ನಾರ್ಕಳಿ ಸಂಪರ್ಕ ರಸ್ತೆ: ನಿತ್ಯ ಸಂಚಾರ ಸರ್ಕಸ್‌!

Team Udayavani, Aug 25, 2021, 3:20 AM IST

ನಾರ್ಕಳಿ ಸಂಪರ್ಕ ರಸ್ತೆ: ನಿತ್ಯ ಸಂಚಾರ ಸರ್ಕಸ್‌!

ಆಲೂರು: ಇಲ್ಲಿನ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹರ್ಕೂರು ಗ್ರಾಮದ ನಾರ್ಕಳಿ – ಹೋಯಿಗೇರಿ ಸಂಪರ್ಕ ರಸ್ತೆಯು ಸಂಪೂರ್ಣ ಕೆಸರುಮಯವಾಗಿದ್ದು, ಈ ಮಾರ್ಗದಲ್ಲಿ ವಾಹನ ಚಲಾಯಿಸುವುದು ಸವಾರರಿಗೆ ಒಂದು ರೀತಿಯ ಸರ್ಕಸ್‌ನಂತಾಗಿದೆ. ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ರಾಡಿಯೆದ್ದ ರಸ್ತೆಯಿಂದಾಗಿ ಪಾದಚಾರಿಗಳು ಸಂಕಷ್ಟ ಅನುಭವಿಸುವಂತಾಗಿದೆ.

ಆಲೂರು ಗ್ರಾ.ಪಂ. ವ್ಯಾಪ್ತಿಯ ಹರ್ಕೂರು ಗ್ರಾಮದ ನಾರ್ಕಳಿ- ಹೋಯಿಗೇರಿ ರಸ್ತೆಯು ಸಂಪೂರ್ಣ ಕೆಸರುಮಯವಾಗಿದ್ದು, ವಾಹನ ಸಂಚಾರವೇ ಕಷ್ಟಕರವಾಗಿದೆ. ಈ ಮಣ್ಣಿನ  ರಸ್ತೆಯ ಅಭಿವೃದ್ಧಿಗೆ ಅನೇಕ ವರ್ಷಗಳಿಂದ ಗ್ರಾಮಸ್ಥರು ಬೇಡಿಕೆ ಇಡುತ್ತಿದ್ದರೂ, ಇನ್ನೂ ಅಭಿವೃದ್ಧಿಗೆ ಮಾತ್ರ ಕಾಲ ಕೂಡಿ ಬಂದಿಲ್ಲ.

3 ಕಿ.ಮೀ. ಮಣ್ಣಿನ ರಸ್ತೆ:

ನಾರ್ಕಳಿ, ಹೋಯಿಗೇರಿ ಇನ್ನಿತರ ಪ್ರದೇಶಗಳಿಂದ ಮುಖ್ಯ ಪೇಟೆಯಾದ ಆಲೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ಈ ಭಾಗದಲ್ಲಿ ಸುಮಾರು 400ಕ್ಕೂ ಮಿಕ್ಕಿ ಮನೆಗಳಿವೆ. ನಿತ್ಯ ನೂರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಸುಮಾರು 3 ಕಿ.ಮೀ. ಉದ್ದಕ್ಕೂ ಮಣ್ಣಿನ ರಸ್ತೆಯಾಗಿಯೇ ಇದ್ದು, ಅಲ್ಲಲ್ಲಿ ಕೆಸರುಮಯ ಆಗಿದ್ದಲ್ಲದೆ, ಕೆಲವೆಡೆ ರಸ್ತೆಯ ಮಣ್ಣು ಮಳೆಗೆ ಕೊಚ್ಚಿ ಹೋಗಿ, ಹೊಂಡ ಬಿದ್ದಿದ್ದು, ದ್ವಿಚಕ್ರ ಸವಾರರಂತೂ ಸರ್ಕಸ್‌ ಮಾಡಿಕೊಂಡೇ ಸಂಚರಿಸಬೇಕಾದ ಸ್ಥಿತಿಯಿದೆ.

ಪ್ರಮುಖ ಕೊಂಡಿ :

ನಾಡಿನ ಪ್ರಸಿದ್ಧ ದೇವಸ್ಥಾನವಿರುವ ಶ್ರೀ ಮಹಿಷಮರ್ದಿನಿ ದೇವರ ಸನ್ನಿಧಿಯನ್ನು ಸಂಪರ್ಕಿಸುವ  ರಸ್ತೆ ಇದಾಗಿದೆ. ಅಲ್ಲದೆ ಇಲ್ಲಿನ ರೈತರು ಅಕ್ಕಿ ಮಿಲ್‌ಗೆ ಹೋಗಬೇಕಾದರೂ ಇದೇ ಮಾರ್ಗವನ್ನು ಆಶ್ರಯಿಸಿದ್ದಾರೆ. ಹಕೂìರು, ನೂಜಾಡಿ – ಬ್ರಹ್ಮೇರಿ – ವಂಡ್ಸೆ, ಹಕ್ಲಾಡಿ, ಕುಂದಬಾರಂದಾಡಿಯಂತಹ ಪ್ರಮುಖ ಊರುಗಳನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯೂ ಇದಾಗಿದೆ.

ಇನ್ನಿತರ ಸಮಸ್ಯೆಗಳೇನು? :

  • ರಸ್ತೆ ಅವ್ಯವಸ್ಥೆಯಿಂದಾಗಿ ಇಲ್ಲಿನ ಗ್ರಾಮಸ್ಥರು ಪಡಿತರ ತರಲು ಅಥವಾ ಪೇಟೆಗೆ ಹೋಗಲು ಸಂಕಷ್ಟ ಅನುಭವಿಸುವಂತಾಗಿದೆ.
  • ಯಾರಿಗಾದರೂ ತುರ್ತಾಗಿ ಅನಾರೋಗ್ಯ ಉಂಟಾದರೆ ಈ ಕೆಸರುಮಯ ರಸ್ತೆಯಿಂದಾಗಿ ಸಂಚರಿಸುವುದೇ ದೊಡ್ಡ ಸಾಹಸವಾಗಿದೆ.
  • ಇನ್ನೀಗ ಶಾಲಾರಂಭವಾಗಲಿದ್ದು, ಇಲ್ಲೇ ಪಕ್ಕದಲ್ಲಿ ಶಾಲೆಯಿದ್ದು, ರಾಡಿಯೆದ್ದ ರಸ್ತೆಯಿಂದಾಗಿ ಮಕ್ಕಳು ನಡೆದುಕೊಂಡು ಹೋಗಲು ಸಹ ಸಮಸ್ಯೆಯಾಗಿದೆ.

ರಸ್ತೆ ಅಭಿವೃದ್ಧಿಯಾಗಲಿ:

ನರಕ ಸದೃಶ ಈ ರಸ್ತೆಯಿಂದಾಗಿ ಎಲ್ಲರಿಗೂ ತುಂಬಾ ಸಮಸ್ಯೆಯಾಗುತ್ತಿದೆ. ಮಕ್ಕಳ ಹಾಗೂ ವಾಹನಗಳ ಓಡಾಟಕ್ಕೂ ತೊಂದರೆಯಾಗುತ್ತಿದೆ. 3-4 ಪ್ರಮುಖ ಊರುಗಳನ್ನು ಸಂಪರ್ಕಿಸುವ ರಸ್ತೆ ಇದಾಗಿದ್ದರೂ, ಇನ್ನೂ ಯಾವುದೇ ಅಭಿವೃದ್ಧಿಯಾಗಿಲ್ಲ. ಪಂಚಾಯತ್‌ನವರು ಈ ಬಗ್ಗೆ  ಗಮನಹರಿಸಿಲ್ಲ. ಇನ್ನಾದರೂ ಈ ರಸ್ತೆಯ ಅಭಿವೃದ್ಧಿಯಾಗಲಿ. ಉದಯ ಶೆಟ್ಟಿ ಆಲೂರು, ಸ್ಥಳೀಯರು

4 ಲ. ರೂ. ಮಂಜೂರು:

ಈ ನಾರ್ಕಳಿ- ಹೋಯಿಗೆಯೇರಿ ರಸ್ತೆಯ ಅವ್ಯವಸ್ಥೆ ಬಗ್ಗೆ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಗ್ರಾಮಸಭೆಗಳಲ್ಲೂ ಈ ಬಗ್ಗೆ ಪ್ರಸ್ತಾವಿಸಲಾಗಿದೆ. ಪಂಚಾಯತ್‌ನಿಂದ ಈ ಹಿಂದೆಯೇ ಪ್ರಸ್ತಾವನೆ ಕಳುಹಿಸಿದ್ದು, ರಸ್ತೆ ಅಭಿವೃದ್ಧಿಗೆ ತಾ.ಪಂ.ನಿಂದ 4 ಲಕ್ಷ ರೂ. ಅನುದಾನ ಮಂಜೂರಾಗಿದೆ. ಮಳೆಗಾಲದ ಬಳಿಕ ಕಾಮಗಾರಿ ಆರಂಭವಾಗಬಹುದು.  – ಸುಶೀಲಾ, ಆಲೂರು ಗ್ರಾ.ಪಂ. ಪಿಡಿಒ

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.