ಫೆ.15, 16 ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ನೂತನ ಬ್ರಹ್ಮರಥ ಸಮರ್ಪಣೆ
Team Udayavani, Feb 14, 2023, 6:15 AM IST
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ದಾನಿಗಳಾದ ಬೆಂಗಳೂರಿನ ಉದ್ಯಮಿ ಸುನಿಲ್ ಆರ್. ಶೆಟ್ಟಿ ಅವರಿಂದ ಕೊಡಮಾಡಿದ ನೂತನ ಬ್ರಹ್ಮರಥದ ಪುರಪ್ರವೇಶ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ಫೆ. 15 ಹಾಗೂ 16 ರಂದು ನಡೆಯಲಿದೆ.
ಫೆ.15 ರಂದು ಕುಂಭಾಶಿ. ಕೋಟೇಶ್ವರ, ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬಗ್ವಾಡಿ, ನೆಂಪು ವಂಡ್ಸೆ, ಚಿತ್ತೂರು, ಈಡೂರು, ಜಡ್ಕಲ್ ಹಾಲ್ಕಲ್ ಮಾರ್ಗವಾಗಿ ಪುರಮೆರವಣಿಗೆಯಲ್ಲಿ ನೂತನ ರಥವನ್ನು ಕೊಲ್ಲೂರಿಗೆ ಒಯ್ಯಲಾಗುವುದು. ರಥ ಸಾಗುವ ಮಾರ್ಗದಲ್ಲಿ ಅಲ್ಲಿನ ಮುಖ್ಯ ದೇಗುಲಗಳ ವತಿಯಿಂದ ನೂತನ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.