ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ
Team Udayavani, Jan 20, 2021, 9:12 PM IST
ಕೋಟ : ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬುಧವಾರ ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘ ಆಕ್ರೋಶ ವ್ಯಕ್ತಪಡಿಸಿ ಕೋಟ ಆರಕ್ಷಕ ಠಾಣೆಗೆ ತೆರಳಿ ಠಾಣಾಧಿಕಾರಿ ಸಂತೋಷ್ ಬಿ.ಪಿ ಇವರಿಗೆ ದೂರು ನೀಡಿದೆ.
ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಸಚಿವ ಕೋಟ ಈ ವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ.
ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಮಾಡುವವರ ವಿರುದ್ಧ ಸಮುದಾಯ ಅಥವಾ ಅವರ ಅಭಿಮಾನಿಗಳು ಸಹಿಸಿಕೊಂಡು ಕೂರುವುದಿಲ್ಲ ಈ ರೀತಿಯ ಬರಹಯುಕ್ತ ಪೋಸ್ಟ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಸಂಘದ ಅಧ್ಯಕ್ಷ ಜಿ.ಸದಾನಂದ ಪೂಜಾರಿ ತಮ್ಮ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಪ್ರಧಾನಕಾರ್ಯದರ್ಶಿ ಪ್ರಸಾದ್ ಬಿಲ್ಲವ,ಕಾರ್ಯದರ್ಶಿ ಮನೋಹರ್ ಪೂಜಾರಿ, ಯುವ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ,ಸಂತೋಷ್ ಪೂಜಾರಿ,ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಟಕ ಪಾತ್ರಧಾರಿಯ ಮೈಮೇಲೆ ಚಾಮುಂಡಿ ದೇವಿಯ ಆಹ್ವಾಹನೆ? ವಿಡಿಯೋ ವೈರಲ್
ಖಾಸಗಿ ಶಾಲೆ ಆಡಳಿತ ಮಂಡಳಿ ಬಿಕ್ಕಟ್ಟು ಇತ್ಯರ್ಥಕ್ಕೆ ಸಿದ್ದರಾಮಯ್ಯ ಆಗ್ರಹ
ರಾಜ್ಯದ ಅಂಗನವಾಡಿಗಳ ಸ್ಥಿತಿಗತಿ ಬಗ್ಗೆ ವರದಿ ಕೇಳಿದ ಹೈಕೋರ್ಟ್
ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ನಗರದ ಕಲ್ಯಾಣ ಮಂಟಪಗಳಿಗೆ ಎಂಟ್ರಿ ಕೊಟ್ಟ ಮಾರ್ಷಲ್ಗಳು
ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ
MUST WATCH
ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ
ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ
ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1
ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani
ದೇಹದ ತೂಕಕ್ಕೂ, ಮೊಣಕಾಲ ಆರೋಗ್ಯಕ್ಕೂ ಸಂಬಂಧ ಇದೆಯೇ?
ಹೊಸ ಸೇರ್ಪಡೆ
ಇನ್ನು ಮಂದೆ ಖಾಸಗಿ ಬ್ಯಾಂಕುಗಳಿಗೂ “ಸರ್ಕಾರಿ ವಹಿವಾಟು’ ಅವಕಾಶ
ಭಾರತ, ಚೀನಾಕ್ಕೆ ಅನುಕೂಲ ವಾತಾವರಣ : ಭೂಸೇನಾ ಮುಖ್ಯಸ್ಥ ನರವಣೆ ಅಭಿಮತ
ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್ ಆರೋಪ
ಶಾಶ್ವತ ಆಯೋಗ ತೀರ್ಪಿನಲ್ಲಿ ಯಾವುದೇ ಮಾರ್ಪಾಟಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ
80 ಕೋಟಿ ರೂ. ಕರೆಂಟ್ ಬಿಲ್ ನೋಡಿ ಆಸ್ಪತ್ರೆ ಸೇರಿದ ವೃದ್ದ : ನಡೆದಿದ್ದು ಎಲ್ಲಿ ಗೊತ್ತಾ ?