ಗ್ರಾಮೀಣ ಭಾಗದ ರೈತರಿಗೆ ಕಾಡು ಪ್ರಾಣಿಗಳ ಕಾಟ

ಮುಂಗಾರು ಬೆಳೆ ಕೈಹಿಡಿಯುವ ಲಕ್ಷಣವಿದ್ದರೂ ತಪ್ಪಿಲ್ಲ ಆತಂಕ

Team Udayavani, Oct 20, 2020, 4:00 AM IST

ಗ್ರಾಮೀಣ ಭಾಗದ ರೈತರಿಗೆ ಕಾಡು ಪ್ರಾಣಿಗಳ ಕಾಟ

ಬೈಂದೂರು: ಈ ವರ್ಷದ ಮುಂಗಾರು ಬೆಳೆ ಇನ್ನೇನು ಕೆಲವೆ ದಿನದಲ್ಲಿ ಕಟಾವಿಗೆ ಸಿದ್ಧಗೊಂಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಉತ್ತಮ ಫಸಲು ಬಂದರೂ ಕೂಡ ರೈತರಿಗೆ ಕಾಡು ಪ್ರಾಣಿಗಳಿಂದ ಸಂರಕ್ಷಿಸಿಕೊಳ್ಳುವುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ಮುಖ್ಯವಾಗಿ ಬೈಂದೂರು ತಾಲೂಕು ಹಾಗೂ ಕುಂದಾಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭತ್ತದ ಬೇಸಾಯ ಇಲ್ಲಿನ ಜನರ ಪ್ರಮುಖ ಉದ್ಯೋಗವಾಗಿದೆ. ಮುಂಗಾರು ಬೆಳೆ ಸಾಮಾನ್ಯವಾಗಿ ಸೆಪ್ಟಂಬರ್‌ ತಿಂಗಳ ಅಂತ್ಯದಲ್ಲಿ ಕಟಾವಿಗೆ ಸಿದ್ಧಗೊಳ್ಳುತ್ತದೆ. ಹವಾಮಾನ ವೈಪರೀತ್ಯ ಒಂದೆಡೆಯಾದರೆ ಈ ಸಮಯದಲ್ಲಿ ಗದ್ದೆಯಲ್ಲಿರುವ ಬೆಳೆಯನ್ನು ಕಾಡು ಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಹರಸಾಹಸಪಡಬೇಕಾಗಿದೆ.

ರಾತ್ರಿ ವೇಳೆ ಹಳ್ಳಿಯಲ್ಲಿ ಕಾವಲು
ಸಾಮಾನ್ಯವಾಗಿ ರಾತ್ರಿ ವೇಳೆ ಹಳ್ಳಿಗಳಲ್ಲಿ ರೈತರು ಅಟ್ಟಣಿಗೆ (ಮನೆ ಹಳ್ಳಿ) ನಿರ್ಮಿಸಿಕೊಂಡು ರಾತ್ರಿಯಿಡೀ ಗದ್ದೆ ಕಾಯುತ್ತಾರೆ. ಕಾಡು ಹಂದಿಯ ಕಾಟ ಈ ವರ್ಷ ಅತ್ಯಧಿಕವಾಗಿದೆ. ನವಿಲು, ಕಡವೆ, ಕಾಡುಕೋಣ, ಹಂದಿ ಕಾಟದಿಂದ ಭತ್ತದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಯಾಗುತ್ತಿದೆ. ಪೈರುಗಳು ಬೆಳೆದಿರುವ ಕಾರಣ ಗದ್ದೆಯಲ್ಲಿ ಮೊಳಕೆ ಬರುವ ಪರಿಸ್ಥಿತಿ ಇದೆ ಎನ್ನುವುದು ಕೃಷಿಕ ನಾರಾಯಣ ಮರಾಠಿಯವರ ಅಭಿಪ್ರಾಯವಾಗಿದೆ.

ವರ್ಷದಿಂದ ವರ್ಷಕ್ಕೆ ಹೆಚ್ಚು
ಕಳೆದ ಕೆಲವು ವರ್ಷಗಳಿಂದ ಪ್ರತಿ ಸಾರಿಯೂ ಭತ್ತದ ಬೆಳೆಗೆ ಕಾಡು ಪ್ರಾಣಿಗಳ ಕಾಟ ಅಧಿಕವಾಗಿದೆ. ಕಾಡು ನಾಶದ ಪರಿಣಾಮ ಒಂದೆಡೆಯಾದರೆ ಮಂಗಗಳು ಕಾಡು ಬಿಟ್ಟು ಊರು ಸೇರಿಕೊಂಡಿವೆ.ಮಾತ್ರವಲ್ಲದೆ ಮನೆಯ ಪಾತ್ರೆಯಲ್ಲಿ ರುವ ಆಹಾರ ಎತ್ತಿಕೊಂಡು ಹೋಗುತ್ತವೆ. ಭತ್ತದ ಗದ್ದೆಗೂ ಕೂಡ ಇವುಗಳ ಕಾಟ ಅಧಿಕವಾಗಿದೆ. ರಾತ್ರಿ ವೇಳೆ ಕಾಡು ಹಂದಿ ಹಗಲು ವೇಳೆ ಮಂಗ,ನವಿಲು ಕಾಯುವುದು ರೈತರಿಗೆ ಸಮಸ್ಯೆಯಾಗತೊಡಗಿದೆ.ಕೂಲಿಯಾಳುಗಳ ಕೊರತೆ ಮತ್ತು ಹಿರಿಯರು ಮಾತ್ರ ಕೃಷಿ ಚಟುವಟಿಕೆ ಮುಂದುವರಿಸಿಕೊಂಡು ಬಂದಿರುವುದರ ನಡುವೆ ಕಾಡು ಪ್ರಾಣಿಗಳ ಹಾವಳಿ, ಹವಾಮಾನ ವೈಪರೀತ್ಯ ಈ ಬಾರಿಯೂ ಕೃಷಿಕರಿಗೆ ಕಂಟಕವಾಗಿ ಪರಿಣಮಿಸಿದೆ.

ಅರ್ಜಿ ನೀಡಿ
ವರ್ಷದಿಂದ ವರ್ಷಕ್ಕೆ ಕಾಡು ಪ್ರಾಣಿಗಳ ಹಾವಳಿ ಅಧಿಕವಾಗಿರುವುದು ನಿಜ. ಆದರೆ ಅತಿಯಾದ ಕಾಡು ನಾಶ ಕೂಡ ಇದಕ್ಕೆ ಮಹತ್ವದ ಕಾರಣವಾಗಿದೆ. ಕಾಡು ಪ್ರಾಣಿಗಳಿಂದ ರೈತರ ಬೆಳೆ ನಾಶವಾದಾಗ ಅದರ ವಿವರದ ಅರ್ಜಿಯನ್ನು ಅರಣ್ಯ ಇಲಾಖೆಗೆ ನೀಡಿದರೆ ಇಲಾಖೆಯಿಂದ ಬೆಳೆ ನಾಶದ ಪರಿಹಾರ ಕೊಡಲಾಗುತ್ತದೆ. ರೈತರು ಇದರ ಉಪಯೋಗ ಪಡೆಯಬಹುದಾಗಿದೆ.
– ಕಿರಣ್‌ ಬಾಬು, ವಲಯಾರಣ್ಯಧಿಕಾರಿ ಬೈಂದೂರು

ಅರುಣ ಕುಮಾರ್‌, ಶಿರೂರು

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.