ಕುಂದಾಪುರ: ಹೆಚ್ಚುತ್ತಿರುವ ನಗ-ನಗದು ಕಳವು

  ವಾರದೊಳಗೆ 4 ಕಳ್ಳತನ ಪ್ರಕರಣ   ಪತ್ತೆಗೆ ವಿಶೇಷ ತಂಡ ರಚನೆಗೆ ಆಗ್ರಹ

Team Udayavani, Feb 15, 2021, 3:20 AM IST

ಕುಂದಾಪುರ: ಹೆಚ್ಚುತ್ತಿರುವ ನಗ-ನಗದು ಕಳವು

ಸಾಂದರ್ಭಿಕ ಚಿತ್ರ

ಕುಂದಾಪುರ: ಕಳೆದೊಂದು ವಾರದಲ್ಲಿ ನಗರ ಸೇರಿದಂತೆ ಕುಂದಾಪುರ ಉಪ ವಿಭಾಗದಲ್ಲಿ 4 ಕಳ್ಳತನ ಪ್ರಕರಣಗಳು ನಡೆದಿವೆ. ಅದರಲ್ಲೂ 3 ಪ್ರಕರಣಗಳಲ್ಲಿ ನಗ- ನಗದು ಕಳವಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಕಳೆದ ಫೆ.6ರಂದು ಶಾಸ್ತ್ರಿ ಸರ್ಕಲ್‌ ಬಳಿ  ಉಪನ್ಯಾಸಕಿಯೊಬ್ಬರ 40 ಸಾವಿರ ರೂ. ಕಳವಾಗಿತ್ತು. ಈ ಕೃತ್ಯದಲ್ಲಿ ಮಹಿಳಾ ಗ್ಯಾಂಗ್‌ ಕೈವಾಡದ ಶಂಕೆ ವ್ಯಕ್ತವಾಗಿತ್ತು. ಫೆ. 11ರಂದು  ಹೆಮ್ಮಾಡಿ ಸಮೀಪ ಬಸ್‌ನಲ್ಲಿ ಪ್ರಯಾಣಿಸು ತ್ತಿದ್ದ ವೃದ್ಧೆಯೊಬ್ಬರ 1 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳ್ಳತನವಾಗಿದೆ. ಇದು ಕೂಡ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಫೆ.13ರಂದು ಕುಂದಾಪುರದ ಹೊಸ ಬಸ್‌ ನಿಲ್ದಾಣ ಸಮೀಪದ ವಿದ್ಯಾ ಬುಕ್‌ ಹೌಸ್‌ ಬಳಿ ಪುಸ್ತಕ ಖರೀದಿಯ ಸೋಗಿನಲ್ಲಿ ಬಂದ ಸುಮಾರು 45 ವರ್ಷ ಪ್ರಾಯದ ವ್ಯಕ್ತಿಯೊಬ್ಬ ಆ ಮಳಿಗೆಯ ಮಾಲಕರ ಕಾರಿನಲ್ಲಿದ್ದ 20 ಸಾವಿರ ರೂ.  ಕಳವುಗೈದಿದ್ದ.

ದೇಗುಲದ ಘಂಟೆ ಕಳವು :

ಅಂಪಾರು ಗ್ರಾಮದ ನುಕ್ಯಾಡಿ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಸುತ್ತ ಅಳವಡಿಸಿರುವ ಅಂದಾಜು 1 ಟನ್‌ಗೂ ಮಿಕ್ಕಿದ ಸುಮಾರು 500ರಿಂದ 600ಕ್ಕೂ ಹೆಚ್ಚಿನ ಕಂಚಿನ ಘಂಟೆಗಳು, ಭಕ್ತರೊಬ್ಬರು ನೀಡಿದ ಸುಮಾರು 106 ಕೆ.ಜಿ. ತೂಕದ ಒಂದು ದೊಡ್ಡ ಘಂಟೆ ಕಳವಾಗಿದ್ದು, ಇದರ ಒಟ್ಟು ಮೌಲ್ಯ 11 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಕಳ್ಳರ ಪತ್ತೆಗೆ ಆಗ್ರಹ :

ಕುಂದಾಪುರ ಉಪ ವಿಭಾಗ ವ್ಯಾಪ್ತಿ ಯಲ್ಲಿ ಕಳೆದೊಂದು ವಾರದೊಳಗೆ 4 ಕಳ್ಳತನ ಪ್ರಕರಣಗಳು ನಡೆದಿದ್ದು, ಈವರೆಗೆ ಯಾವುದೇ ಪ್ರಕರಣದಲ್ಲಿಯೂ ಕಳ್ಳರ ಪತ್ತೆಯಾಗಿಲ್ಲ. ಹೀಗೇ ಬಿಟ್ಟರೆ ಇದು ಹೆಚ್ಚುವ ಆತಂಕ ಜನರಲ್ಲಿದ್ದು, ಶೀಘ್ರ ವಿಶೇಷ ಪೊಲೀಸ್‌ ತಂಡವನ್ನು ರಚಿಸಿ, ಕಳ್ಳರನ್ನು ಪತ್ತೆಹಚ್ಚಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಶೀಘ್ರ ವಿಶೇಷ ತಂಡ :

ಕಳೆದ ಕೆಲ ದಿನಗಳಿಂದ ಅಲ್ಲಲ್ಲಿ ಕಳ್ಳತನ ಪ್ರಕರಣಗಳು ನಡೆದಿದ್ದು, ಈ ಬಗ್ಗೆ ಈಗಾಗಲೇ ಪ್ರಾಥಮಿಕ ಹಂತದ ತನಿಖೆಗಳು ನಡೆದಿವೆ. ಆದರೆ ಯಾವುದೇ ಮಹತ್ವದ ಸುಳಿವು ಲಭ್ಯವಾಗಿಲ್ಲ.

ಈ ಪ್ರಕರಣಗಳನ್ನು ಭೇದಿಸಲು ಶೀಘ್ರ ವಿಶೇಷ ಪೊಲೀಸರ ತಂಡವನ್ನು ರಚಿಸಲಾಗುವುದು ಎಂದು ಕುಂದಾಪುರ ಉಪ ವಿಭಾಗದ ಡಿವೈಎಸ್‌ಪಿ ಕೆ. ಶಂಕರ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.