ಕುಂದಾಪುರ : ಜಾಗದ ವಿಚಾರ ; ದೂರು – ಪ್ರತಿದೂರು
ಗ್ರಾ.ಪಂ. ಸದಸ್ಯರ ವಿರುದ್ಧ ಸುಳ್ಳು ಕೇಸು ದಾಖಲಿಸಿ ಬಂಧನ; ಆರೋಪ
Team Udayavani, May 28, 2022, 9:41 PM IST
ಕುಂದಾಪುರ : ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂ ಬಣಗಳ ವಿರುದ್ಧ ದೂರು – ಪ್ರತಿ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಗುಜ್ಜಾಡಿ ಗ್ರಾಮದ ಕೊಡಪಾಡಿಯ ತನ್ನ ಮನೆಯಲ್ಲಿದ್ದಾಗ ಸೀತಾರಾಮ ಗಾಣಿಗ, ರಾಮಚಂದ್ರ ಗಾಣಿಗ ಹಾಗೂ ವಿಜಯ ಗಾಣಿಗ ಅವರು ನನ್ನನ್ನು ಹಾಗೂ ಅತ್ತೆ ತುಂಗಾ ಅವರನ್ನು ದೂಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಜಾಹ್ನವಿ ಡಿ. ಗಾಣಿಗ ದೂರು ನೀಡಿದ್ದಾರೆ.
ತಮ್ಮ ಮನೆಗೆ ಹೋಗುವ ದಾರಿಯಲ್ಲಿ ಇಟ್ಟಿದ್ದ ಕಲ್ಲನ್ನು ತೆಗೆಯುತ್ತಿರುವಾಗ ಅಲ್ಲಿಗೆ ಬಂದ ನಾಗಮ್ಮ(ತುಂಗ), ಭಾಸ್ಕರ, ವಿಜಯ, ದೇವಕಿ, ಜಾಹ್ನವಿ, ದೇವೇಂದ್ರ, ವಿಭಮ, ಶುಭಮ್, ರಾಜು, ನರಸಿಂಹ, ಗಿರೀಶ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿರುವುದಾಗಿ ಕೊಡಪಾಡಿಯ ತುಂಗ ಗಾಣಿಗ ಅವರು ದೂರು ನೀಡಿದ್ದಾರೆ.
ಸೂಕ್ತ ಕ್ರಮಕ್ಕೆ ಡಿವೈಎಸ್‌ಪಿಗೆ ಮನವಿ
ಈ ನಡುವೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ಒತ್ತಡದಿಂದಾಗಿ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯ ಸೀತಾರಾಮ ಗಾಣಿಗ ಅವರ ಮೇಲೆ ಸುಳ್ಳು ಗಂಭೀರ ಪ್ರಕರಣ ದಾಖಲಿಸಿ ಬಂಧಿಸಿದೆ, ಠಾಣೆಯಲ್ಲಿ ಕೆಟ್ಟದಾಗಿ ನಡೆಸಿಕೊಂಡಿದೆ. ಸಂಧಾನಕ್ಕೆ ಬಂದ ಊರ ಪ್ರಮುಖರ ಮೇಲೂ ಸಹ ವೈಯಕ್ತಿಕ ಹಿತಾಸಕ್ತಿಯಿಂದ ಮಾತನಾಡಿದ್ದು, ಆದರೆ ಎದುರು ದೂರದಾರರನ್ನು ರಾಜಕೀಯ ಒತ್ತಡದಿಂದ ಬಂಧಿಸದೇ ಗಂಗೊಳ್ಳಿ ಪೊಲೀಸರು ಕಾನೂನು ಬಾಹಿರವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ನ್ಯಾಯ ಒದಗಿಸಿಕೊಡದಿದ್ದಲ್ಲಿ, ಠಾಣೆಯೆದುರೇ ಪ್ರತಿಭಟನೆ ನಡೆಸಲಾಗುವುದು ಎಂದು ವಂಡ್ಸೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್ ಅವರಿಗೆ ಶನಿವಾರ ಮನವಿ ಸಲ್ಲಿಸಿತು.
ಇದನ್ನೂ ಓದಿ : ನೈಜೀರಿಯಾದಲ್ಲಿ ಚರ್ಚ್‌ನಲ್ಲಿ ಕಾಲ್ತುಳಿತ : 31 ಮಂದಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಕಿಡಿಗೇಡಿಗಳ ಬಂಧನಕ್ಕೆ ಯುವ ವೇದಿಕೆ ಆಗ್ರಹ
ಅನ್ಯಪಕ್ಷ ಅಧಿಕಾರದಲ್ಲಿರುವುದು ಬಿಜೆಪಿಗೆ ಅಪಥ್ಯ: ವಾರ್ಡ್ ವಿಂಗಡಣೆ ವಿರುದ್ಧ ಎಚ್ ಡಿಕೆ ಗರಂ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ