ಗೋಶಾಲೆ ನಿರ್ಮಾಣ, ಲೋವೋಲ್ಟೇಜ್‌ ಸಮಸ್ಯೆ: ಚರ್ಚೆ

ಕೊಲ್ಲೂರು ದೇಗುಲದ ಸಮಗ್ರ ಅಭಿವೃದ್ಧಿ ಸಭೆ

Team Udayavani, Apr 28, 2022, 11:57 AM IST

discussion

ಕೊಲ್ಲೂರು: ಕೊಲ್ಲೂರು ಪರಿಸರದಲ್ಲಿ ಎದುರಾದ ಲೋವೋಲ್ಟೇಜ್‌ ಸಮಸ್ಯೆ ಅದರ ಪರಿಣಾಮ ವೆಟ್‌ವೆಲ್‌ನ ವಿದ್ಯುತ್‌ ಸಂಪರ್ಕದಲ್ಲಿ ದಿನದ ಬಹುತೇಕ ಸಮಯದಲ್ಲಿ ನಿಗದಿತ ವೋಲ್ಟೇಜ್‌ ಲಭ್ಯವಿಲ್ಲದೇ ಇರುವುದರಿಂದ ಹಾಗೂ ಅನಿಯಮಿತ ವಿದ್ಯುತ್‌ ಕಡಿತದಿಂದಾಗಿ ವೆಟ್‌ ವೆಲ್‌ನಿಂದ ತ್ಯಾಜ್ಯ ನೀರನ್ನು ಪಂಪ್‌ ಮಾಡಲು ಸಾಧ್ಯವಾಗದೇ ತುಂಬಿ ಹೊರ ಹರಿಯುತ್ತಿರುವುದು ಒಳಚರಂಡಿ ಯೋಜನೆಯ ಸಮರ್ಪಕ ಕಾರ್ಯನಿರ್ವಹಣೆಗೆ ಅಡೆ-ತಡೆಯಾಗಿದ್ದು, ಶಾಶ್ವತ ಪರಿಹಾರ ಒದಗದಿರುವುದು ಕೊಲ್ಲೂರು ದೇಗುಲದ ಸಮಗ್ರ ಅಭಿವೃದ್ಧಿಯ ಸಭೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಎಲ್ಲೂರಿನ ಸಬ್‌ಸ್ಟೇಷನ್‌ ಕಾರ್ಯಾರಂಭ ವಿಳಂಬ

ಹಾಲ್ಕಲ್‌ ಬಳಿಯ ಎಲ್ಲೂರಿನಲ್ಲಿ ನಿರ್ಮಿಸಲಾದ ನೂತನ ಸಬ್‌ ಸ್ಟೇಷನ್‌ ಕಾರ್ಯನಿರ್ವಹಣೆಗೆ ಎದುರಾದ ಅರಣ್ಯ ಇಲಾಖೆಯ ಕಾನೂನು ಕ್ರಮ ಕೊಲ್ಲೂರು ಸಹಿತ ವಿವಿಧ ಗ್ರಾಮಗಳಲ್ಲಿ ಲೋವೋಲ್ಟೇಜ್‌ಗೆ ಕಾರಣವಾಗಿದ್ದು, ಆ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಅವರ ನೇತ್ರತ್ವದಲ್ಲಿ ನಡೆದ ವಿಶೇಷ ಸಭೆಯಲ್ಲಿ ಚರ್ಚೆ ನಡೆಯಿತು.

ಗೋಶಾಲೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಕೊಲ್ಲೂರಿನಲ್ಲಿ ದೇಗುಲದ ವತಿಯಿಂದ ಗೋಶಾಲೆ ನಿರ್ಮಾಣಕ್ಕಾಗಿ ಗೋಳಿಹೊಳೆ ಹಾಗೂ ಯಳಜಿತ್‌ ನಲ್ಲಿ ಗೋಮಾಳ ಜಾಗವನ್ನು ಪರಿಶೀಲನೆ ನಡೆಸಿದ ಕೂರ್ಮಾರಾವ್‌ ಅದಕ್ಕಾಗಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ| ನವೀನ ಭಟ್‌, ದೇಗುಲದ ಕಾರ್ಯನಿರ್ವಹಣಾಧಿಕಾರಿ ಮಹೇಶ, ಬೈಂದೂರು ತಹಶೀಲ್ದಾರ್‌ ಶೋಭಾಲಕ್ಷ್ಮೀ, ಎಲ್ಲ ಇಲಾಖೆಯ ಅಧಿಕಾರಿಗಳು, ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ, ರತ್ನಾ ಆರ್.ಕುಂದರ್, ಸಂಧ್ಯಾ ರಮೇಶ ಉಪಸ್ಥಿತರಿದ್ದರು.

ಯುಜಿಡಿ ನಿರ್ವಹಣೆಯ ಭರವಸೆ

ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಕೈಗೊಂಡಿರುವ ನೀರು ಸರಬರಾಜು ಘಟಕದ ನಿರ್ವಹಣೆಯಲ್ಲಿ ಲೋಪವಾಗದಂತೆ ಕಾಯ್ದು ಕೊಂಡು ದೇಗುಲ ಹಾಗೂ ಗ್ರಾ.ಪಂ. ಸಹಕಾರದೊಡನೆ ಕಾರ್ಯನಿರ್ವಹಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ ಸಿ.ಇ.ಒ. ಡಾ| ನವೀನ ಭಟ್‌, ಗ್ರಾ.ಪಂ. ಅಧ್ಯಕ್ಷ ಶಿವರಾಮಕೃಷ್ಣ ಭಟ್‌, ಉಪ ವಿಭಾಗಾಧಿಕಾರಿ ಕೆ.ರಾಜು, ಬೈಂದೂರು ತಹಶೀಲ್ದಾರ್‌ ಶೋಭಾಲಕ್ಷ್ಮೀ, ದೇಗುಲದ ಕಾರ್ಯನಿರ್ವಹಣಾಧಿಕಾರಿ ಮಹೇಶ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ, ಡಾ| ಪ್ರೇಮಾನಂದ, ಡಾ| ಪ್ರಶಾಂತ ಭಟ್‌, ತಾಲೂಕು ವೈದ್ಯಾಧಿಕಾರಿ ಡಾ| ರಾಜೇಶ್ವರೀ, ವಿವಿಧ ಇಲಾಖೆಯ ಅಧಿಕಾರಿಗಳು, ಉಪಸ್ಥಿತರಿದ್ದರು.

ಉದ್ಯಾನವನ, ಮ್ಯೂಸಿಯಂ ನಿರ್ಮಾಣಕ್ಕೆ ಸೂಚನೆ

ಅರಣ್ಯ ಇಲಾಖೆ ವತಿಯಿಂದ ಟ್ರಿ ಪಾರ್ಕ್, ದೇಗುಲದ ವತಿಯಿಂದ ಉದ್ಯಾನವನ, ಮ್ಯೂಸಿಯಂ ನಿರ್ಮಾಣಕ್ಕೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು ಕೊಲ್ಲೂರನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸುವುದರ ಮೂಲಕ ಸ್ವಚ್ಛ ಗ್ರಾಮ ಪರಿಕಲ್ಪನೆ ಸಾಕಾರಗೊಳಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.