ನಗರದಲ್ಲಿ ಮತ್ತೆ 113 ಪಾಸಿಟಿವ್‌


Team Udayavani, Jun 26, 2020, 6:21 AM IST

agara-positive

ಬೆಂಗಳೂರು: ನಗರದಲ್ಲಿ ಒಂದು ವಾರದಿಂದ ಕೋವಿಡ್‌ 19 ಸೋಂಕಿತರ ಸಂಖ್ಯೆ ಶತಕ ದಾಟುತ್ತಿದ್ದು, ಗುರುವಾರ 113  ಮಂದಿಗೆ ಸೋಂಕು ದೃಢಪಟ್ಟಿದೆ. 112 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ  ಸೋಂಕಿತರ ಸಂಪರ್ಕ 10, ವಿಷಮ ಶೀತ ಜ್ವರ 59, ಸಂಪರ್ಕ ಪತ್ತೆ ಹಚ್ಚಲಾಗುತ್ತಿರುವುದು 33, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಾಲ್ವರು, ಕಂಟೈನ್ಮೆಂಟ್‌ ವಲಯದಲ್ಲಿ ವಾಸವಿದ್ದ ಒಬ್ಬರಿಗೆ ಸೋಂಕು  ತಗುಲಿದ್ದು, ನಿಗದಿಪಡಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮಧ್ಯೆ ಸೋಂಕಿತರ ಸಂಖ್ಯೆ 1,791 ಏರಿಕೆಯಾಗಿದ್ದು, 30 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 31 ಜ್ವರ ತಪಾಸಣಾ ಕೇಂದ್ರಗಳಲ್ಲಿ ಒಟ್ಟು 16,317 ಜನರ  ತಪಾಸಣೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಕೋವಿಡ್‌ 19 ಆತಂಕ ಹೆಚ್ಚಾದ ಹಿನ್ನೆಲೆ ರ್‍ಯಾಂಡಮ್‌ ಟೆಸ್ಕ್‌ ಮಾಡಲು ಪಾಲಿಕೆ ಮುಂದಾಗಿದೆ. ಈ ಹಿಂದೆ ಪಾದರಾಯನಪುರ, ಶಿವಾಜಿನಗರ ಸೇರಿ ಕೆಲವು ಕಡೆ ಟೆಸ್ಕ್‌ ಮಾಡಲಾಗಿತ್ತು. ನಂತರ  ಸ್ಥಗಿತಗೊಳಿಸಲಾಗಿತ್ತು. ಆನಂದಪುರ, ಗಂಗೊಂಡನಹಳ್ಳಿ, ಕೆ.ಆರ್‌. ಮಾರುಕಟ್ಟೆ, ಜೆಸಿ ನಗರ ಮಾರುಕಟ್ಟೆ ಸೇರಿದಂತೆ ಹಲವೆಡೆ ಪರೀಕ್ಷೆ ಆರಂಭವಾಗಿದ್ದು, ಪ್ರತಿದಿನ 400ಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ.  ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಯಾಗಳಲ್ಲಿ ಪರೀಕ್ಷೆಗೆ ಪಾಲಿಕೆ ಚಿಂತನೆ ನಡೆಸಿದೆ.

2.64 ಲಕ್ಷ ರೂ. ಸಂಗ್ರಹ: ಕೋವಿಡ್‌-19 ಸೋಂಕು ನಿಯಂತ್ರಿಸುವ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಾಗೂ ಮುಖಗವಸು(ಮಾಸ್ಕ್‌) ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರಿಗೆ  ಮಾರ್ಷಲ್‌ಗ‌ಳು ದಂಡ ಸಂಗ್ರಹಿಸುತ್ತಿದ್ದು, ಗುರುವಾರ ಮಾಸ್ಕ್‌ ಧರಿಸದ 1,268 ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 52 ಮಂದಿ ಸೇರಿದಂತೆ 1,320 ಮಂದಿಯಿಂದ ಒಟ್ಟು 2.64 ಲಕ್ಷ ರೂ. ದಂಡ ಸಂಗ್ರಹಿಸಿದೆ.

ಬಿಎಂಟಿಸಿ; ಮತ್ತೊಬ್ಬರಿಗೆ ಸೋಂಕು: ಬಿಎಂಟಿಸಿ ಕೆಂಗೇರಿ ಡಿಪೋ 12ರಲ್ಲಿ ಮತ್ತೆ ಒಬ್ಬ ಚಾಲಕನಿಗೆ ಸೋಂಕು ದೃಢಪಟ್ಟಿದೆ. ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಸಂಪರ್ಕದಲ್ಲಿ ರುವ 10ಕ್ಕೂ ಅಧಿಕ ಸಿಬ್ಬಂದಿಯನ್ನು  ಕ್ವಾರಂಟೈನ್‌ ಮಾಡಲಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆ ಯಾಗಿದೆ. ಅದೇ ರೀತಿ, ಕೆಂಗೇರಿ ಠಾಣೆಯ ಸಿಬ್ಬಂದಿಗೆ ಸೋಂಕು ದೃಡಪಟ್ಟ ಹಿನ್ನೆಲೆ ಠಾಣೆಯಲ್ಲಿ ಸ್ಯಾನಿಟೈಸ್‌ ಸಿಂಪಡಣೆ ಮಾಡಲಾಗಿದೆ.

ಅಗ್ನಿಶಾಮಕ ಠಾಣೆ ಸಿಬ್ಬಂದಿಗೂ ಸೋಂಕು: ವೈದ್ಯರು, ಪೊಲೀಸ್‌ ಸಿಬ್ಬಂದಿಗೆ ಮಾತ್ರವಲ್ಲ ಈಗ ಅಗ್ನಿ ಶಾಮಕ ದಳ ಸಿಬ್ಬಂದಿಗೂ ಕೋವಿಡ್‌ 19 ಪಾಸಿಟಿವ್‌ ವರದಿಯಾಗಿದೆ. ಗುರುವಾರ ಹೈಗ್ರೌಂಡ್ಸ್‌ ಅಗ್ನಿ ಶಾಮಕ ಠಾಣೆಯ 6 ಸಿಬ್ಬಂದಿಗೆ  ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಇನ್ನುಳಿದ 6 ಸಿಬ್ಬಂದಿಯನ್ನು ಪಾಲಿಕೆ ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ. ಕೋರಮಂಗಲ ಪೊಲೀಸ್‌ ಕಾಲೊನಿಯಲ್ಲಿರುವ ಸರ್ಕಾರಿ ಆಸ್ಪತ್ರೆಯ ನರ್ಸ್‌ ಹಾಗೂ ವಾರ್ಡ್‌  ಬಾಯ್‌ ಇಬ್ಬರಿಗೂ ಸೋಂಕು ದೃಢಪಟ್ಟಿದ್ದು, ಇವರ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್‌ ಮಾಡಲಾಗಿದೆ.

ಅಂಚೆ ಕಚೇರಿ ಸೀಲ್‌ಡೌನ್‌: ಎಚ್‌ಎಎಲ್‌ 2ನೇ ಹಂತದಲ್ಲಿರುವ ಅಂಚೆ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 40 ವರ್ಷದ ಸಿಬ್ಬಂದಿಗೆ ಕೋವಿಡ್‌ 19 ಪಾಸಿಟಿವ್‌ ಬಂದಿದ್ದು, ಪಾಲಿಕೆ ಅಧಿಕಾರಿಗಳು ಕಚೇರಿಯನ್ನು ಸೀಲ್‌ಡೌನ್‌  ಮಾಡಿದ್ದಾರೆ. ಸೋಂಕಿತ ವ್ಯಕ್ತಿಗೆ ಮೂರು ದಿನದಿಂದ ಜ್ವರ ಇದ್ದು, ಸಕ್ರ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದಾರೆ. ಬುಧವಾರ ರಾತ್ರಿ ವರದಿ ಬಂದಿದ್ದು, ಗುರುವಾರ ಬೆಳಗ್ಗೆ ಅಂಚೆ ಕಚೇರಿಯನ್ನು ಸೀಲ್‌ ಡೌನ್‌ ಮಾಡಲಾಗಿದೆ. ಕಚೇರಿಯಲ್ಲಿ  ಕೆಲಸ ಮಾಡುತ್ತಿದ್ದ 64 ಸಿಬ್ಬಂದಿಯನ್ನು ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ.

ಸೋಂಕಿತ ವ್ಯಕ್ತಿಯ ಮನೆಯಲ್ಲಿ 4 ಜನರಿದ್ದು, ಅವರನ್ನೂ ಕೋವಿಡ್‌ 19 ಪರೀಕ್ಷೆಗೆ ಒಳಪಡಿಸಲಾಗಿದೆ. ಹೋಮ್‌ ಕ್ವಾರಂಟೈನ್‌ ನಲ್ಲಿರುವ ಅಂಚೆ  ಕಚೇರಿ ಸಿಬ್ಬಂದಿಗೆ ಐದು ದಿನಗಳ ನಂತರ ಪರೀಕ್ಷೆಗೆ ಒಳಪಡಿಸಲಾಗುವುದು. ತಾತ್ಕಾಲಿಕವಾಗಿ ಅಂಚೆ ಕಚೇರಿಯನ್ನು ಬಂದ್‌ ಮಾಡಲಾಗಿದ್ದು, ಗ್ರಾಹಕರು ಇಂದಿರಾನಗರ ಅಂಚೆ ಕಚೇರಿ ಸೇರಿದಂತೆ ಹತ್ತಿರದ ಕಚೇರಿಯಲ್ಲಿ ಸೇವೆ ಪಡೆಯಬಹುದು  ಎಂದು ಬೆಂಗಳೂರು ಪೂರ್ವ ಅಂಚೆ ವಿಭಾಗದ ಸೀನಿಯರ್‌ ಸೂಪರಿಟೆಂಡೆಂಟ್‌ ಬಿ.ಎಸ್‌. ಚಂದ್ರಶೇಖರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.