Bengaluru: ಕೌಟುಂಬಿಕ ವಿಚಾರಕ್ಕೆ ವೃದ್ಧ ದಂಪತಿ ಆತ್ಮಹತ್ಯೆ

ಮಗನ ಮಧ್ಯೆ ಮನಸ್ತಾಪ ಬಂದು ಅವರಿದ್ದ ಕಟ್ಟಡ 3ನೇ ಮಹಡಿಯಲ್ಲಿ ಪ್ರತ್ಯೇಕ ವಾಸ

Team Udayavani, Feb 23, 2024, 2:51 PM IST

12-bng

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ವೃದ್ಧ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಬನಶಂಕರಿ 3ನೇ ಹಂತದ ಇಟ್ಟಮಡು ಮುಖ್ಯರಸ್ತೆಯ ಕೃಷ್ಣಯ್ಯ ಲೇಔಟ್‌ ನಿವಾಸಿ ಕೃಷ್ಣನಾಯ್ಡು(84) ಮತ್ತು ಅವರ ಪತ್ನಿ ಸರೋಜಮ್ಮ(74) ಆತ್ಮಹತ್ಯೆ ಮಾಡಿಕೊಂಡವರು.

ಘಟನೆಗೆ ಕೌಟುಂಬಿಕ ಕಾರಣ ಎಂದು ಹೇಳಲಾಗಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ತಮಿಳುನಾಡು ಮೂಲದ ಕೃಷ್ಣನಾಯ್ಡು ಮತ್ತು ಸರೋಜಮ್ಮ ಹತ್ತಾರು ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಕೃಷ್ಣಯ್ಯ ಲೇಔಟ್‌ನಲ್ಲಿ ಸ್ವಂತ ಮೂರು ಅಂತಸ್ತಿನ ಕಟ್ಟಡದಲ್ಲಿ ನೆಲ ಮಾಳಿಗೆಯಲ್ಲಿ ವಾಸವಾಗಿದ್ದರು.

ದಂಪತಿಗೆ ಒಬ್ಬ ಗಂಡು ಮತ್ತು ಒಬ್ಬ ಮಗಳು ಇದ್ದಾರೆ. ಮಗಳಿಗೆ ಮದುವೆಯಾಗಿದ್ದು, ಪ್ರತ್ಯೇಕವಾಗಿ ಕುಟುಂಬದ ಜತೆ ಬೇರೆಡೆ ವಾಸವಾಗಿದ್ದಾರೆ. ಪುತ್ರ ಅಶೋಕ್‌ ಎಲೆಕ್ಟ್ರಿಷಿಯನ್‌ ಕೆಲಸ ಮಾಡಿಕೊಂಡಿದ್ದು, ಪತ್ನಿ ಮತ್ತು ಪೋಷಕರ ಜತೆ ಒಟ್ಟಿಗೆ ವಾಸವಾಗಿದ್ದರು.

ಈ ಮಧ್ಯೆ ಕೆಲ ತಿಂಗಳಿಂದ ಪುತ್ರ ಅಶೋಕ್‌ ಮತ್ತು ಪೋಷಕರ ನಡುವೆ ಕೌಟುಂಬಿಕ ವಿಚಾರವಾಗಿ ಜಗಳವಾಗಿತ್ತು. ಹೀಗಾಗಿ ವೃದ್ಧ ದಂಪತಿ ಕಟ್ಟಡದ ಮೂರನೇ ಮಹಡಿಯಲ್ಲಿರುವ ರೂಮ್‌ ನಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದು, ದಂಪತಿ ನಡುವೆಯೂ ಸಣ್ಣ-ಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಸೊಸೆ ಬಂದಾಗ ಬೆಳಕಿಗೆ: ಗುರುವಾರ ಬೆಳಗ್ಗೆ ಪುತ್ರ ಅಶೋಕ್‌ ಪತ್ನಿ ನೀರು ಹಿಡಿಯಲು ಮೂರನೇ ಮಹಡಿಗೆ ಹೋದಾಗ ರೂಮ್‌ನ ಕಿಟಕಿಗೆ ಪಂಚೆ ಕಟ್ಟಿರುವುದು ಪತ್ತೆಯಾಗಿದೆ. ಅನುಮಾನಗೊಂಡು ಸಮೀಪ ಹೋಗಿ ನೋಡಿದಾಗ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಪತಿ ಅಶೋಕ್‌ಗೆ ಮಾಹಿತಿ ನೀಡಿದ್ದಾರೆ. ನಂತರ ಅಶೋಕ್‌ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ತೆರಳಿದ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಕೌಟುಂಬಿಕ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆಂದು ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.