ಕುಂದಾಪುರ ಸರಕಾರಿ ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ

Team Udayavani, Apr 27, 2022, 11:36 AM IST

hospital

ಕುಂದಾಪುರ: ಸಾರ್ವಜನಿಕ ರಿಗೆ ಗುಣಮಟ್ಟದ ಚಿಕಿತ್ಸೆ ಕೊಡುವುದರ ಜತೆಗೆ ಸ್ವತ್ಛತೆಗೆ ಆದ್ಯತೆ ನೀಡಿದ ಸರಕಾರಿ ಉಪವಿಭಾಗ ಆಸ್ಪತ್ರೆ ಎಂದು ಕುಂದಾಪುರ ಉಪವಿಭಾಗ ಸರಕಾರಿ ಆಸ್ಪತ್ರೆ 2020- 21ನೇ ಸಾಲಿನ ‘ಕಾಯಕಲ್ಪ ಪ್ರಶಸ್ತಿ’ಗೆ ಪಾತ್ರವಾಗಿದೆ.

ರೋಗಿಗಳಿಗೆ ಉತ್ತಮ ಚಿಕಿತ್ಸೆ, ವಾತಾವರಣ ಕಲ್ಪಿಸಿಕೊಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರಕಾರವು ಕೇಂದ್ರ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2015ರಿಂದ ‘ಕಾಯಕಲ್ಪ ಪ್ರಶಸ್ತಿ’ ನೀಡುತ್ತಿದೆ. ಈ ಪ್ರಶಸ್ತಿಗೆ ಕುಂದಾಪುರ ಸರಕಾರಿ ಉಪವಿಭಾಗ ಆಸ್ಪತ್ರೆ ಮೊದಲನೇ ಬಾರಿ ಆಯ್ಕೆಯಾಗಿದೆ.

ವಿಶೇಷ

ಈ ಸರಕಾರಿ ಆಸ್ಪತ್ರೆಯಲ್ಲಿ 90 ಹುದ್ದೆ ಮಂಜೂರಾಗಿ 50 ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದಿನದ 24 ಗಂಟೆಗಳ ಕಾಲವೂ ಚಿಕಿತ್ಸೆ ಲಭ್ಯವಿದೆ. ಇಲ್ಲಿ ಒಟ್ಟು 3 ಆ್ಯಂಬುಲೆನ್ಸ್‌ ಇವೆ. ಅದರಲ್ಲಿ 1 ನಗು-ಮಗು, 1 ತುರ್ತು ಸೇವೆಗೆ ಮತ್ತು 1 ಸಾಮಾನ್ಯ ಅಪಘಾತಗಳಿಗೆ ಮೀಸಲಿಡಲಾಗಿದೆ. ನಿತ್ಯ ಈ ಆಸ್ಪತ್ರೆಗೆ 450ಕ್ಕೂ ಹೆಚ್ಚು ಹೊರ ಮತ್ತು 110ರಷ್ಟು ಒಳ ರೋಗಿಗಳು ಬಂದು ಚಿಕಿತ್ಸೆ ಪಡೆದು, ಉಚಿತವಾಗಿ ಸರಕಾರ ನೀಡುವ ಔಷಧ ಪಡೆಯುತ್ತಾರೆ. ಕೋವಿಡ್‌ ಸಂದರ್ಭ ನೀಡಿದ ಚಿಕಿತ್ಸೆಗಾಗಿ ರಾಜ್ಯದಲ್ಲೇ ಗಮನ ಸೆಳೆದಿತ್ತು. ಹೆರಿಗೆಯಲ್ಲೂ ರಾಜ್ಯಮಟ್ಟದಲ್ಲಿ ಅತ್ಯಧಿಕ ಹೆರಿಗೆಯಾದ ಆಸ್ಪತ್ರೆ ಎಂದು ಗುರುತಿಸಲ್ಪಟ್ಟಿದೆ. ಇದೀಗ ವಾಕ್‌ ಶ್ರವಣ ಕೇಂದ್ರ ಮಂಜೂರಾಗಿದ್ದು ಕಟ್ಟಡ ನಿರ್ಮಾಣ ನಡೆಯುತ್ತಿದೆ. ವಿವಿಧ ಆರೋಗ್ಯ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದೆ.

ಮಾನದಂಡಗಳು

ಕಾಯಕಲ್ಪ ಪ್ರಶಸ್ತಿಗೆ ಆಸ್ಪತ್ರೆಯ ಗುಣ ಮಟ್ಟದ ಚಿಕಿತ್ಸೆ, ಸ್ವಚ್ಛತೆ, ತ್ಯಾಜ್ಯ ವಿಲೇವಾರಿ, ರೋಗಿಗಳ ಆರೈಕೆ, ತಜ್ಞರ ಲಭ್ಯತೆ, ಸಂಪ ನ್ಮೂಲಗಳ ಬಳಕೆ, ಶೌಚಾಲಯ ಒಟ್ಟು 16 ಮಾನದಂಡಗಳನ್ನು ಪರಿಗಣಿಸಲಾಗುತ್ತದೆ. ಈ ಮಾನದಂಡಗಳಲ್ಲಿ 83.3 ಅಂಕ ಪಡೆದಿದೆ.

ತಜ್ಞರು

ಸರಕಾರಿ ಆಸ್ಪತ್ರೆಯಲ್ಲಿ 24×7 ಚಿಕಿತ್ಸೆ ದೊರೆಯುತ್ತಿದ್ದು, ಇಲ್ಲಿ ಶಸ್ತ್ರಚಿಕಿತ್ಸಕರು, ಸಾಮಾನ್ಯ ಶಸ್ತ್ರಚಿಕಿತ್ಸಕ, ಔಷಧ ತಜ್ಞರು, ದಂತ, ನೇತ್ರ, ಕಿವಿಮೂಗು ಗಂಟಲು ತಜ್ಞರು, ಹೆರಿಗೆ, ಸ್ತ್ರೀರೋಗ ತಜ್ಞರು, ಮಕ್ಕಳ ರೋಗ ತಜ್ಞರು, ಅರಿವಳಿಕೆ ತಜ್ಞರು, ಎಲುಬು ಮತ್ತು ಕೀಲು ತಜ್ಞರು, ಕ್ಷಕಿರಣ ತಜ್ಞರು, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಮೊದಲಾದ ವೈದ್ಯರು ಇದ್ದಾರೆ.

ಮೊದಲ ಬಾರಿ ಪ್ರಶಸ್ತಿ

ಕುಂದಾಪುರ ಉಪವಿಭಾಗ ಆಸ್ಪತ್ರೆಗೆ ಮೊದಲ ಬಾರಿಗೆ ಕಾಯಕಲ್ಪ ಪ್ರಶಸ್ತಿ ಬಂದಿದೆ. ಜನರ ನಿರೀಕ್ಷೆಗೆ ತಕ್ಕಂತೆ, ಸರಕಾರದ ಮಾರ್ಗಸೂಚನೆಯಂತೆ ಎಲ್ಲರೂ ತಂಡವಾಗಿ ಕೆಲಸ ನಿರ್ವಹಿಸಲಾಗುತ್ತಿದೆ. -ಡಾ| ರಾಬರ್ಟ್‌ ರೆಬೆಲ್ಲೋ, ಶಸ್ತ್ರಚಿಕಿತ್ಸಕ, ಆಡಳಿತ ವೈದ್ಯಾಧಿಕಾರಿ

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.