ ಒತ್ತಡ ಬೀಳುತ್ತಿದೆ. ವರ್ಗಾವಣೆ, ನಿವೃತ್ತಿ ಸಹಿತ ಹಲವು ಕಾರಣಗಳಿಂದ ಉದ್ಯೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಸರಕಾರದ ಗಮನಕ್ಕೂ ತರಲಾಗಿದೆ. -ರಾಮಕೃಷ್ಣ ರೈ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ

ಟಾಪ್ ನ್ಯೂಸ್

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.