ಬೈಂದೂರು, ಶಿರೂರು ವ್ಯಾಪ್ತಿ; ಅನಧಿಕೃತವಾಗಿ ತಲೆ ಎತ್ತುತ್ತಿರುವ ಮೊಬೈಲ್‌ ಟವರ್‌ಗಳು

Team Udayavani, Nov 7, 2020, 2:06 AM IST

ಬೈಂದೂರು, ಶಿರೂರು ವ್ಯಾಪ್ತಿ; ಅನಧಿಕೃತವಾಗಿ ತಲೆ ಎತ್ತುತ್ತಿರುವ ಮೊಬೈಲ್‌ ಟವರ್‌ಗಳು

ಬೈಂದೂರು: ಬೈಂದೂರು ಶಿರೂರು ಮುಂತಾದ ಗ್ರಾಮೀಣ ಭಾಗದಲ್ಲಿ ಇಲಾಖೆ ಹಾಗೂ ಗ್ರಾಮ ಪಂಚಾಯತ್‌ನಿಂದ ಯಾವುದೇ ಸೂಕ್ತ ಪರವಾನಿಗೆ ಪಡೆಯದೆ ಮೊಬೈಲ್‌ ಟವರ್‌ಗಳನ್ನು ಸ್ಥಾಪಿಸಲಾಗುತ್ತಿದೆ.

ಶಿರೂರು ಗ್ರಾಮದ ದೊಂಬೆ ಬಳಿ ಜನವಸತಿ ಸ್ಥಳದ ನಡುವೆ ಖಾಸಗಿ ಕಂಪೆನಿಯೊಂದು ಮೊಬೈಲ್‌ ಟವರ್‌ ನಿರ್ಮಿಸುತ್ತಿದ್ದು ಈಗಾಗಲೇ ಅಡಿಪಾಯದ ಕಾಮಗಾರಿ ಪೂರ್ಣಗೊಂಡಿದೆ. ಆದರೆ ಇದಕ್ಕೆ ಗ್ರಾ.ಪಂ.ನಿಂದ ಯಾವುದೇ ಪರವಾನಿಗೆ ಪಡೆದಿಲ್ಲ. ಬಹುತೇಕ ಕಡೆ ನಿಯಮ ಪಾಲಿಸದೆ ಸ್ಥಳೀಯ ಗ್ರಾ.ಪಂ. ಸದಸ್ಯರು ಅಥವಾ ಅಧಿಕಾರಿಗಳಿಗೊಂದಿಗೆ ಮಾತುಕತೆ ನಡೆಸಿ ಕಾಮಗಾರಿ ನಡೆಸ ಲಾಗುತ್ತದೆ. ದೊಂಬೆ ಬಳಿ ಈ ರೀತಿ ಕಾಮಗಾರಿ ನಡೆಸಲು ಮುಂದಾಗಿದ್ದು ಸ್ಥಳೀಯರು ವಿರೋಧ ವ್ಯಕ್ತಪಡಿಸಿ ಗ್ರಾ.ಪಂ.ಗೆ ದೂರು ನೀಡಿದ್ದು, ಕಾಮಗಾರಿ ಸ್ಥಗಿತಗೊಳಿಸಲಾಗಿದೆ.

ಕಾನೂನು ಏನು ಹೇಳುತ್ತದೆ?
1993 ಪಂಚಾಯತ್‌ರಾಜ್‌ ಆ್ಯಕ್ಟ್ 64ನೇ ಪ್ರಕರಣದ ಅಧಿನಿಯಮದ ಪ್ರಕಾರ ಟವರ್‌ ಸ್ಥಾಪನೆಗೆ ಸಂಬಂಧಪಟ್ಟ ಸಮಿತಿ ಮಂಜೂರಾತಿ ಬೇಕು. ಬಳಿಕ ಗ್ರಾ.ಪಂ.ಗೆ ಜಾಗದ ದಾಖಲೆ ನೀಡಬೇಕು. 2015ರ ತಿದ್ದುಪಡಿ ಪ್ರಕಾರ ಗ್ರಾಮ ಪಂಚಾಯತ್‌ ಮೊಬೈಲ್‌ ಟವರ್‌ಗಳನ್ನು ಕಟ್ಟಡ ವಿಭಾಗದಲ್ಲಿ ಪರಿಗಣಿಸಲಾಗಿದೆ. ವಾಣಿಜ್ಯ ಕಟ್ಟಡ ನಿರ್ಮಿಸಲು ಯಾವ ರೀತಿ ಪಹಣಿ, ನಕಾಶೆ, ಕನ್ವರ್ಷನ್‌ ಸೇರಿದಂತೆ ವಿವಿಧ ಮಾಹಿತಿ ನೀಡಿ ಪರವಾನಿಗೆ ಪಡೆಯುತ್ತಾರೋ ಅದೆ ರೀತಿ ಅನುಮತಿ ಪಡೆಯಬೇಕಿದೆ. ಮಾತ್ರವಲ್ಲದೆ ವರ್ಷಕ್ಕೆ 12 ಸಾವಿರ ರೂ. ತೆರಿಗೆ ಪಾವತಿಸಬೇಕು. ಆದರೆ ಖಾಸಗಿ ಕಂಪೆನಿಗಳು ಇವ್ಯಾವುದನ್ನೂ ಪಾಲಿಸದೆ ತೆರಿಗೆ ವಂಚಿಸುತ್ತಿವೆ.

ತಡೆಯೊಡ್ಡಲಾಗಿದೆ
ಶಿರೂರು ಗ್ರಾಮ ಪಂಚಾಯತ್‌ ಬಳಿ ನಿರ್ಮಾಣವಾಗುತ್ತಿರುವ ಮೊಬೈಲ್‌ ಟವರ್‌ಗೆ ಯಾವುದೇ ಅನುಮತಿ ಪಡೆದಿಲ್ಲ.ಸ್ಥಳೀಯರಿಂದ ಮಾಹಿತಿ ಬಂದ ತತ್‌ಕ್ಷಣ ಕಾಮಗಾರಿಗೆ ತಡೆಯೊಡ್ಡಲಾಗಿದೆ. ಸೂಕ್ತ ಅನುಮತಿ ಪಡೆದು ಕೆಲಸ ನಡೆಸಲು ಹೇಳಲಾಗಿದೆ. ದಾಖಲೆಗಳಿಲ್ಲದೆ ಮೊಬೈಲ್‌ ಟವರ್‌ ನಿರ್ಮಾಣವಾದರೆ ಟವರ್‌ಗೆ ಜಾಗ ನೀಡಿದವರು ಹೊಣೆಗಾರರಾಗುತ್ತಾರೆ.
-ಮಂಜುನಾಥ ಶೆಟ್ಟಿ, ಪಿಡಿಒ, ಶಿರೂರು ಗ್ರಾ.ಪಂ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.