ಉದಯ ಗಾಣಿಗ ಕೊಲೆ ಪ್ರಕರಣ : ಸಮಗ್ರ ತನಿಖೆಗೆ ಪೊಲೀಸರಿಗೆ ಸೂಚನೆ : ರಾಘವೇಂದ್ರ
Team Udayavani, Jun 7, 2021, 3:08 PM IST
ಕುಂದಾಪುರ : ಶಾಂತಿ – ಸುವ್ಯವಸ್ಥೆಗೆ ಹೆಸರಾದ ಬೈಂದೂರು ಕ್ಷೇತ್ರದಲ್ಲಿ ಇಂತಹ ದುರ್ಘಟನೆ ನಡೆಯಬಾರದಿತ್ತು. ಈಗಾಗಲೇ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆಗೆ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಇದರಲ್ಲಿ ಬಿಜೆಪಿ ಪಕ್ಷ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಹೆಮ್ಮಾಡಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಇದು ಬಹಳ ದುಃಖಕರ ಸಂಗತಿ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರೊಬ್ಬರನ್ನು ಕಳೆದುಕೊಂಡಿದ್ದೇವೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ, ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು. ಆ ನಿಟ್ಟಿನಲ್ಲಿ ಈಗಾಗಲೇ ಪೊಲೀಸ್ ಇಲಾಖೆ ಕಾರ್ಯ ಪ್ರವೃತ್ತರಾಗಿದೆ ಎಂದು ಹೇಳಿದರು.
ಸತ್ಯಕ್ಕೆ ದೂರ
ಯಡಿಯೂರಪ್ಪ ರಾಜೀನಾಮೆ ನೀಡಿದರೆ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರೆ ಎನ್ನುವ ಮಾತು ಸತ್ಯಕ್ಕೆ ದೂರವಾದುದು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದವರು ಸ್ಪಷ್ಟಪಡಿಸಿದರು. ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ
Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ
Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು