ಪಂಚಾಯತ್‌ ಚುನಾವಣೆಗೆ ತಾಲೀಮು

ನ. 3ನೇ ವಾರ ಘೋಷಣೆಗೆ ಸಿದ್ಧತೆ? ; ಸಂಭಾವ್ಯ ಅಭ್ಯರ್ಥಿಗಳು ರೆಡಿ

Team Udayavani, Oct 31, 2020, 1:52 AM IST

Vote

ಸಾಂದರ್ಭಿಕ ಚಿತ್ರ

ಕುಂದಾಪುರ: ಗ್ರಾಮ ಪಂಚಾಯತ್‌ ಚುನಾವಣೆಗೆ ದಿನಗಣನೆ ನಡೆಯುತ್ತಿದ್ದು, ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಘೋಷಣೆಯಾಗಬಹುದಾದ ಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಚಟುವಟಿಕೆಗಳು ಗ್ರಾಮಗಳಲ್ಲಿ ಬಿರುಸು ಪಡೆದುಕೊಂಡಿದೆ.

ಸಂಭಾವ್ಯ ಅಭ್ಯರ್ಥಿಗಳಂತೂ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಚಾರ, ಗ್ರಾಮ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆಯೇ ಪ್ರಮುಖವಾಗಿ ಪ್ರಸ್ತಾಪಿಸಿ, ಜನ ರನ್ನು ಸೆಳೆಯುವತ್ತ ಈಗಾಗಲೇ ತಾಲೀಮು ನಡೆಸತೊಡಗಿದ್ದಾರೆ. ಆದರೆ ಚುನಾವಣೆ ನಡೆಸುವ ಬಗ್ಗೆ ಪರ ವಿರೋಧದ ಪ್ರತಿಕ್ರಿಯೆಗಳು ಕಂಡುಬಂದಿದ್ದು, ಇದೇ ನೆವದಿಂದಲೇ ನ್ಯಾಯಾಲ ಯಕ್ಕೂ ಹೋಗಲಾಗಿತ್ತು. ಚುನಾವಣೆ ಸದ್ಯ ನಡೆಯುವ ಸಾಧ್ಯತೆ ಇಲ್ಲದ ಕಾರಣ ನಮ್ಮನ್ನೇ ಮುಂದುವರಿಸಿ ಎಂದು ಈ ಹಿಂದೆ ಚುನಾಯಿತರಾದವರ ಅರ್ಜಿ ಸಂವಿಧಾನದ ಆಶಯಗಳಿಗೆ ವಿರುದ್ಧ ಎಂದು ಪರಿಗಣಿಸಿ ನ್ಯಾಯಾಲಯ ಮನವಿಯನ್ನು ತಳ್ಳಿ ಹಾಕಿತ್ತು. ಒಂದು ವೇಳೆ ಚುನಾವಣೆ ನಡೆದರೂ ಮೂರನೇ ಎರಡಂಶ ಸದಸ್ಯರ ಆಯ್ಕೆಯಾಗದೇ ಇದ್ದರೆ ಅಥವಾ ಹೊಸದಾಗಿ ಪಂಚಾಯತ್‌ ರಚನೆಯಾದರೆ ಚುನಾವಣೆ ವರೆಗೆ ಆಡಳಿತಾಧಿಕಾರಿ ನೇಮಿಸಬಹುದು ಎಂಬ ನಿಯಮ ಇದೆ. ಆದರೆ ಚುನಾವಣೆಯನ್ನೇ ನಡೆಸದೇ ಆಡಳಿತಾಧಿ ಕಾರಿಯ ನೇಮಕ ಮಾಡಿದ್ದು ಸಂವಿಧಾನ ಬಾಹಿರ. ಅಷ್ಟಲ್ಲದೇ ಆಡಳಿತಾಧಿಕಾರಿ ಯೊಬ್ಬರನ್ನು ಸಮಗ್ರ ಗ್ರಾಮ ಪಂಚಾಯತ್‌ ಎಂದು ಭಾವಿಸಿ ಅಧಿಕಾರ ಚಲಾವಣೆಗೆ ಅವಕಾಶ ನೀಡಿದ್ದು ಕೂಡ ಸರಿಯಲ್ಲ ಎನ್ನುತ್ತಾರೆ ಗಾ.ಪಂ. ಹಕ್ಕೊತ್ತಾಯ ಆಂದೋಲನದ ಕಾರ್ಯಕರ್ತೆ ಕೃಪಾ ಎಂ.ಎಂ. ಅವರು.

ಪಕ್ಷಗಳ ಸಿದ್ಧತೆ
ಇತ್ತ ರಾಜಕೀಯ ಪಕ್ಷಗಳೂ ಅಭ್ಯರ್ಥಿಗಳನ್ನು ಬೆಂಬಲಿಸುವ ಬಗ್ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಚುನಾವಣೆ ರಣಕಣವನ್ನು ಮತ್ತಷ್ಟು ರಂಗೇರಿಸುವಂತೆ ಮಾಡಿದೆ. ಬೆಂಬಲಿತ ಅಭ್ಯರ್ಥಿಗಳ ಯಾದಿಯ ಬಗ್ಗೆ ಈಗಾಗಲೇ ಕಾಂಗ್ರೆಸ್‌ ಶೇ.90ರಷ್ಟು ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಚುನಾವಣೆ ದಿನಾಂಕ ಘೋಷಣೆಯಾದ ಬಳಿಕವಷ್ಟೇ ತೀರ್ಮಾನ ಮಾಡಲು ಬಿಜೆಪಿ ಚಿಂತಿಸಿದೆ ಎಂದು ಮೂಲಗಳು ಹೇಳಿವೆ.

ಯಾವಾಗ ಘೋಷಣೆ?
ಜೂನ್‌ ಅಂತ್ಯದಲ್ಲಿ ಪಂಚಾಯತ್‌ಗಳ ಅವಧಿ ಮುಕ್ತಾಯವಾಗಿದ್ದು ಆಡಳಿತಾಧಿಕಾರಿಗಳ ನೇಮಕವಾಗಿದೆ. ಆಡಳಿತಾವಧಿ ಮುಗಿದು 6 ತಿಂಗಳ ಒಳಗೆ ಚುನಾವಣೆ ನಡೆಸಬೇಕು. ಅದಕ್ಕಾಗಿ ಚುನಾವಣಾ ಆಯೋಗ ಎಲ್ಲ ಸಿದ್ಧತೆ ನಡೆಸಿದೆ. ನ್ಯಾಯಾಲಯದಲ್ಲಿ ಈ ಕುರಿತ‌ ಅರ್ಜಿಯ ವಿಚಾರಣೆ ನಡೆಯುತ್ತಿದ್ದು ಸರಕಾರ ಸಹಕಾರ ನೀಡುವುದಾಗಿ ಹೇಳಿದೆ. ಮೂಲಗಳ ಪ್ರಕಾರ ಎಲ್ಲ ಸರಿಹೋದರೆ ನವೆಂಬರ್‌ ಮೂರನೇ ವಾರದಲ್ಲಿ ಆಯೋಗ ಚುನಾವಣಾ ದಿನಾಂಕಗಳನ್ನು ಘೋಷಿಸಲು ಸಿದ್ಧತೆ ಮಾಡಿಕೊಂಡಿದೆ. ತಾಲೂಕುವಾರು ಚುನಾವಣೆ ನಡೆಸಬೇಕೆಂದು ಬಯಸಿದ್ದು ಇದಕ್ಕಾಗಿ ಆಡಳಿತ ಯಂತ್ರಕ್ಕೆ ಸೂಚನೆ ನೀಡಲಾಗಿದೆ. ಒಂದು ದಿನ ಜಿಲ್ಲೆಯ ಒಂದು ಅಥವಾ ಎರಡು ತಾಲೂಕುಗಳಲ್ಲಿ ಮಾತ್ರ ಚುನಾವಣೆ ನಡೆಸುವ ಕುರಿತು ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ. ಇದಕ್ಕಾಗಿ ಬಿಹಾರ ವಿಧಾನಸಭೆ ಚುನಾವಣೆಯ ಒಳಿತು ಕೆಡುಕುಗಳ ವಿಶ್ಲೇಷಣೆ ಕೂಡ ನಡೆಯುತ್ತಿದೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.