ಕುಂದಾಪುರ ಸಂಚಾರ ಠಾಣಾ ಸಿಬ್ಬಂದಿಗೆ ಸೋಂಕು ದೃಢ: ಎರಡು ದಿನ ಠಾಣೆ ಸೀಲ್ ಡೌನ್
Team Udayavani, Jul 5, 2020, 12:37 PM IST
ಕುಂದಾಪುರ: ಇಲ್ಲಿನ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿಯೋರ್ವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಕೋವಿಡ್-19 ಸೋಂಕು ದೃಢಪಟ್ಟ ಪೊಲೀಸ್ ಸಿಬ್ಬಂದಿಯವರನ್ನು ಕುಂದಾಪುರ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗುವುದು. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗುವುದು. ಈ ಸಮಯದಲ್ಲಿ ಇಲ್ಲಿನ ಪ್ರವಾಸಿ ಬಂಗಲೆಯಲ್ಲಿ ತಾತ್ಕಾಲಿಕ ಠಾಣೆಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕುಂದಾಪುರ ಉಪವಿಭಾಗ ಎಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಶನಿವಾರ ಸಂಜೆಯ ವರದಿಯ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 1277ಕ್ಕೆ ಏರಿಕೆಯಾಗಿದೆ. ಶನಿವಾರ 19 ಜನರಿಗೆ ಸೋಂಕು ತಾಗಿರುವುದು ದೃಢವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ