ಹೆಮ್ಮಾಡಿ: ಅಂತರ್ಜಲ ಮಟ್ಟ ಕುಸಿತ – ಮೂರು ದಿನಕ್ಕೊಮ್ಮೆ ನೀರು ಪೂರೈಕೆ

ರಿಂಗ್‌ ಹಾಕುವ ಕಾಮಗಾರಿ ಪ್ರಗತಿಯಲ್ಲಿದೆ. ಈಗಿರುವುದು ಒಂದು ಬಾವಿಯ ನೀರು ಮಾತ್ರ.

Team Udayavani, Mar 16, 2023, 5:11 PM IST

ಹೆಮ್ಮಾಡಿ: ಅಂತರ್ಜಲ ಮಟ್ಟ ಕುಸಿತ – ಮೂರು ದಿನಕ್ಕೊಮ್ಮೆ ನೀರು ಪೂರೈಕೆ

ಹೆಮ್ಮಾಡಿ: ಬಿಸಿಲಿನ ಬೇಗೆ ಈ ಬಾರಿ ಹಿಂದಿನ ವರ್ಷಗಳಿಗಿಂತ ಹೆಚ್ಚುತ್ತಿದ್ದು, ಇದರಿಂದ ಎಲ್ಲೆಡೆಯ ನೀರಿನ ಮೂಲಗಳು ಬತ್ತಿ ಹೋಗುತ್ತಿದ್ದು, ಕೆಲವೆಡೆಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಅದರಲ್ಲೂ ಮುಖ್ಯವಾಗಿ ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಈಗ ಮನೆಗಳಿಗೆ 3 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಹೆಮ್ಮಾಡಿ ಭಾಗದಲ್ಲಿ ನೀರಿನ ಸಮಸ್ಯೆ ಗಂಭೀರಗೊಳ್ಳುವ ಆತಂಕವಿದೆ.

ಜಲ ಮೂಲಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಈಗಿರುವ 3 ದಿನಕ್ಕೊಮ್ಮೆ ಮನೆ- ಮನೆಗಳಿಗೆ ನೀರು ಪೂರೈಸಲು ಸಹ ಗ್ರಾ.ಪಂ. ಹರಸಾಹಸ ಪಡುತ್ತಿದೆ. ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಎಲ್ಲ 4 ವಾರ್ಡ್‌ ಗಳಲ್ಲೂ ನೀರಿನ ಸಮಸ್ಯೆ ಆರಂಭವಾಗಿದೆ.

ಎಲ್ಲೆಲ್ಲ ಸಮಸ್ಯೆ
ಮುಖ್ಯವಾಗಿ ಸಂತೋಷನಗರ, ಕನ್ನಡ ಕುದ್ರು, ಬುಗುರಿಕಡು, ಕಟ್ಟು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಹೆಮ್ಮಾಡಿ ಗ್ರಾ.ಪಂ. ಕಚೇರಿ ಇರುವ ಸುತ್ತಮುತ್ತಲಿನ ಭಾಗದಲ್ಲಿ ಮಾತ್ರ ನೀರಿನ ಸಮಸ್ಯೆ ಈಗಿಲ್ಲ. ಗ್ರಾಮದಲ್ಲಿ ಒಟ್ಟಾರೆ 960 -970 ಮನೆಗಳಿದ್ದು, ಈ ಪೈಕಿ 280 ಮನೆಗಳಿಗೆ ನಳ್ಳಿ ನೀರಿನ ಸಂಪರ್ಕವಿದೆ. ಉಳಿದ ಮನೆಗಳಲ್ಲಿ ಸ್ವಂತ ಬಾವಿಯಿದೆ. ಆದರೆ ಈಗಲೇ ಕೆಲವು ಬಾವಿಗಳು ಬತ್ತಿ ಹೋಗಿದ್ದು, ಇನ್ನು ಕೆಲ ಬಾವಿಗಳಲ್ಲಿ ನೀರು ತಳಮಟ್ಟಕ್ಕೆ ಇಳಿದಿದೆ.

ಈಗಿರುವುದು ಒಂದು ಬಾವಿ ಮಾತ್ರ
ಪಂಚಾಯತ್‌ನಿಂದ ಒಂದು ಬೋರ್‌ವೆಲ್‌, ಎರಡು ಬಾವಿಗಳನ್ನು ಕೊರೆಯಿಸಲಾಗಿದ್ದು, ಈ ಪೈಕಿ ಬೋರ್‌ ವೆಲ್‌ನ ಪಂಪ್‌ ಹಾಳಾಗಿದೆ. ಇನ್ನು ಒಂದು ಬಾವಿಯ ನೀರು ಆಳಕ್ಕಿಳಿದಿದೆ. ಅದನ್ನು ಆಳ ಮಾಡಿ, ರಿಂಗ್‌ ಹಾಕುವ ಕಾಮಗಾರಿ ಪ್ರಗತಿಯಲ್ಲಿದೆ. ಈಗಿರುವುದು ಒಂದು ಬಾವಿಯ ನೀರು ಮಾತ್ರ.

ಮೂರು ದಿನಕ್ಕೊಮ್ಮೆ ನೀರು
ಪಂಚಾಯತ್‌ನಿಂದ ಮೂರು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಈ ಬಾರಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಬಾವಿಗಳಲ್ಲಿಯೂ ನೀರು ಇಳಿಕೆಯಾಗಿದೆ. ಜಲಜೀವನ್‌ ಮಿಷನ್‌ ಕಾಮಗಾರಿ ನಡೆಯುತ್ತಿದೆ. ಮುಂದಿನ ವರ್ಷದಿಂದ ವಾರಾಹಿ ನೀರಿನ ಪ್ರಯೋಜನ ಗ್ರಾಮಕ್ಕೆ ಸಿಗಲಿದೆ. ಈ ಬಾರಿ ಮಾತ್ರ ಸ್ವಲ್ಪ ಮಟ್ಟಿಗೆ ಕಷ್ಟವಾಗಲಿದೆ ಎನ್ನುವುದಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಯು. ಸತ್ಯನಾರಾಯಣ ರಾವ್‌ ತಿಳಿಸುತ್ತಾರೆ.

ಹೆಮ್ಮಾಡಿ ಗ್ರಾ.ಪಂ. ವಿವರ
ಒಟ್ಟು ಮನೆಗಳು 960-970
ನೀರಿನ ಸಂಪರ್ಕದ
ಮನೆ 280
ಸ್ವಂತ ಬಾವಿ 350 ಕ್ಕೂ ಮಿಕ್ಕಿ
ಜನಸಂಖ್ಯೆ 5 ಸಾವಿರಕ್ಕೂ ಮಿಕ್ಕಿ

ಗರಿಷ್ಠ ಪ್ರಯತ್ನ
ಪಂಚಾಯತ್‌ನಿಂದ ಎಲ್ಲರಿಗೂ ಕುಡಿಯುವ ನೀರು ಪೂರೈಕೆಗೆ ಗರಿಷ್ಠ ಪ್ರಯತ್ನ ಮಾಡುತ್ತಿದ್ದೇವೆ. ನೀರಿನ ಮೂಲಗಳಲ್ಲಿಯೇ ನೀರಿನ ಮಟ್ಟ ಇಳಿಕೆಯಾಗಿರುವುದರಿಂದ ವ್ಯತ್ಯಯವಾಗುತ್ತಿದೆ. ಬಾವಿ ದುರಸ್ತಿ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಈಗಾಗಲೇ ಜಲಸಿರಿ ಯೋಜನೆಯವರಿಗೆ ಮನವಿ
ಸಲ್ಲಿಸಿದ್ದೇವೆ. ತಾಲೂಕು ಆಡಳಿತಕ್ಕೂ ಮನವಿ ಸಲ್ಲಿಸಲಾಗಿದೆ.
-ಸುಧಾಕರ ದೇವಾಡಿಗ ಕಟ್ಟು,
ಹೆಮ್ಮಾಡಿ ಗ್ರಾ.ಪಂ. ಅಧ್ಯಕ್ಷರು

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.