ಹೆಸ್ಕಾತ್ತೂರು: ಭೀಕರ ಗಾಳಿ ಮಳೆಗೆ ಹಲವು ಮನೆಗಳಿಗೆ ಹಾನಿ

Team Udayavani, May 18, 2022, 9:56 AM IST

rain

ತೆಕ್ಕಟ್ಟೆ: ಭಾರೀ ಗಾಳಿ ಮಳೆಗೆ ಕೊರ್ಗಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ಮನೆಗಳ ಮೇಲ್ಛಾವಣೆ ಹಾರಿ ಹೋಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಮೇ 17ರಂದು ಸಂಭವಿಸಿದೆ.

ಮನೆಗುರುಳಿದ ತೆಂಗಿನ ಮರ

ಇಲ್ಲಿನ ಹ್ಯಾರಾಡಿ ಎಂಬಲ್ಲಿ ಹೇಮಾ ಮೊಗವೀರ ಅವರ ಮನೆಯ ಮೇಲೆ ರಾತ್ರಿ ತೆಂಗಿನ ಮರವೊಂದು ಬಿದ್ದು ಮನೆಯ ಮೇಲ್ಛಾವಣಿಗೆ ಹಾಕಲಾದ ಮರದ ಪಕ್ಕಾಸು ಹಾಗೂ ಅಪಾರ ಪ್ರಮಾಣದ ಹೆಂಚುಗಳು ಒಡೆದು ಹೋಗಿವೆ. ಅಲ್ಲದೆ ಮನೆಯ ಟಿವಿ, ಸೋಲಾರ್‌ ದೀಪ ಹಾಗೂ ಮರ ಟೇಬಲ್‌ ಗಳಿಗೆ ಹಾನಿಯಾಗಿದ್ದು ಸುಮಾರು 1 ಲಕ್ಷ ರೂ.ಗೂ ಅಧಿಕ ಮೊತ್ತದ ಹಾನಿ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಸಂದರ್ಭ ಮನೆಯ ಸದಸ್ಯ ಸುಜನ್‌ ಎನ್ನುವವರ ತಲೆಯ ಮೇಲೆ ಒಡೆದ ಹೆಂಚು ಬಿದ್ದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತತ್‌ಕ್ಷಣವೇ ಸ್ಥಳೀಯರ ಸಹಕಾರದಿಂದ ತೆಂಗಿನ ಮರವನ್ನು ತೆರವುಗೊಳಿಸಲಾಯಿತು.

ಇಲ್ಲಿನ ಹಿರಿಯರಾದ ಮಿಣ್ಕ ಮೊಗವೀರ ಅವರ ಮನೆ ಮೇಲ್ಛಾವಣಿ ಹಾಗೂ ಮನೆಯ ಗೋಡೆ ಕುಸಿತಗೊಂಡಿದೆ ಹಾಗೂ ಕಟ್ಟಿನಬುಡದ ಮಹಾಬಲ ಕುಲಾಲ ಅವರ ಮನೆಯ ಸ್ನಾನಗೃಹಕ್ಕೆ ಅಳವಡಿಸಿದ ಮೇಲ್ಛಾವಣಿಯ ತಗಡಿನ ಶೀಟ್‌ಗಳು ಹಾರಿಹೋಗಿದೆ.

ಸಂಜೀವ ಮಡಿವಾಳ ಎನ್ನುವವರ ಮನೆಯ ಮೇಲ್ಛಾವಣೆಯ ಶೀಟ್‌ಗಳು ಹಾರಿಹೋಗಿದ್ದು, ಹಲಸಿನ ಮರ ಹಾಗೂ ಸುಮಾರು 4 ಅಡಿಕೆ ಮರಗಳು ತುಂಡಾಗಿ ಧರೆಗುರುಳಿವೆ. ಇಲ್ಲಿನ ಭೋವಿಕಟ್ಟೆ ಸಮೀಪದ ಪ್ರಮುಖ ಸಂಪರ್ಕ ರಸ್ತೆಯಲ್ಲಿ ವಿದ್ಯುತ್‌ ಸಂಪರ್ಕ ತಂತಿಗಳ ಮೇಲೆ ಮರವೊಂದು ಎರಗಿದೆ.

ಹಾರಿಹೋದ ಮೇಲ್ಛಾವಣಿ

ಹೆಸ್ಕಾತ್ತೂರು ಸರಕಾರಿ ಪ್ರಾಥಮಿಕ ಶಾಲಾ ಸಮೀಪದ ಸಾಧು ಪೂಜಾರಿ ಅವರ ಮನೆಯ ಮೇಲ್ಛಾವಣಿ ಹಾರಿಹೋಗಿದ್ದು ಸುಮಾರು 70 ಸಾವಿರ ರೂ.ಗೂ ಅಧಿಕ ನಷ್ಟ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಅವರ ಪುತ್ರಿ ಕುಸುಮಾ ಹಾಗೂ ಮಕ್ಕಳು ವಾಸವಾಗಿದ್ದು ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.

ಸರಕಾರಿ ಶಾಲೆಗಳಿಗೆ ಹಾನಿ

ಹೆಸ್ಕಾತ್ತೂರು ಸರಕಾರಿ ಪ್ರೌಢಶಾಲೆಯ ಕಟ್ಟಡದ ಮೊದಲ ಮಹಡಿಯಲ್ಲಿ ಹಾಕಲಾದ ಸಿಮೆಂಟ್‌ ಶೀಟ್‌ಗಳು ಸಂಪೂರ್ಣ ಹಾನಿಯಾಗಿದ್ದು ಸುಮಾರು 40 ಸಾವಿರ ರೂ.ಗೂ ಅಧಿಕ ಮೊತ್ತದ ಹಾನಿ ಸಂಭವಿಸಿದೆ. ಹೆಸ್ಕಾತ್ತೂರು ಸರಕಾರಿ ಪ್ರಾಥಮಿಕ ಶಾಲೆಯ ಗ್ರಾಂಥಾಲಯ ಹಳೆಯ ಕಟ್ಟಡದ ಮೇಲ್ಛಾವಣಿಯ ಹೆಂಚುಗಳು ಹಾರಿಹೋಗಿದೆ. ಘಟನಾ ಸ್ಥಳಕ್ಕೆ ಕೊರ್ಗಿ ಗ್ರಾ.ಪಂ. ಪಿಡಿಒ ಸುಧಾಕರ ಶೆಟ್ಟಿ ಗುಡ್ಡಮ್ಮಾಡಿ, ಗ್ರಾ.ಪಂ. ಸದಸ್ಯ ರಾಘವೇಂದ್ರ ಶೆಟ್ಟಿ, ಅಶೋಕ್‌ ಮೊಗವೀರ, ಗ್ರಾಮ ಸಹಾಯಕ ಭೋಜ, ಸ್ಥಳೀಯರಾದ ಮಂಜುನಾಥ ಕಾಂಚನ್‌, ರವೀಂದ್ರ ಕುಲಾಲ್‌ ಹೆಸ್ಕಾತ್ತೂರು, ಶರತ್‌ ಶೆಟ್ಟಿ, ಅರುಣ್‌ ಶೆಟ್ಟಿ ಗ್ರಾ.ಪಂ. ಸಿಬಂದಿ ಕೇಶವ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.