Kota ಸಮಗ್ರ ಕನ್ನಡಾಭಿವೃದ್ಧಿ ಕಾನೂನು: ಡಾ| ಜೋಷಿ ಆಗ್ರಹ

ಕೋಟದಲ್ಲಿ ಉಡುಪಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Team Udayavani, Dec 5, 2023, 11:40 PM IST

Kota ಸಮಗ್ರ ಕನ್ನಡಾಭಿವೃದ್ಧಿ ಕಾನೂನು: ಡಾ| ಜೋಷಿ ಆಗ್ರಹ

ಕೋಟ: ಕನ್ನಡ ಮಾಧ್ಯಮ ಶಾಲೆಗಳು ಉಳಿದರೆ ಕನ್ನಡ ಭಾಷೆ ಉಳಿದು ಬೆಳೆಯಲು ಸಾಧ್ಯ. ಯಾವುದೇ ಕಾರಣಕ್ಕೂ ಕನ್ನಡ ಶಾಲೆಗಳು ಮುಚ್ಚಬಾರದು. ಶಿಕ್ಷಣ, ವ್ಯಾಪಾರ, ಉದ್ಯಮ, ನ್ಯಾಯಾಲಯ ಸಹಿತ ವಿವಿಧ ಕ್ಷೇತ್ರಗಳಲ್ಲಿ ಕನ್ನಡದ ಬಳಕೆ ಹೆಚ್ಚಳಕ್ಕೆ ಪೂರಕವಾಗಿ ಕನ್ನಡ ಸಾಹಿತ್ಯ ಪರಿಷತ್‌ ಮನವಿಯಂತೆ ರಚಿಸಲಾದ ಸಮಗ್ರ ಕನ್ನಡಾಭಿವೃದ್ಧಿ ಕಾನೂನನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಕಸಾಪ ರಾಜ್ಯಾಧ್ಯಕ್ಷ ಡಾ| ಮಹೇಶ ಜೋಷಿ ಸರಕಾರವನ್ನು ಆಗ್ರಹಿಸಿದರು.

ಅವರು ಮಂಗಳವಾರ ಕೋಟ ವಿವೇಕ ವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಆಶ್ರಯದಲ್ಲಿ, ವಿವೇಕ ವಿದ್ಯಾಸಂಸ್ಥೆ ಸಹಕಾರದಲ್ಲಿ ಜರಗಿದ 16ನೇ ಕನ್ನಡ ಸಾಹಿತ್ಯ ಸಮ್ಮೇಳನ “ಅನುಸಂಧಾನ’ವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕನ್ನಡ ಭವನ
ಭಕ್ತ ಕನಕದಾಸರು, ಮಂತ್ರಾಲಯ ರಾಘವೇಂದ್ರ ಸ್ವಾಮಿಗಳು, ಸಂತ ಶಿಶುನಾಳ ಶರೀಫರ ಸಹಿತ ಮಹಾತ್ಮರು ಕನ್ನಡ ಭಾಷೆಯಲ್ಲಿ ವಚನ, ಕೀರ್ತನೆಗಳ ಮೂಲಕ ದೇವರನ್ನು ಒಲಿಸಿಕೊಂಡವರು. ಕನ್ನಡ ಭಾಷೆಗೆ ಅಂತಹ ಶಕ್ತಿ ಇದೆ. ಕರಾವಳಿಯಲ್ಲಿ ಶುದ್ಧ ಕನ್ನಡ ಬಳಕೆಯಲ್ಲಿದೆ. ಸಾಹಿತ್ಯಕ್ಕೆ ಈ ಭಾಗದ ಕೊಡುಗೆ ಅಪಾರ. ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು. ಇದಕ್ಕಾಗಿ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕಸಾಪ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ಮಾತುಗಳನ್ನಾಡಿ, ನಿಷ್ಕಲ್ಮಶ ಮನಸ್ಸು, ಶ್ರದ್ಧೆ, ಪ್ರಾಮಾಣಿಕ ಪ್ರಯತ್ನದಿಂದ ಕನ್ನಡ ಕಾರ್ಯಕ್ರಮ ನಡೆಯಲಿದೆ. ಪ್ರಾದೇಶಿಕ, ಸಾಮಾಜಿಕ, ಪ್ರತಿಭಾ ನ್ಯಾಯಕ್ಕೆ ಈ ಸಮ್ಮೇಳನದಲ್ಲಿ ಅವಕಾಶ ನೀಡಲಾಗಿದೆ ಎಂದರು.

ಕೋಟ ವಿದ್ಯಾಸಂಸ್ಥೆಯ ಅಧ್ಯಕ್ಷ ಸಿ.ಎ. ಪ್ರಭಾಕರ ಮಯ್ಯ ಪುಸ್ತಕ ಮಳಿಗೆಗೆ ಚಾಲನೆ ನೀಡಿದರು. ಹೊರನಾಡ ಕನ್ನಡಿಗ ಹಾಗೂ ವಿದ್ವಾಂಸ ಸಂಶೋಧಕ ಬಾಬು ಶಿವ ಪೂಜಾರಿ ಸಮ್ಮೇಳನಾಧ್ಯಕ್ಷತೆ ವಹಿಸಿದ್ದರು. ಕಸಾಪ ಪೂರ್ವಾಧ್ಯಕ್ಷ ಹರಿಕೃಷ್ಣ ಪುನರೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು. ಹಿಂದಿನ ಸಮ್ಮೇಳನಾಧ್ಯಕ್ಷ, ಹಿರಿಯ ಸಂಶೋಧಕ ಎ.ವಿ. ನಾವಡ ಮಾತನಾಡಿದರು.

ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ, ಉದ್ಯಮಿ ಆನಂದ ಕುಂದರ್‌, ದ.ಕ. ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸ. ನಿರ್ದೇಶಕಿ ಪೂರ್ಣಿಮಾ, ಕೋಟ ಪ.ಪೂ. ಪ್ರಾಂಶುಪಾಲ ಜಗದೀಶ ನಾವಡ, ಕಸಾಪ ತಾಲೂಕು ಅಧ್ಯಕ್ಷರಾದ ರಾಮಚಂದ್ರ ಐತಾಳ, ರವಿರಾಜ್‌ ಎಚ್‌., ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಪುಂಡಲೀಕ ಮರಾಠೆ, ಶ್ರೀನಿವಾಸ ಭಂಡಾರಿ, ಡಾ| ಉಮೇಶ ಪುತ್ರನ್‌, ಡಾ| ರಘು ನಾಯ್ಕ ಮೊದಲಾದವರಿದ್ದರು.

ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ ಸ್ವಾಗತಿಸಿ, ನರೇಂದ್ರ ಕುಮಾರ ಕೋಟ ನಿರೂಪಿಸಿದರು. ಸಾಹಿತಿ ಗೋಪಾಲ ತ್ರಾಸಿ ಸಮ್ಮೇಳನ ಅಧ್ಯಕ್ಷರನ್ನು ಪರಿಚಯಿಸಿದರು. ಸತೀಶ ವಡ್ಡರ್ಸೆ ವಂದಿಸಿದರು.

ಶಿಕ್ಷಕರಿಗೆ ಅನ್ಯ ಜವಾಬ್ದಾರಿ ನೀಡದಿರಿ
ಶಿಕ್ಷಕರನ್ನು ಸರಕಾರಿ ಕೆಲಸಗಳಿಗೆ, ಚುನಾವಣೆಗಳಿಗೆ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು. ಶಿಕ್ಷಕರಿರುವುದು ಮಕ್ಕಳಿಗೆ ಶಿಕ್ಷಣ ನೀಡುವುದಕ್ಕೆ ಹೊರತು ಬಿಸಿಯೂಟ, ಚುನಾವಣೆ ವ್ಯವಸ್ಥೆಯನ್ನು ನೋಡಿಕೊಳ್ಳುವುದಕ್ಕಲ್ಲ. ಆ ಜವಾಬ್ದಾರಿಗೆ ಪ್ರತ್ಯೇಕ ವ್ಯವಸ್ಥೆ ರೂಪುಗೊಳ್ಳಬೇಕು ಎಂದು ಸಮ್ಮೇಳನಾಧ್ಯಕ್ಷ ಬಾಬು ಶಿವ ಪೂಜಾರಿ ಅಭಿಪ್ರಾಯಪಟ್ಟರು.

ಪ್ರಾಜ್ಞರ ಸಮಿತಿ
ಕನ್ನಡ ಶಾಲೆಗಳ ದುಸ್ಥಿತಿಯ ನಿಜ ಕಾರಣಗಳನ್ನು ಪ್ರಾಜ್ಞರ ಸಮಿತಿ ಮೂಲಕ ಕಂಡುಹಿಡಿದು ಅವುಗಳ ಪರಿಹಾರದ ಮಾರ್ಗಗಳನ್ನು ಹುಡುಕ ಬೇಕಾಗಿದೆ. ಆಂಗ್ಲ ಮಾಧ್ಯಮದ ಶಾಲೆಗಳಲ್ಲಿದ್ದಂತೆ ಆಧುನಿಕ ತಂತ್ರಜ್ಞಾನಗಳ ಬಳಕೆಯನ್ನು ಕನ್ನಡ ಸರಕಾರಿ ಶಾಲೆಗಳಲ್ಲಿ ಅಳವಡಿಸಬೇಕು ಎಂದರು.

ಮಂಡ್ಯ ಜಿಲ್ಲೆ: ಶೀಘ್ರ
ಅಖಿಲ ಭಾರತ ಕನ್ನಡ
ಸಾಹಿತ್ಯ ಸಮ್ಮೇಳನ
ಕೋಟ: ಅಖಿಲ ಭಾರತ ಮಟ್ಟದ 87ನೇ ಸಾಹಿತ್ಯ ಸಮ್ಮೇಳನ ಮಂಡ್ಯ ಜಿಲ್ಲೆಯಲ್ಲಿ ನಡೆಯಬೇಕಿದೆ. ಆದರೆ ಮಂಡ್ಯದಲ್ಲಿ ಬರ ಘೋಷಣೆಯಾಗಿ ರುವುದರಿಂದ, ಕಾವೇರಿ ನೀರಿನ ವಿಚಾರದಲ್ಲಿ ಸಮಸ್ಯೆ ಇರುವುದರಿಂದ ಸಮ್ಮೇಳನದ ಮೂಲಕ ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವ ನಿಟ್ಟಿನಲ್ಲಿ ಕಾರ್ಯಕ್ರಮ ಮುಂದೂಡಲಾಗಿತ್ತು. ಬೆಳಗಾವಿ ಅಧಿವೇಶನ ಮುಗಿಯುತ್ತಿದ್ದಂತೆ ಮಂಡ್ಯದ ಉಸ್ತುವಾರಿ ಸಚಿವರೊಂದಿಗೆ ಚರ್ಚೆ ನಡೆಸಿ 2024ರ ಆರಂಭದಲ್ಲೇ ಸಮ್ಮೇಳನ ನಡೆಸಲು ತಯಾರಿ ನಡೆಸುತ್ತೇವೆ ಎಂದು ಕಸಾಪ ರಾಜ್ಯಾಧ್ಯಕ್ಷ ಡಾ| ಮಹೇಶ್‌ ಜೋಷಿ ಮಂಗಳವಾರ ಕೋಟದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕನ್ನಡ ಶಾಲೆಗಾಗಿ ಹೊಸ ಹೋರಾಟ
ಕನ್ನಡ ಶಾಲೆಗಳ ಉಳಿವಿಗಾಗಿ ಶಾಲೆಗಳ ಮೂಲಸೌಕರ್ಯ ಬಲಗೊಳ್ಳಬೇಕು. ಇದಕ್ಕಾಗಿ ಈಗಾಗಲೇ ನಾಡಿನ ಖ್ಯಾತ ಸಾಹಿತಿಗಳು, ಸಾಮಾಜಿಕ ಹೋರಾಟಗಾರರು, ಮಠಾಧೀಶರು ಸೇರಿದಂತೆ 200ಕ್ಕೂ ಹೆಚ್ಚು ಮಂದಿ ಚಿಂತಕರ ಸಭೆ ಕರೆಯಲಾಗಿದೆ. ಅವರೊಂದಿಗೆ ಚರ್ಚಿಸಿ ಹೋರಾಟದ ರೂಪರೇಖೆ ನಿರ್ಧರಿಸಲಾಗುವುದು ಮತ್ತು ಶಾಲೆಗಳ ದುಃಸ್ಥಿತಿ ಸುಧಾರಣೆಗಾಗಿ ಉಚ್ಚನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ಹೂಡಲಾಗುವುದು ಎಂದರು.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.