ರಾಜಧಾನಿಯಲ್ಲಿ 173 ಮಂದಿಗೆ ಸೋಂಕು

Team Udayavani, Jun 25, 2020, 5:20 AM IST

rajadhani-173

ಬೆಂಗಳೂರು: ಆರೋಗ್ಯ ಸಿಬ್ಬಂದಿ, ಪಾಲಿಕೆ ಅಧಿಕಾರಿಗಳು, ಪೊಲೀಸರು ಸೇರಿದಂತೆ ಬುಧವಾರ 173 ಮಂದಿಗೆ ಸೋಂಕು ದೃಢಪಟ್ಟಿದ್ದು, 5 ಸೋಂಕಿತರು ಮೃತಪಟ್ಟಿದ್ದಾರೆ. ನಗರದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಬುಧವಾರ ಅಂತ್ಯಕ್ಕೆ 1,124  ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ.

ವಿಷಮ ಶೀತ ಜ್ವರದಿಂದ ಬಳಲುತ್ತಿದ್ದ 70, ಸೋಂಕಿತರ ಸಂಪರ್ಕ 24, ತೀವ್ರ ಉಸಿರಾಟದ ತೊಂದರೆ 2,  ಪತ್ತೆಯಾಗದ ಸಂಪರ್ಕ 60, ಅನ್ಯರಾಜ್ಯದಿಂದ ನಾಲ್ವರಿಗೆ ಸೋಂಕು ದೃಢಪಟ್ಟಿದೆ. ಕೋವಿಡ್‌ 19 ಸೋಂಕಿತರನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ ಪಾಲಿಕೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಆರೋಪ ಕೇಳಿಬರುತ್ತಿದೆ.  ಮಂಗಳವಾರ ಜ್ಞಾನಭಾರತಿ ಆವರಣ ಗೇಟ್‌ ಬಳಿ ವಾಸವಿದ್ದ ಸೋಂಕಿತ ವ್ಯಕ್ತಿಯನ್ನು ಕರೆದೊಯ್ಯಲು ನಿರ್ಲಕ್ಷ್ಯ ತೋರಿದ್ದು,

ಬುಧವಾರ ಕೂಡ ಆ್ಯಂಬುಲನ್ಸ್ ಕಳುಹಿಸದ ಹಿನ್ನೆಲೆ ಸೋಂಕು ಕಾಣಿಸಿಕೊಂಡ ಯಶವಂತಪುರದ ದಂಪತಿ  ಖಾಸಗಿ ವಾಹನ ಮೂಲಕ ಆಸ್ಪತ್ರೆಗೆ ತೆರಳಿದರು. ಇನ್ನೊಂದೆಡೆ ಆಸ್ಪತ್ರೆಯಲ್ಲಿ ಹಾಸಿಗೆ ಖಾಲಿ ಇಲ್ಲ ಎಂದು ಪಾಲಿಕೆ ಆರೋಗ್ಯಾಧಿಕಾರಿಗಳು ಗಿರಿನಗರದ ಸೋಂಕಿತ ವ್ಯಕ್ತಿಗೆ ತಿಳಿಸಿದ್ದು, ಸೋಂಕಿತನು ಮನೆಯಲ್ಲಿಯೇ ಉಳಿದರು. ಮನೆ  ಸೀಲ್‌ಡೌನ್‌ ಮಾಡಲಾಗಿದೆ.

ಜ್ವರದಿಂದ ಬಳಲುತ್ತಿದ್ದವರೇ ಮೃತ: ಬುಧವಾರ ಮೃತಪಟ್ಟ ಐವರು ಸೋಂಕಿತರು ವಿಷಮ ಶೀತ ಜ್ವರದ ಲಕ್ಷಣ ಹಾಗೂ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದವರಾಗಿದ್ದಾರೆ. ಅದರಲ್ಲೂ ಎಲ್ಲರೂ  ಮಹಿಳೆಯರೇ ಮೃತಪಟ್ಟಿದ್ದಾರೆ. ಬೆಂಗಳೂರಿನ 59 ವರ್ಷದ ಮಹಿಳೆ, 54 ವರ್ಷದ ಮಹಿಳೆ, 68 ವರ್ಷದ ವೃದ್ಧೆ, 50 ವರ್ಷದ ಮಹಿಳೆ ಹಾಗೂ 70 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 63 ಮಂದಿ  ಸೋಂಕಿತರಿದ್ದಾರೆ.

ಮೂರು ದಿನಗಳಲ್ಲಿ 231 ಕಂಟೈನ್ಮೆಂಟ್‌ ವಲಯಗಳು ಹೆಚ್ಚಾಗಿದ್ದು, ಒಟ್ಟಾರೆ 477ಕ್ಕೆ ಏರಿಕೆಯಾಗಿದೆ. ಬೊಮ್ಮನಹಳ್ಳಿಯಲ್ಲಿ 62, ದಾಸರಹಳ್ಳಿ 10, ಬೆಂಗಳೂರು ಪೂರ್ವ 76, ಮಹದೇವಪುರ 49, ರಾಜರಾಜೇಶ್ವರಿ ನಗರ  41, ಬೆಂಗಳೂರು ದಕ್ಷಿಣ 118, ಪಶ್ಚಿಮ 97, ಯಲಹಂಕದಲ್ಲಿ 24 ವಲಯಗಳನ್ನು ಪಾಲಿಕೆ ಗುರುತಿಸಿದೆ. ಕೋವಿಡ್‌ 19 ಸೋಂಕಿತರನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ ಪಾಲಿಕೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ದೂರುಗಳು  ಹೆಚ್ಚಾಗಿವೆ.

ಮಂಗಳವಾರ ಜ್ಞಾನಭಾರತಿ ಆವರಣ ಗೇಟ್‌ ಬಳಿ ವಾಸವಿದ್ದ ಸೋಂಕಿತ ವ್ಯಕ್ತಿಯನ್ನು ಕರೆದೊಯ್ಯಲು ನಿರ್ಲಕ್ಷ್ಯ ತೋರಿದ್ದು, ಬುಧವಾರ ಕೂಡ ಆ್ಯಂಬುಲನ್ಸ್‌ ಕಳುಹಿಸದ ಹಿನ್ನೆಲೆ ಸೋಂಕು ಕಾಣಿಸಿಕೊಂಡ  ಯಶವಂತಪುರದ ದಂಪತಿ ಖಾಸಗಿ ವಾಹನ ಮೂಲಕ ಆಸ್ಪತ್ರೆಗೆ ತೆರಳಿರುವ ಪ್ರಸಂಗ ನಡೆಯಿತು. ಇನ್ನೊಂದೆಡೆ ಆಸ್ಪತ್ರೆಯಲ್ಲಿ ಹಾಸಿಗೆ ಖಾಲಿ ಇಲ್ಲ ಎಂದು ಪಾಲಿಕೆ ಆರೋಗ್ಯಾಧಿಕಾರಿಗಳು ಗಿರಿನಗರದ ಸೋಂಕಿತ ವ್ಯಕ್ತಿಗೆ ತಿಳಿಸಿದ್ದು, ಆತ  ಮನೆಯಲ್ಲಿಯೇ ಉಳಿಯು ವಂತಾಗಿದ್ದು, ಮನೆ ಸೀಲ್‌ಡೌನ್‌ ಮಾಡಲಾಗಿದೆ.

ಪರಾರಿಯಾದ ಸೋಂಕಿತ ಸೆರೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ 30 ವರ್ಷದ ಸೋಂಕಿತನು ವಿಕ್ಟೋರಿಯಾ ಆಸ್ಪತ್ರೆಯಿಂದ ಬುಧವಾರ ಬೆಳಗ್ಗೆ ಕಾಂಪೌಂಡ್‌  ಜಿಗಿದು  ಪರಾರಿಯಾಗಿದ್ದ. ಸಂಜೆ 6 ಗಂಟೆಗೆ ಡಿ.ಜೆ. ಹಳ್ಳಿ ಸಮೀಪದ ಪುಷ್ಪಾಂಜಲಿ ಚಿತ್ರಮಂದಿರದ ಬಳಿ ಓಡಾಡುತ್ತಿದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಪೊಲೀಸರು ಸೋಂಕಿತನನ್ನು ಸೆರೆಹಿಡಿದು ಮತ್ತೆ ಆಸ್ಪತ್ರೆಗೆ ದಾಖಲಿಸಿದ್ದಾರೆ.  ಬೆಳಗ್ಗೆಯಿಂದ ಸಂಜೆವರೆಗೆ ಸೋಂಕಿತ ವ್ಯಕ್ತಿಯು ಎಲ್ಲೆಲ್ಲಿ ಓಡಾಟ ನಡೆಸಿದ್ದಾರೆ ಎಂಬ ಬಗ್ಗೆ ಪಾಲಿಕೆ ಅಧಿಕಾರಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.