ನಮ್ಮ ರಾಜ್ಯದಲ್ಲಿಯೂ ಹೆಚ್ಚಿನ ಪ್ರೋತ್ಸಾಹ ನೀಡಿ: ಗುರುರಾಜ್‌ ಪೂಜಾರಿ ಮನವಿ

ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಸಾಧಕರು

Team Udayavani, Aug 17, 2022, 7:10 AM IST

ನಮ್ಮ ರಾಜ್ಯದಲ್ಲಿಯೂ ಹೆಚ್ಚಿನ ಪ್ರೋತ್ಸಾಹ ನೀಡಿ: ಗುರುರಾಜ್‌ ಪೂಜಾರಿ ಮನವಿ

ಕುಂದಾಪುರ: ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಸಾಧಕರಿಗೆ ಅನ್ಯ ರಾಜ್ಯಗಳಂತೆ ನಮ್ಮ ರಾಜ್ಯದಲ್ಲಿಯೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಕುಂದಾಪುರದ ಗುರುರಾಜ್‌ ಪೂಜಾರಿ ಅವರು ಸಿಎಂ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಕಾಮನ್ವೆಲ್ತ್‌ನಲ್ಲಿ ಪದಕ ಗೆದ್ದವರಿಗೆ ನೀಡುವ ಪ್ರೋತ್ಸಾಹಧನ ತೀರಾ ಕಡಿಮೆ. ನಾನು ಕಳೆದ ಬಾರಿ ಬೆಳ್ಳಿ ಗೆದ್ದಾಗ ಆಗಿನ ಸರಕಾರ 25 ಲಕ್ಷ ರೂ. ನೀಡಿತ್ತು. ಪದಕ ವಿಜೇತರಿಗೆ ಪ್ರೋತ್ಸಾಹಧನ ಹೆಚ್ಚಿಸಿದರೆ ಇನ್ನಷ್ಟು ಸಾಧನೆ ಮಾಡಲು ಉತ್ತೇಜನ ಲಭಿಸುತ್ತದೆ ಎಂದು ಗುರುರಾಜ್‌ ತಿಳಿಸಿದರು.

ರಾಜ್ಯದಲ್ಲೇ ಉದ್ಯೋಗಕ್ಕೆ ಮನವಿ
ಸದ್ಯ ಚಂಡೀಗಢದಲ್ಲಿ ಭಾರತೀಯ ವಾಯುಸೇನೆಯ ಜೂನಿಯರ್‌ ವಾರಂಟ್‌ ಆಫೀಸರ್‌ ಆಗಿದ್ದೇನೆ. ಪದಕ ವಿಜೇತರಿಗೆ ರಾಜ್ಯದಲ್ಲೇ ಸರಕಾರಿ ಉದ್ಯೋಗ ನೀಡುವ ಪ್ರಸ್ತಾವ ಸರಕಾರದ ಮುಂದಿದೆ. ನನಗೂ ರಾಜ್ಯದಲ್ಲಿಯೇ ಸೂಕ್ತ ಹುದ್ದೆ ನೀಡಿ, ತರಬೇತಿಗೆ ಅವಕಾಶ ಒದಗಿಸಬೇಕು. ಮುಂಬರುವ ಏಷ್ಯನ್‌ ಗೇಮ್ಸ್‌, ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡು ಪದಕ ಗೆಲ್ಲುವ ವಿಶ್ವಾಸವಿದೆ. ಅದಕ್ಕಾಗಿ ಕಠಿನ ಅಭ್ಯಾಸ, ತರಬೇತಿಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ನಿವೇಶನಕ್ಕೆ ಪ್ರಸ್ತಾವ
ನಮ್ಮದು ಬಡ ಕುಟುಂಬವಾಗಿದ್ದು, ತಂದೆ ಚಾಲಕ ವೃತ್ತಿ ಮಾಡಿಕೊಂಡು ಕೂಡು ಕುಟುಂಬವನ್ನು ಸಲಹುತ್ತಿದ್ದಾರೆ. ನಮಗೆ ಸ್ವಲ್ಪ ಕೃಷಿ ಭೂಮಿಯಷ್ಟೇ ಇದೆ. ಸರಕಾರ ನಿವೇಶನ ಮಂಜೂರು ಮಾಡಿದರೆ ಮನೆ ಕಟ್ಟಲು ಅನುಕೂಲವಾಗುತ್ತದೆ ಎಂದೂ ಗುರುರಾಜ್‌ ಪೂಜಾರಿ ಸಿಎಂ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.