ಉಡುಪಿ ಎಸ್ ಪಿ ಕಚೇರಿ ಸೀಲ್ ಡೌನ್ ಇಲ್ಲ : ಸ್ಪಷ್ಟನೆ
Team Udayavani, May 25, 2020, 5:53 PM IST
ಉಡುಪಿ: ಇಲ್ಲಿನ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶಸ್ತ್ರಾಸ್ತ್ರ ಮೀಸಲು ಪಡೆಯ ಸಿಬ್ಬಂದಿಗೆ ಸೋಂಕು ದೃಢವಾದರೂ ಕಚೇರಿಯನ್ನು ಸೀಲ್ ಡೌನ್ ಮಾಡಲಾಗುವುದಿಲ್ಲ ಎಂದು ಎಸ್ ಪಿ ವಿಷ್ಣುವರ್ಧನ್ ಸ್ಪಷ್ಟನೆ ನೀಡಿದ್ದಾರೆ.
ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢವಾದ ಹಿನ್ನಲೆಯಲ್ಲಿ ಎಸ್ ಪಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದ ಹಿನ್ನಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ.
ಪಾಸ್ ಗಳನ್ನು ಪಡೆಯಲು ಸಾಕಷ್ಟು ಸಾರ್ವಜನಿಕರು ಕಚೇರಿಗೆ ಆಗಮಿಸಿದ್ದ ಹಿನ್ನಲೆಯಲ್ಲಿ ಎರಡು ದಿನಗಳ ಹಿಂದೆ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿತ್ತು. ಈಗ ಸಿಬ್ಬಂದಿಗೆ ಸೋಂಕು ಬಂದಿರುವ ಕಾರಣ ಮತ್ತೆ ಸ್ಯಾನಿಟೈಸ್ ಮಾಡುತ್ತೇವೆ. ಆತಂಕ ಪಡುವ ಅಗತ್ಯವಿಲ್ಲ. ನಮ್ಮ ಕಚೇರಿ ತೆರೆದಿರುತ್ತದೆ ಎಂದಿದ್ದಾರೆ.
ಶಸ್ತ್ರಾಸ್ತ್ರ ಮೀಸಲು ಪಡೆಯ ಸಿಬ್ಬಂದಿ ಕಚೇರಿಯ ಹೊರಗಡೆ ಕಾರ್ಯ ನಿರ್ವಹಿಸಿದ ಕಾರಣ ಕಚೇರಿಯ ಒಳಗಡೆಗೆ ಸಂಪರ್ಕ ಹೊಂದಿರಲಿಲ್ಲ. ಆದ್ದರಿಂದ ಹೆಚ್ಚಿನ ಆತಂಕ ಬೇಡ ಎಂದಿದ್ದಾರೆ.