ಕೆರಾಡಿ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಕಾರ್ಮಿಕ ಸಾವು
Team Udayavani, Jun 30, 2022, 11:22 PM IST
ಕೊಲ್ಲೂರು : ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕುಸಿದು ಬಿದ್ದು ಜೂ. 29ರಂದು ಮೃತಪಟ್ಟಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಳೇಅರಳೀಪುರ ಮೂಲದ, ಪ್ರಸ್ತುತ ವಂಡ್ಸೆಯಲ್ಲಿ ವಾಸವಾಗಿರುವ ಕಾಂತರಾಜು (40) ಮೃತರು.
ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ಬಾಡಿಗೆ ಟ್ರ್ಯಾಕ್ಟರ್ ಚಾಲಕನಾದ ಕಾಂತರಾಜು ಗದ್ದೆ ಉಳುಮೆ ಮಾಡಿ ಟ್ರ್ಯಾಕ್ಟರ್‌ನಿಂದ ಕೆಳಗಿಳಿದು ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ತತ್‌ಕ್ಷಣ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಪರೀಕ್ಷಿಸಿ ಕಾಂತರಾಜು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ.
ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಟೆಂಪೋ: ಚಾಲಕ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾವರ್ಕರ್ ಭಾವಚಿತ್ರಕ್ಕೆ ವಿರೋಧ ಪೂರ್ವ ನಿಯೋಜಿತ ಕೃತ್ಯ: ಸುನೀಲ್ ಕುಮಾರ್
ಮಣಿಪಾಲ ಮೀಡಿಯಾ ಗ್ರೂಪ್ಸ್ ಯುನಿಟ್ 1ರಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ
ಕಾಪು ತಾಲೂಕು ಮಟ್ಟದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ
“ಇನ್ಸ್ಪೆಕ್ಟರ್ ಕರೆಯುತ್ತಿದ್ದಾರೆ’ ಎಂದು ಕರೆದು ಜೈಲಿಗೆ ಅಟ್ಟಿದರು: ಶ್ರೀನಿವಾಸ ಕಾಮತ್
1947ರ ಸ್ವಾತಂತ್ರ್ಯೋತ್ಸವದಲ್ಲಿ ಆರೋಹಣಗೊಂಡ ರಾಷ್ಟ್ರಧ್ವಜ ಕಲ್ಮಾಡಿ ಮನೆಯಲ್ಲಿ ಸುರಕ್ಷಿತ