ಸಾಂಕ್ರಾಮಿಕ ರೋಗ ಭೀತಿಯಲ್ಲಿ ಗ್ರಾಮಸ್ಥರು

ಬಸ್ರೂರು ಬಸ್‌ ನಿಲ್ದಾಣದಲ್ಲಿ ಹರಿದು ಹೋಗದ ನೀರು

Team Udayavani, Oct 11, 2022, 3:56 PM IST

16

ಬಸ್ರೂರು: ಕಳೆದ ಎರಡು ವರ್ಷಗಳಿಂದ ಬಸ್ರೂರು ಬಸ್‌ ನಿಲ್ದಾಣ ಪ್ರದೇಶದಲ್ಲಿ ನೀರು ಸಮರ್ಪಕವಾಗಿ ಹರಿಯದೆ ಒಂದೆಡೆ ಸಂಗ್ರಹವಾಗಿದೆ. ಇದರಿಂದಾಗಿ ಪರಿಸರದ ಜನ ಸಾಂಕ್ರಾಮಿಕ ರೋಗ ಭೀತಿಯನ್ನು ಎದುರಿಸುವಂತಾಗಿದೆ.

ಬಸ್ರೂರು ಸಿಂಡಿಕೇಟ್‌ ಬ್ಯಾಂಕ್‌ ಎದುರಿನ ರಸ್ತೆಯ ನೀರು ಸೇರಿದಂತೆ ಎಲ್ಲೆಡೆಯಿಂದ ಹರಿದು ಬರುವ ಕೊಳಚೆ ನೀರು ಚರಂಡಿಯಲ್ಲಿ ಸಮರ್ಪಕವಾಗಿ ಹರಿಯದೆ ಇರುವುದೇ ಇದಕ್ಕೆ ಕಾರಣ.

ಬಸ್ರೂರು ಬಸ್‌ ನಿಲ್ದಾಣದಿಂದ ಕೆಳಪೇಟೆಗೆ ಹೋಗುವ ರಸ್ತೆಯ ಆರಂಭದಲ್ಲಿ ಇತ್ತೀಚೆಗೆ ಹೊಸ ಮೋರಿಯೊಂದನ್ನು ರಚಿಸಲಾಗಿದೆ. ಆದರೆ ಇಲ್ಲಿ ಸಂಗ್ರಹವಾಗಿರುವ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇನ್ನೂ ಪೂರ್ತಿಯಾಗಿಲ್ಲ. ಸ್ವಲ್ಪ ದೂರ ಮಾತ್ರ ಹೊಸ ಮೋರಿಯಿಂದ ಚರಂಡಿಯನ್ನು ಅಗೆಯಲಾಗಿದೆ. ವಿಪರ್ಯಾಸವೆಂದರೆ ಮೋರಿ ಕೆಳಗಿನ ನೀರು ಅಲ್ಲಿಯವರೆಗಷ್ಟೇ ಹರಿದು ಬಳಿಕ ಅಲ್ಲೇ ಸಂಗ್ರಹಗೊಳ್ಳುತ್ತದೆ. ಈ ನಿಂತ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಹರಡುವ ತಾಣವಾಗುವ ಭೀತಿ ಸೃಷ್ಟಿಯಾಗಿದೆ.

ಹೊಸ ಮೋರಿಯ ಸ್ಥಳದಲ್ಲಿ ಮಾತ್ರವಲ್ಲದೆ ಬಸ್‌ ನಿಲ್ದಾಣದ ಸುತ್ತಲ ಪ್ರದೇಶದಲ್ಲೂ ಹಲವೆಡೆ ಮುಚ್ಚಿ ಹೋದ ಚರಂಡಿ ಕಂಡು ಬರುತ್ತದೆ. ಅಂಗಡಿಯ ಎದುರು ಚರಂಡಿ ಇರಬೇಕಾದ ಸ್ಥಳದಲ್ಲಿ ಸೀಯಾಳದ ಸಿಪ್ಪೆಗಳ ರಾಶಿ ಕಂಡು ಬರುತ್ತದೆ. ಈ ಎಲ್ಲ ಸಮಸ್ಯೆಗಳು ಸರಿಯಾಗಬೇಕಾದರೆ ಬಸ್‌ ನಿಲ್ದಾಣದ ಸುತ್ತಮುತ್ತಲ ಚರಂಡಿಯನ್ನು ಅಗೆದು-ಹೂಳೆತ್ತಿ ನೀರು ಹರಿಯುವಂತೆ ಮಾಡಬೇಕಾಗಿದೆ. ಇದಕ್ಕೊಂದು ಯೋಜನೆ ರೂಪಿಸಿ ಶೀಘ್ರ ಕಾಮಗಾರಿ ನಡೆಸಿ ಸಂಭನೀಯ ಅಪಾಯವನ್ನು ತಪ್ಪಿಸಬೇಕಾಗಿದೆ.

ಸರಿಪಡಿಸಲಾಗುವುದು: ಬಸ್‌ ನಿಲ್ದಾಣದ ಸಮೀಪ ನೂತನವಾಗಿ ನಿರ್ಮಿಸಿದ ಮೋರಿಯ ನೀರು ಪ್ರಸ್ತುತ ಸ್ವಲ್ಪ ದೂರ ಮಾತ್ರ ಹರಿದು ಹೋಗುತ್ತಿದೆ. ಈ ಬಗ್ಗೆ ಈಗಾಗಲೇ ಯೋಜನೆ ಹಾಕಿಕೊಂಡಿದ್ದು ಅಗೆಯಲಾದ ಚರಂಡಿಯನ್ನು ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿ ಯನ್ನು ಪೂರ್ಣಗೊಳಿಸಿ ನೀರು ಹರಿದು ಹೋಗುವಂತೆ ಮಾಡಲಾಗುವುದು. ಈ ಪರಿಸರದ ಇತರ ಚರಂಡಿಗಳ ಹೂಳನ್ನೂ ಎತ್ತಿ ಸ್ವಚ್ಛಗೊಳಿಸಲಾಗುವುದು. –ಇಂದಿರಾ ಪೂಜಾರಿ, ಅಧ್ಯಕ್ಷೆ, ಗ್ರಾ.ಪಂ. ಬಸ್ರೂರು

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.