ಗುಜ್ಜಾಡಿ: ಬೇಸಗೆ ಆರಂಭಕ್ಕೆ ಮೊದಲೇ ಬತ್ತುತ್ತಿವೆ ಬಾವಿಗಳು

ನೂರಾರು ಮನೆಗಳಿಗೆ ಕುಡಿಯುವ ನೀರಿನ ಸಮಸ್ಯೆ , ತುರ್ತು ಅನುದಾನ ಬಿಡುಗಡೆಗೆ ಬೇಡಿಕೆ

Team Udayavani, Jan 28, 2021, 3:00 AM IST

ಗುಜ್ಜಾಡಿ: ಬೇಸಗೆ ಆರಂಭಕ್ಕೆ ಮೊದಲೇ ಬತ್ತುತ್ತಿವೆ ಬಾವಿಗಳು

ಕುಂದಾಪುರ: ಗುಜ್ಜಾಡಿ ಗ್ರಾಮದ ಅನೇಕ ಕಡೆಗಳಲ್ಲಿ ಬಾವಿಗಳು ಈಗಿನಿಂದಲೇ ನೀರು ಖಾಲಿಯಾಗಿ ಬತ್ತುತ್ತಿದ್ದು, ಇಲ್ಲಿನ 3-4 ವಾರ್ಡ್‌ಗಳ ನೂರಾರು ಮನೆಗಳಿಗೆ ಈಗಿನಿಂದಲೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಇಲ್ಲಿನ ಜನತಾ ಕಾಲನಿ,ಮಂಕಿ, ಕಳಿಹಿತ್ಲು, ಭಾರತ್‌ ನಗರ ಭಾಗದಲ್ಲಿ ನೀರಿನ ಸಮಸ್ಯೆ ಉದ್ಭವವಾಗಿದ್ದು, ಜನರಿಗೆ ಸಂಕಷ್ಟಪಡುವಂತಾಗಿದೆ.

ಪ್ರತಿ ವರ್ಷ ಫೆಬ್ರವರಿ ಕೊನೆಯ ವಾರದಿಂದ ನೀರಿನ ಸಮಸ್ಯೆ ಕಾಣಿಸುತ್ತಿದ್ದು, ಈ ಬಾರಿ ಜನವರಿಯಿಂದಲೇ ಮನೆಗಳ ಬಾವಿಯ ನೀರು ತಳಮಟ್ಟಕ್ಕೆ ಇಳಿದಿರುವುದರಿಂದ ಈ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ. ಈಗಾಗಲೇ 2-3 ಕಡೆಗಳಲ್ಲಿ ಬಾವಿಗಳಲ್ಲಿ ನೀರು ಬತ್ತಿ ಹೋಗಿವೆ.

ಗುಜ್ಜಾಡಿ ಗ್ರಾಮದ 5 ವಾರ್ಡ್‌ಗಳಿಗೆ ಗ್ರಾ.ಪಂ.ನಿಂದ ಒಂದು ದಿನ ಬಿಟ್ಟು ದಿನ ನಳ್ಳಿ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಕೆಲವು ವಾರ್ಡ್‌

ಗಳ ಎತ್ತರದ ಪ್ರದೇಶಗಳಲ್ಲಿರುವ ಮನೆಗಳಿಗೆ ಸೇರಿದಂತೆ ಕೆಲವು ಮನೆಗಳಿಗೆ ನೀರು ಸಮರ್ಪಕವಾಗಿ ಸಿಗುತ್ತಿಲ್ಲ ಎನ್ನುವುದಾಗಿ ಗ್ರಾಮಸ್ಥರು ದೂರಿದ್ದಾರೆ.

ಎಷ್ಟು ಮನೆಗಳಿಗೆ ಸಮಸ್ಯೆ :

ಮಂಕಿ ವಾರ್ಡ್‌ನ 50-60 ಮನೆ, ಕಳಿಹಿತ್ಲು ವಾರ್ಡ್‌ನ 50 ಮನೆ, ಜನತಾ ಕಾಲನಿಯ 100 ಮನೆ, ಭಾರತ್‌ ನಗರ ಭಾಗದ 100 ಮನೆ ಸೇರಿದಂತೆ ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ 300ಕ್ಕೂ ಅಧಿಕ ಮನೆಗಳಿಗೆ ನೀರಿನ ಸಮಸ್ಯೆ ಎದುರಾಗಿದೆ. ಅದರಲ್ಲೂ ಕಳಿಹಿತ್ಲು ಭಾಗದಲ್ಲಿ ಉಪ್ಪು ನೀರಿನ ಸಮಸ್ಯೆಯೂ ಇದೆ. ಬಾವಿಗಳಲ್ಲಿ ಇರುವ ನೀರು ಉಪ್ಪಾಗಿದ್ದು, ಕುಡಿಯಲು, ಅಡುಗೆ, ಇತರ ಬಳಕೆಗೂ ಕಷ್ಟ. ಈ ಭಾಗಕ್ಕೆ ಪ್ರತಿದಿನ ನೀರು ನೀಡಬೇಕು ಎನ್ನುವುದಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಓವರ್‌ ಹೆಡ್‌ ಟ್ಯಾಂಕ್‌  :

ಗುಜ್ಜಾಡಿ ಗ್ರಾಮ ಪಂಚಾಯ ತ್‌ ಕಚೇರಿ ಸಮೀಪದಲ್ಲೇ ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್‌ ಮುತುವರ್ಜಿಯಲ್ಲಿ ಅಂದಾಜು 40 ಲಕ್ಷ ರೂ. ವೆಚ್ಚದಲ್ಲಿ 50 ಸಾವಿರ ಲೀ. ನೀರಿನ ಸಾಮರ್ಥ್ಯದ ಓವರ್‌ ಹೆಡ್‌ ಟ್ಯಾಂಕ್‌ ಹಾಗೂ ಬಾವಿ ನಿರ್ಮಾಣವಾಗುತ್ತಿದೆ. ಇದು ಪೂರ್ಣಗೊಂಡಲ್ಲಿ ಜನತಾ ಕಾಲನಿ, ಭಾರತ್‌ನಗರ ಮತ್ತಿತರ ಭಾಗಗಳಿಗೆ ನೀರು ಪೂರೈಕೆಗೆ ಅನುಕೂಲವಾಗಬಹುದು.

ಈಗಾಗಲೇ ಗುಜ್ಜಾಡಿ ಪಂಚಾಯತ್‌ ವ್ಯಾಪ್ತಿಯಲ್ಲಿ ಅವಧಿಗೂ ಮುನ್ನವೇ ಕೆಲವು ಬಾವಿಗಳು ಬತ್ತಿ ಹೋಗಿದ್ದು, ಕೆಲವು ಬಾವಿಗಳ ನೀರು ತಳಕ್ಕೆ ಇಳಿದಿವೆ. ತುರ್ತಾಗಿ ನೀರಿನ ಪೂರೈಕೆಗೆ ಈಗಾಗಲೇ ಸಂಬಂಧಪಟ್ಟ ಕುಡಿಯುವ ನೀರಿನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಬಳಿ ಮಾತನಾಡಿದ್ದು, ವ್ಯವಸ್ಥೆ ಮಾಡಲು ಸೂಚಿಸಿದ್ದಾರೆ. ಜಲಜೀವನ್‌ ಮಿಷನ್‌ನಡಿ ಕೂಡ ಅನುದಾನ ಕೇಳಲಾಗಿದೆ.– ಶೋಭಾ, ಪಿಡಿಒ ಗುಜ್ಜಾಡಿ ಗ್ರಾ.ಪಂ.

ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ ಹಲವೆಡೆಗಳಲ್ಲಿ ನೀರಿನ ಸಮಸ್ಯೆ ಉದ್ಭವವಾಗಿದ್ದು, ಗ್ರಾ.ಪಂ.ನಿಂದ ಸಾಧ್ಯವಾದಷ್ಟರ ಮಟ್ಟಿಗೆ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ಈ ಬಗ್ಗೆ ಶಾಸಕರಿಗೂ ಮನವಿ ಮಾಡಿಕೊಳ್ಳಲಾಗಿದೆ. ಜಲಜೀವನ್‌ ಮಿಷನ್‌ನಡಿ ಅನುದಾನ ಬಂದಲ್ಲಿ ಅನುಕೂಲವಾಗಬಹುದು. ಓವರ್‌ಹೆಡ್‌ ಟ್ಯಾಂಕ್‌ ಹಾಗೂ ಬಾವಿ ಆಗುತ್ತಿದ್ದು, ಇದರಿಂದ ಜನತಾ ಕಾಲನಿ ಮತ್ತಿತರ ಕೆಲವೆಡೆಗಳಿಗೆ ನೀರು ಪೂರೈಸಬಹುದು. – ಹರೀಶ್‌ ಮೇಸ್ತ, ಮಾಜಿ ಅಧ್ಯಕ್ಷರು, ಗುಜ್ಜಾಡಿ ಗ್ರಾ.ಪಂ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.