ಬೈಂದೂರು: ಮತದಾನಕ್ಕೆ ಸಕಲ ಸಿದ್ಧತೆ

ಶಿವಮೊಗ್ಗ ಲೋಕಸಭಾ ಚುನಾವಣೆ

Team Udayavani, Apr 23, 2019, 6:32 AM IST

byndooru-matadana

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಎ. 23 ರಂದು ನಡೆಯಲಿರುವ ಚುನಾವಣೆಗೆ ಸಕಲ ಸಿದ್ಧತೆಗಳು ಸೋಮವಾರ ನಡೆಸಲಾಯಿತು. ಇಲ್ಲಿನ ಪದವಿಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್‌ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿತು.

ನೂತನ ತಾಲೂಕು ಆದ ಬಳಿಕ ಲೋಕಸಭಾ ಚುನಾವಣೆಗಾಗಿ ಮಸ್ಟರಿಂಗ್‌ ಬೈಂದೂರಿನಲ್ಲಿ ನಡೆಯುತ್ತಿರುವುದು ಇದು ಎರಡನೇ ಬಾರಿ. ಕಳೆದ ನವೆಂಬರ್‌ನಲ್ಲಿ ಶಿವಮೊಗ್ಗ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೊದಲ ಬಾರಿಗೆ ಮಸ್ಟರಿಂಗ್‌ ಕಾರ್ಯ ಮಾಡಲಾಗಿತ್ತು. ಸಹಾಯಕ ಚುನಾವಣಾಧಿಕಾರಿ ಕುಸುಮಾಧರ ಅವರ ನೇತೃತ್ವದಲ್ಲಿ ತಹಶೀಲ್ದಾರ್‌ ಬಸಪ್ಪ ಪೂಜಾರ್‌ ಮತ್ತು ಸಿಬಂದಿ ಸಹಕಾರದೊಂದಿಗೆ ಸಿದ್ಧತೆಗಳು ನಡೆದವು.

2,26,587 ಮತದಾರರು
ಕ್ಷೇತ್ರದಲ್ಲಿ ಬೈಂದೂರು ತಾಲೂಕಿನ 26, ಕುಂದಾಪುರದ 39 ಸೇರಿ 65 ಗ್ರಾಮಗಳು ಇವೆ. 1,10,237 ಪುರುಷ, 1,16,349 ಮಹಿಳಾ ಮತ್ತು 1 ಅನ್ಯ ಸೇರಿ ಒಟ್ಟು 2,26,587 ಮತದಾರರು 246 ಮತದಾನ ಕೇಂದ್ರಗಳಲ್ಲಿ ಹಕ್ಕು ಚಲಾಯಿಸಲಿದ್ದಾರೆ. ಹೆಮ್ಮಾಡಿಯಲ್ಲಿ 2 ಮತ್ತು ತಲ್ಲೂರಿನಲ್ಲಿ 3 ಸಖೀ ಮತಗಟ್ಟೆಗಳಿರುತ್ತವೆ. ಎಲ್ಲ ಕೇಂದ್ರಗಳಲ್ಲೂ ವಿಶೇಷ ಚೇತನರಿಗೆ, ಅಶಕ್ತರಿಗೆ, ಗರ್ಭಿಣಿಯರಿಗೆ ಮತ್ತು ಹಿರಿಯ ನಾಗರಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. 1088 ಮತಗಟ್ಟೆ ಸಿಬ್ಬಂದಿ ಮತ್ತು 246 ಸಹಾಯಕ ಸಿಬಂದಿ ಚುನಾವಣೆಯ ಕರ್ತವ್ಯ ನಿರ್ವಹಿಸುವರು. ಎ. 22ರ ಬೆಳಗ್ಗೆ ಬೈಂದೂರು ಸರಕಾರಿ ಪ.ಪೂ. ಕಾಲೇಜಿನ ಮಸ್ಟರಿಂಗ್‌ ಕೇಂದ್ರಕ್ಕೆ ಬರಲು 41 ಬಸ್‌ ಮತ್ತು 45 ವ್ಯಾನ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಮತದಾನ ಮುಗಿದ ಬಳಿಕ ಡಿಮಸ್ಟರಿಂಗ್‌ ಕೂಡ ಇಲ್ಲಿಯೇ ನಡೆದು, ಮತಪೆಟ್ಟಿಗೆಗೆಳನ್ನು ಅದೆ ರಾತ್ರಿ ಶಿವಮೊಗ್ಗಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.

ಎಲ್ಲ ವ್ಯವಸ್ಥೆ
ಚುನಾವಣೆಗಾಗಿ ಕ್ಷೇತ್ರ ಬಹತೇಕವಾಗಿ ಸಿದ್ದಗೊಂಡಿದೆ. ಸುಮಾರು ಎರಡುವರೆ ಸಾವಿರ ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲೂ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ದತೆ ಪೂರ್ಣಗೊಂಡಿದೆ. ಚುನಾವಣಾ ಕರ್ತವ್ಯಕ್ಕೆ ಹಾಜರಾದ ಸಿಬಂದಿ ಕೂಡ ಇಲಾಖೆಯ ಪರಿಪೂರ್ಣ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಪ್ಪತ್ತು ಕೊಠಡಿಗಳಲ್ಲಿ ಇಪ್ಪತ್ತು ಸೆಕ್ಟರ್‌ಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳು ಮಾರ್ಗದರ್ಶನದಲ್ಲಿ ಆಯಾಯ ಮತಗಟ್ಟೆಗಳಿಗೆ ಸಿಬಂದಿಯನ್ನು ಕಳುಹಿಸಲಾಗಿದೆ ಕುಂದಾಪುರ ಉಪ ವಿಭಾಗದ ಡಿ.ವೈ.ಎಸ್‌.ಪಿ. ದಿನೇಶ್‌ ಕುಮಾರ್‌ ಸ್ಥಳದಲ್ಲೆ ಮೊಕ್ಕಾಂ ಹೂಡಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.