
ಮೀನುಗಾರರ ಸಾಲ ಮನ್ನಾ: 1.50 ಕೋಟಿ ರೂ. ವಂಚನೆ
Team Udayavani, Sep 10, 2022, 12:27 AM IST

ಉಪ್ಪುಂದ: ಮಹಿಳಾ ಮೀನುಗಾರರ ಸಾಲ ಮನ್ನಾ ಯೋಜನೆ ದುರುಪಯೋಗಪಡಿಸಿಕೊಂಡು 1.50 ಕೋ.ರೂ. ವಂಚನೆ ಮಾಡಿರುವುದಾಗಿ ಉಪ್ಪುಂದ ಶ್ರೀ ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವಿರುದ್ಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮೊತ್ತದ ವಂಚನೆ ಆಗಿರುವುದರಿಂದ ಪ್ರಕರಣದ ತನಿಖೆಯನ್ನು ಉಡುಪಿಯ ಸೆನ್ ಠಾಣೆಗೆ ವರ್ಗಾಯಿಸಲಾಗಿದೆ.
ಮೂಕಾಂಬಿಕಾ ವಿವಿದೋದ್ಧೇಶ ಸಹಕಾರಿ ಸಂಘದ ಉಪಾಧ್ಯಕ್ಷ ರಾಮ ಖಾರ್ವಿ ಅವರು ನೀಡಿದ ದೂರಿನಂತೆ ಸಂಘದ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಶ್ರೀ ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ರಚಿಸಿಕೊಂಡಿದ್ದು, ಅದರ ಹೆಸರಲ್ಲಿ ಚೇರ್ಮನ್ ಬೇಬಿ ಕೊಠಾರಿ, ಕಾರ್ಯದರ್ಶಿ ಹರೀಶ್ ಖಾರ್ವಿ, ಖಜಾಂಚಿ ರಾಮದಾಸ ಖಾರ್ವಿ ಅವರು ಯೂನಿಯನ್ ಬ್ಯಾಂಕಿನ ಕೊಲ್ಲೂರು ಶಾಖಾ ವ್ಯವಸ್ಥಾಪಕ ರಾಮಕೃಷ್ಣ ದೇವಾಡಿಗರೊಂದಿಗೆ ಒಳ ಒಪ್ಪಂದ ಮಾಡಿಕೊಂಡು, ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸಾಲ ಮನ್ನಾ ಮಾಡಿಸಿಕೊಂಡು ಹಣ ದುರ್ಬಳಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ವಂಚನೆ ಹೇಗೆ?
ಈ ಟ್ರಸ್ಟ್ ಕೊಲ್ಲೂರು ಯೂನಿಯನ್ ಬ್ಯಾಂಕ್‌ನಲ್ಲಿ 100ಕ್ಕೂ ಹೆಚ್ಚು ಮಹಿಳಾ ಮೀನುಗಾರರು ಹೊರತಾಗಿರುವ ಸಂಘಗಳ ಸಾಲವನ್ನು ಮೀನುಗಾರರ ಸಾಲ ಎಂದು ಅರ್ಜಿ ಸಲ್ಲಿಸಿ ಮನ್ನಾ ಮಾಡಿಸಿಕೊಂಡಿದೆ. ಸುಮಾರು 1.50 ಕೋ.ರೂ.ಗೂ ಮಿಕ್ಕಿ ಸಾಲ ಮನ್ನಾ ಆಗಿರುವುದು ಕಂಡುಬಂದಿದೆ. ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಕಡಿಮೆ ಬಡ್ಡಿಗೆ ಶೇ. 10ಕ್ಕೆ ಸಾಲ ಮಂಜೂರು ಮಾಡಿಸಿ, ತಮ್ಮ ಟ್ರಸ್ಟ್ ಸಾಲ ಕೊಟ್ಟ ರೀತಿ ಬಿಂಬಿಸಿ, ಸಾಲ ಮರುಪಾವತಿ ಸಮಯದಲ್ಲಿ ಶೇ. 14 ಬಡ್ಡಿ ದರದಂತೆ ಟ್ರಸ್ಟ್ ಹೆಸರಿನ ಪಾಸ್ ಪುಸ್ತಕದಲ್ಲಿ ಅಸಲು ಮತ್ತು ಬಡ್ಡಿ ನಮೂದಿಸಿ ಸಾಲ ವಸೂಲಿ ಮಾಡುತ್ತಿದ್ದಾರೆ. ಮಾತ್ರವಲ್ಲದೇ ರಾಷ್ಟ್ರೀಕೃತ ಬ್ಯಾಂಕಿನಿಂದ ತೆಗೆದ ಸಾಲದ ಎಲ್ಲ ವಿವರವನ್ನು ತಮ್ಮಲ್ಲಿ ಇಟ್ಟುಕೊಂಡು ಟ್ರಸ್ಟ್ ಹೆಸರಿನ ಪಾಸ್ ಪುಸ್ತಕದಲ್ಲಿ ಸಾಲದ ವಿವರ ತಿಳಿಸಿದ್ದಾರೆ ಎಂಬ ಬಗ್ಗೆ ದೂರು ದಾಖಲಾಗಿದೆ.
ಸರಕಾರದಿಂದ ಸಾಲ ಮನ್ನಾ ಆಗಿರುವ ಹಣವು ಸ್ವಸಹಾಯ ಸಂಘಗಳ ಬ್ಯಾಂಕ್ ಖಾತೆಗೆ ಜಮೆಯಾಗಿದೆ. ಆದರೆ ಇದನ್ನು ಸಂಘದ ಸದಸ್ಯರ ಗಮನಕ್ಕೆ ತರದೆ ಡ್ರಾ ಮಾಡಿರುವುದು ಮತ್ತು ಟ್ರಸ್ಟ್‌ನ ಖಾತೆಗೆ ವರ್ಗಾವಣೆ ಮಾಡಿದ್ದರಿಂದ ವಂಚನೆ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
