ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ


Team Udayavani, Jun 28, 2020, 6:06 AM IST

sudhakara tereat

ಬೆಂಗಳೂರು: ಕೋವಿಡ್‌ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಸಂಜೆಯೊಳಗಾಗಿ ಸೋಂಕಿತರ ಚಿಕಿತ್ಸೆಗಾಗಿ ಕನಿಷ್ಠ ಹತ್ತು ಸಾವಿರ ಹಾಸಿಗೆಗಳ ವ್ಯವಸ್ಥೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು   ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಶನಿವಾರ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ನಂತರ ಮಾತನಾಡಿದ ಅವರು, ಸರ್ಕಾರಿ ಮತ್ತು ಖಾಸಗಿ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳು,  ಖಾಸಗಿ ಆಸ್ಪತ್ರೆಗಳಲ್ಲದೆ, ಬಿಡಿಎ, ವಸತಿ ಇಲಾಖೆ ಮತ್ತು ಖಾಸಗಿ ನಿರ್ಮಾಣ ಸಂಸ್ಥೆ ಗಳು ನಿರ್ಮಿಸಿರುವ ವಸತಿ ಸಮುಚ್ಚಯಗಳು, ಸರ್ಕಾರಿ ಮತ್ತು ಖಾಸಗಿ ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ ಗಳು, ಹಾಸ್ಟೆಲ್‌ಗ‌ಳು ಮತ್ತು ಬೃಹತ್‌  ವಾಣಿಜ್ಯ ಸಮುತ್ಛಯಗಳನ್ನು ಕೋವಿಡ್‌ ಚಿಕಿತ್ಸೆ ಉದ್ದೇಶಕ್ಕೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಇವುಗಳನ್ನು ಸೌಲಭ್ಯಗಳ ಆಧಾರದ ಮೇಲೆ ಕೋವಿಡ್‌ ಚಿಕಿತ್ಸಾ ಆಸ್ಪತ್ರೆ ಮತ್ತು ಕೋವಿಡ್‌ ಕೇರ್‌ ಸೆಂಟರ್‌ಗಳನ್ನಾಗಿ ಪರಿವತಿಸಲಾಗುವು ದು ಎಂದರು. ಬೆಂಗಳೂರು  ನಗರದಾದ್ಯಂತ ಚಿಕಿತ್ಸೆಗೆ ಅಗತ್ಯವಿರುವ ಸರ್ಕಾರಿ ಮತ್ತು ಖಾಸಗಿ ಪ್ರದೇಶ ಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು ಸೋಮವಾರ ಸಂಜೆ ವೇಳೆಗೆ ಖಚಿತ ಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದರು.

ಪರಿಶೀಲನೆ: ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಹೆಚ್ಚಿನ ಸೌಲಭ್ಯ ಅಗತ್ಯವಿಲ್ಲ. ಹೀಗಾಗಿ ಬಿಡಿಎ, ವಸತಿ ಇಲಾಖೆ ನಿರ್ಮಿಸಿ ಸಿದ್ಧಗೊಂಡಿರುವ ಬಹುಮಹಡಿ ವಸತಿ ಸಮುಚ್ಚಯಗಳನ್ನು ಬಳಸಲಾಗುವುದು. ಬಿಡಿಎ ಬಳಿ 1700 ಫ್ಲಾಟ್‌ ಗಳಿವೆ.  ಅವುಗಳಲ್ಲಿ ಬಳಕೆಗೆ ಲಭ್ಯವಿರುವ ನಿಖರ ಸಂಖ್ಯೆಯನ್ನು ಸೋಮವಾರ ತಿಳಿಸುವುದಾಗಿ ಬಿಡಿಎ ಆಯುಕ್ತ ಮಹದೇವ್‌ ತಿಳಿಸಿದ್ದಾರೆ.

ಸ್ವತ್ಛತೆಗೆ ಖಾಸಗಿ ಕಂಪನಿಗಳ ನೆರವು ಮತು ಸುರಕ್ಷತೆಗೆ ರಾಜ್ಯ ಮೀಸಲು ಪೊಲೀಸ್‌, ನಗರ ಸಶಸ್ತ್ರ  ಮೀಸಲು ಪಡೆಗಳ ಲ್ಲದೆ, ಗೃಹ ರಕ್ಷಕ ದಳದ ನೆರವು ಪಡೆಯ ಲಾಗುವುದು ಎಂದರು. ಸಂವಾದದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌, ಲತಾಕುಮಾರಿ,  ಶ್ರೀನಿವಾಸ್‌, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಗಿರೀಶ್‌ ಉಪಸ್ಥಿತರಿದ್ದರು.

ಶೇ. 50 ಹಾಸಿಗೆಗಳು ಮೀಸಲು: ವೆಂಟಿಲೇಟರ್‌, ಹೈ ಪ್ಲೊ ಆಕ್ಸಿಜನ್‌ ಮತ್ತು ಇತರೆ ಅಗತ್ಯ ಸೌಲಭ್ಯ ಗಳಿರುವ ಕಡೆ ಕೋವಿಡ್‌ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲಾಗುವುದು. ನಗರದಲ್ಲಿ ಕಳೆದ ಒಂದು ವಾರದಿಂದ ಈಚೆಗೆ ಸೋಂಕಿತರ ಪೈಕಿ ಶೇ.  30- 50 ರೋಗದ ಲಕ್ಷಣ ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸೋಂಕಿತರ ಲಕ್ಷಣ ಆಧರಿಸಿ ಲಘು ಮಧ್ಯಮ ಮತ್ತು ತೀವ್ರ ಸ್ವರೂಪ ಎಂದು ವಿಂಗಡಿಸಿ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.  ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಕೋವಿಡ್‌ ಚಿಕಿತ್ಸೆಗೆ ಬಿಟ್ಟುಕೊಡಲು ಸೂಚನೆ ನೀಡಲಾಗಿದೆ ಎಂದು ಸಚಿವ ಸುಧಾಕರ್‌ ತಿಳಿಸಿದರು.

ಖಾಸಗಿ ಆಸ್ಪತ್ರೆ; ಕ್ರಮ: ರಾಜ್ಯದಲ್ಲಿ ಕೋವಿಡ್‌ 19 ಸೋಂಕು ಹೆಚ್ಚಾಗುತ್ತಿದ್ದು ಕೆಲವು ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುತ್ತಿರುವುದರಿಂದ ಎನ್‌ ಡಿಆರ್‌ಎಫ್‌ ನಿಯಮ ಪ್ರಕಾರ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ತಿಳಿಸಿದ್ದಾರೆ. ಈ.ಕುರಿತು ಆದೇಶ ಹೊರಡಿಸಿರುವ ಅವರು, ಕರ್ನಾಟಕ ಖಾಸಗಿ ಆಸ್ಪತ್ರೆಗಳ ತೆರೆಯುವ ಕಾಯ್ದೆ 2017 ರಂತೆ ಖಾಸಗಿ  ಆಸ್ಪತ್ರೆಗಳು ಇಂಥ ಸಂದರ್ಭದಲ್ಲಿ ಸರ್ಕಾರದ ಸೂಚನೆಯಂತೆ ಕಾರ್ಯ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ನಿರಾಕರಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.