ಬಿಜೆಪಿ ಸಚಿವರಿಗೆ ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನೆ
Team Udayavani, Aug 6, 2021, 7:45 AM IST
ಕುಂದಾಪುರ: ಬಸವರಾಜ ಬೊಮ್ಮಾಯಿ ಮಂತ್ರಿ ಮಂಡಲದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿನಂದನೆ ಸಲ್ಲಿಸಿ, ಕಾಂಗ್ರೆಸ್ ಕಾರ್ಯಕರ್ತರು ಹಾಕಲಾದ ಬ್ಯಾನರ್ನ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಮೂರನೇ ಬಾರಿಗೆ ರಾಜ್ಯ ಸರಕಾರದ ಸಚಿವರಾಗಿ ಬುಧವಾರವಷ್ಟೇ ಪ್ರಮಾಣವಚನ ಸ್ವೀಕರಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಶೇಡಿಮನೆ ವಾರ್ಡಿನ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿ, ಹಾಕಿದ ಬ್ಯಾನರ್ವೊಂದರ ಚಿತ್ರ ಎಲ್ಲೆಡೆ ಹರಿದಾಡುತ್ತಿದೆ. ಈ ಬಗ್ಗೆ ಜಾಲತಾಣಗಳಲ್ಲಿ ಬೇರೆ ಬೇರೆ ರೀತಿಯ ಚರ್ಚೆಗಳು ಶುರುವಾಗಿದೆ.