ಮುನಿಯಾಲು: ಘನ ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಘಟಕಗಳ ಏಕರೂಪದ ಬ್ರ್ಯಾಡಿಂಗ್‌ ಲೋಕಾರ್ಪಣೆ


Team Udayavani, Oct 2, 2020, 9:53 PM IST

ಮುನಿಯಾಲು: ಘನ ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಘಟಕಗಳ ಏಕರೂಪದ ಬ್ರ್ಯಾಡಿಂಗ್‌ ಲೋಕಾರ್ಪಣೆ

ಅಜೆಕಾರು: ಜಿ.ಪಂ.ಉಡುಪಿ, ತಾ.ಪಂ. ಹೆಬ್ರಿ, ಗ್ರಾ.ಪಂ. ವರಂಗ ಇವರ ಆಶ್ರಯದಲ್ಲಿ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಘನ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕಗಳ ಏಕರೂಪದ ಬ್ರ್ಯಾಂಡಿಂಗ್‌ ಲೋಕಾರ್ಪಣೆ ಮತ್ತು ಸ್ವಚೊತ್ಸವ ನಿತ್ಯೋತ್ಸವ ಮಾಸಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮ ಉದ್ಘಾಟನೆ, ಬೃಹತ್‌ ಸ್ವಚ್ಛತಾ ಅಭಿಯಾನ ಅ. 2ರಂದು ವರಂಗ ಗ್ರಾ.ಪಂ.ನ ಘನ ತ್ಯಾಜ್ಯ ಸಂಪನ್ಮೂಲ ಘಟಕದ ಆವರಣದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆ ಹಾಗೂ ಘನ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕಗಳ ಏಕರೂಪದ ಬ್ರ್ಯಾಂಡಿಂಗ್‌ನ್ನು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಿ ಮಾತನಾಡಿ, ಸ್ವತ್ಛತೆಯಲ್ಲಿ ಉಡುಪಿ ಜಿಲ್ಲೆ ದೇಶಕ್ಕೆ ಅಗ್ರಸ್ಥಾನದಲ್ಲಿದೆ, ಜಿಲ್ಲೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ಮುಂಚೂಣಿಯಲ್ಲಿದೆ. ಸ್ವಚ್ಛತೆ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯದ ಕಾಯಕವಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್‌ ವಹಿಸಿ ಮಾತನಾಡಿ, ಜನರ ಸಹಕಾರದಿಂದ ಸ್ವತ್ಛತೆ ಕಾಪಾಡುವಲ್ಲಿ ಯಶಸ್ವಿಯಾಗಲು ಸಾಧ್ಯವಾಗಿದೆ. ಕಸ ಸಂಗ್ರಹದಿಂದ ಗ್ರಾ.ಪಂ.ಗಳಿಗೆ ಆದಾಯ ದೊರಕುವ ಜತೆಗೆ ಪರಿಸರ ಸಂರಕ್ಷಣೆ ಸಾಧ್ಯವಾಗಿದೆ ಎಂದು ಹೇಳಿದರು.

ಹೆಬ್ರಿ ತಾ.ಪಂ. ಅಧ್ಯಕ್ಷ ರಮೇಶ್‌ ಕುಮಾರ್‌ ಭಿತ್ತಿ ಪತ್ರ ಬಿಡುಗಡೆಗೊಳಿಸಿದರು. ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್‌ ರಾವ್‌, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್‌ ಪರ್ಣೇಕರ್‌, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಾ| ಮೇಜರ್‌ ಹರ್ಷ ಕೆ.ಬಿ., ಹೆಬ್ರಿ ತಹಶೀಲ್ದಾರ್‌ ಮಹೇಶ್ಚಂದ್ರ, ಎಂಜಿನಿಯರ್‌ ಸತ್ಯನಾರಾಯಣ, ವರಂಗ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಸದಾಶಿವ ಸೇರ್ವೇಗಾರ್‌, ಆಡಳಿತಾಧಿಕಾರಿ ಚಂದನ ಸಿ., ಪಂಚಾಯತ್‌ ನಿಕಟ ಪೂರ್ವ ಅಧ್ಯಕ್ಷ ಸುರೇಂದ್ರ ಶೆಟ್ಟಿ, ಕಾರ್ಯದರ್ಶಿ ಅಮೃತಾ ಕುಲಾಲ್‌, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಲತಾ, ಜಿಲ್ಲಾ ಪಂಚಾಯತ್‌ನ ರೇನಿಟಾ, ಪ್ರದೀಪ್‌, ಕಿರಣ್‌, ಗ್ರಾಪಂ ಸಿಬಂದಿಯಾದ ದಿವಾಕರ ನಾಯ್ಕ, ಅರುಂದತಿ, ರಾಮ, ಅನುಷಾ, ಸುನಿಲ್‌ ಉಪಸ್ಥಿತರಿದ್ದರು.

ಶ್ರೀನಿವಾಸ್‌ ರಾವ್‌ ಪ್ರಸ್ತಾವಿಸಿದರು. ಮೇಜರ್‌ ಹರ್ಷ ಸ್ವಾಗತಿಸಿದರು. ಸದಾಶಿವ ಸೇರ್ವೇಗಾರ್‌ ವಂದಿಸಿದರು. ಶಿಕ್ಷಕ ಪ್ರಶಾಂತ್‌ ಶೆಟ್ಟಿ ಹಾವಂಜೆ ಹಾಗೂ ಹರೀಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಎಲ್‌ಆರ್‌ಎಂ ಘಟಕದ ಸಿಬಂದಿಯವರನ್ನು ಗೌರವಿ ಸಲಾಯಿತು. ಗ್ರಾಮ ಪಂಚಾಯತ್‌ ಸಿಬಂದಿ ಸಹಕರಿಸಿದರು.

ಶೇ.100 ಸಾಧನೆ ಶ್ರಮ
ಜಿಲ್ಲೆಯ ಪ್ರತಿ ಮನೆ, ಅಂಗನವಾಡಿ, ಶಾಲಾ ಕಾಲೇಜು, ಸರಕಾರಿ ಕಚೇರಿಗಳಲ್ಲಿ ಶೌಚಾಲಯ ಇದೆ. ಜಿಲ್ಲೆಯ 110ಕ್ಕೂ ಹೆಚ್ಚು ಗ್ರಾ.ಪಂ.ಗಳಲ್ಲಿ ಕಸ ಸಂಗ್ರಹ ಮಾಡಲಾಗುತ್ತಿದ್ದು ಈ ವರ್ಷದ ಅಂತ್ಯಕ್ಕೆ ಜಿಲ್ಲೆಯ ಎಲ್ಲ ಗ್ರಾ.ಪಂ.ಗಳಲ್ಲಿ ಕಸ ಸಂಗ್ರಹ ಮಾಡಿ ಶೇ.100 ಸಾಧನೆ ಮಾಡಲಾಗುವುದು.
-ಪ್ರೀತಿ ಗೆಹಲೋಟ್‌, ಜಿ¬ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ

ಟಾಪ್ ನ್ಯೂಸ್

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

daily-horoscope

ಈ ರಾಶಿಯವರು ಇಂದು ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ.

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

300ರ ಬದಲು ಇರುವುದು 22 ಯಂತ್ರಗಳು !

300ರ ಬದಲು ಇರುವುದು 22 ಯಂತ್ರಗಳು !

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಶೀಘ್ರ ಇತ್ಯರ್ಥ

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಶೀಘ್ರ ಇತ್ಯರ್ಥ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

300ರ ಬದಲು ಇರುವುದು 22 ಯಂತ್ರಗಳು !

300ರ ಬದಲು ಇರುವುದು 22 ಯಂತ್ರಗಳು !

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ಕೋವಿಡ್‌ 3ನೇ ಅಲೆ ತಡೆಗೆ ಸನ್ನದ್ಧ: ಶಾಸಕ ರಘುಪತಿ ಭಟ್‌

ಕೋವಿಡ್‌ 3ನೇ ಅಲೆ ತಡೆಗೆ ಸನ್ನದ್ಧ: ಶಾಸಕ ರಘುಪತಿ ಭಟ್‌

ಹಡಿಲು ಭೂಮಿ ಕೃಷಿ ಕಟಾವಿಗೆ ಸಿದ್ಧ: 1,000 ಟನ್‌ ಉತ್ಪಾದನೆ ನಿರೀಕ್ಷೆ

ಹಡಿಲು ಭೂಮಿ ಕೃಷಿ ಕಟಾವಿಗೆ ಸಿದ್ಧ: 1,000 ಟನ್‌ ಉತ್ಪಾದನೆ ನಿರೀಕ್ಷೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

2-karnataka

29ರಿಂದ ಕರ್ನಾಟಕ ಸಾಂಸ್ಕೃತಿಕ ಉತ್ಸವ

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

1`-school

ಮಧ್ಯಾಹ್ನದ ಬಿಸಿಯೂಟಕ್ಕೆ ಚಾಲನೆ

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.