ಬಿದ್ಕಲ್‌ಕಟ್ಟೆ: ರಾ.ಹೆ.ಯಲ್ಲಿ ವಿದ್ಯಾರ್ಥಿಗಳ ಪಯಣ; ಅಪಾಯ ಸಾಧ್ಯತೆ
Team Udayavani, Jan 21, 2022, 4:00 AM IST
ತೆಕ್ಕಟ್ಟೆ: ಇಲ್ಲಿನ ಕುಂದಾಪುರ ತಾಲೂಕಿನ ಬಿದ್ಕಲ್‌ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪರಿಸರದ ಪ್ರಮುಖ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರ ಅಧಿಕವಾದ ಪರಿಣಾಮ ಇಲ್ಲಿನ ಶಾಲಾ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತುರ್ತಾಗಿ ಬ್ಯಾರಿಕೇಡ್ ಅಳವಡಿಸುವಂತೆ ವಿದ್ಯಾರ್ಥಿಗಳ ಹೆತ್ತವರು ಆಗ್ರಹಿಸಿದ್ದಾರೆ.
ಬಿದ್ಕಲ್‌ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢ, ಪ್ರಾಥಮಿಕ ಶಾಲಾ ವಿಭಾಗಕ್ಕೆ ಆಗಮಿಸುವ ಪರಿಸರದ ನೂರಾರು ವಿದ್ಯಾರ್ಥಿಗಳು ನಿತ್ಯ ರಾಜ್ಯ ಹೆದ್ದಾರಿಯ ಒಂದು ಕಡೆಯಿಂದ ಮತ್ತೂಂದು ಕಡೆಗೆ ದಾಟಿಕೊಂಡು ಬರಬೇಕಾದ ಅನಿವಾರ್ಯ ಇದೆ. ಈ ನಡುವೆ ಹೆದ್ದಾರಿಯಲ್ಲಿ ಘನವಾಹನಗಳ ಸಂಚಾರ, ವಾಹನ ದಟ್ಟಣೆ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಕಾಲ್ನಡಿಗೆಯಲ್ಲಿ ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿ ಗಳು ವಾಹನಗಳ ವೇಗ ನಿಯಂತ್ರಣಕ್ಕಾಗಿ ಬ್ಯಾರಿಕೇಡ್ ಅಳವಡಿಸಬೇಕಾಗಿದೆ ಎಂದು ವಿದ್ಯಾರ್ಥಿಗಳ ಹೆತ್ತವರು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ವಾಹನಗಳ ವೇಗ ಮಿತಿ ನಿಯಂತ್ರಿಸುವ ನಿಟ್ಟಿನಿಂದ ವೈಜ್ಞಾನಿಕವಾಗಿ ಹಂಪ್ಸ್ ನಿರ್ಮಿಸುವ ಜತೆಗೆ ಬ್ಯಾರಿಕೇಡ್ ತುರ್ತಾಗಿ ಅಳವಡಿಸಿ ಸಂಭವನೀಯ ಅವಘಡ ಸಂಭವಿಸುವ ಮುನ್ನ ಕ್ರಮ ಕೈಗೊಳ್ಳಬೇಕಾಗಿದೆ.– ರಾಘವೇಂದ್ರ ಅಡಿಗ ಕಲ್ಕಟ್ಟೆ , ಎಸ್‌ಡಿಎಂಸಿ ಅಧ್ಯಕ್ಷರು, ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್‌ಕಟ್ಟೆ (ಪ್ರೌಢಶಾಲಾ ವಿಭಾಗ)
ಮೊಳಹಳ್ಳಿ ಗ್ರಾ.ಪಂ. ವ್ಯಾಪ್ತಿಗೆ ಬರುವ ಈ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಂಚಾರಿ ನಿಯಮದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಗ್ರಾ.ಪಂ.ನ ಸರ್ವ ಸದಸ್ಯರು ನಿರ್ಣಯಿಸಿ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವ ಜತೆಗೆ ಶಾಶ್ವತ ಪರಿಹಾರ ಕೈಗೊಳ್ಳುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ.- ಇಂದಿರಾ ಯು.ಶೆಟ್ಟಿ , ಅಧ್ಯಕ್ಷರು, ಗ್ರಾ. ಪಂ. ಮೊಳಹಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೆರೆ, ಪ್ರಾಕೃತಿಕ ವಿಕೋಪಗಳಲ್ಲಿ ತುರ್ತು ಪರಿಹಾರ ಕಾರ್ಯ: ಜಿಲ್ಲಾಧಿಕಾರಿ ಕರೆ
ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ
ನಾರಾಯಣ ಗುರುಗಳ ಪಠ್ಯ ಕೈಬಿಟ್ಟರೆ ಚಳವಳಿ: ಲೋಬೋ
ಮಗಳನ್ನೇ ಹತ್ಯೆಗೈದ ಪ್ರಕರಣ : ಕೊನೆಗೂ ಇಂದ್ರಾಣಿ ಮುಖರ್ಜಿಗೆ ಜಾಮೀನು
ರಾಹುಲ್ ಗಾಂಧಿ ಆದ್ಯತೆಯ ಆಯ್ಕೆ : ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಹೇಳಿಕೆ