ಆರ್ಥಿಕ ಬಹಿಷ್ಕಾರಕ್ಕೆ ಕೇಂದ್ರ ಉತ್ತೇಜನ ಸಲ್ಲ: ಎಚ್‌ಡಿಡಿ
Team Udayavani, Jun 20, 2020, 5:45 AM IST
ಬೆಂಗಳೂರು: ಗಡಿ ಸಂಘರ್ಷ ವಿಚಾರದಲ್ಲಿ ಚೀನಾ ಉತ್ಪನ್ನ ನಿರ್ಬಂಧದಂತಹ ಆರ್ಥಿಕ ಬಹಿಷ್ಕಾರಕ್ಕೆ ಕೇಂದ್ರ ಸರ್ಕಾರ ಉತ್ತೇಜನ ನೀಡಬಾರದು. ಇದರಿಂದ ದೀರ್ಘ, ಆಳವಾದ ಪರಿಣಾಮ ಬೀರುತ್ತವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ನಾಯಕರ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಕೆಲ ಸಲಹೆ ನೀಡಿರುವ ಅವರು, ಈ ಸಂದರ್ಭದಲ್ಲಿ ಸೂಕ್ಷ್ಮ ಹಾಗೂ ಎಚ್ಚರಿಕೆ ಹೆಜ್ಜೆ ಇಡಬೇಕು ಎಂದು ಹೇಳಿದ್ದಾರೆ. ರಾಷ್ಟ್ರೀಯವಾದ, ಪ್ರಚೋದನಾಕಾರಿ ಹೇಳಿಕೆ ಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿ ಹಾಗೂ ಪ್ರಚೋದನಾಕಾರಿ ವಿಶ್ಲೇಷಣೆಗೆ ಕಡಿವಾಣ ಹಾಕಲು ಕೇಂದ್ರ ಮುಂದಾಗಬೇಕೆಂದು ತಿಳಿಸಿದ್ದಾರೆ.
ಈ ವೇಳೆ ಪ್ರತಿಪಕ್ಷಗಳು ಸರ್ಕಾರದ ಜತೆ ನಿಲ್ಲಬೇಕು. ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಜತೆಗೂಡಬೇಕು ಎಂದು ಹೇಳಿದ್ದಾರೆ.ಭಾರತ-ಚೀನಾ ಗಡಿ ಸಂಘರ್ಷ ಸಂದರ್ಭದಲ್ಲಿ ರಾಷ್ಟ್ರೀಯ ಹಿತಾಸಕ್ತಿ ಹಿನ್ನೆಲೆಯಲ್ಲಿ ಪ್ರಧಾನಿ ಪ್ರತಿಪಕ್ಷಗಳ ನಾಯಕರ ಸಭೆ ಕರೆದಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್ ಸಿಬ್ಬಂದಿ
ಇಂದಿರಾ ಕ್ಯಾಂಟೀನ್ಗೆ ಇಸ್ಕಾನ್ ಊಟ; ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ
ತಾಜಾ ಮಾವು, ಹಲಸು ಬೇಕಾ?ಮೇಳಕ್ಕೆ ಬನ್ನಿ;ಲಾಲ್ಬಾಗ್ನಲ್ಲಿ ಜೂ.13ರವರೆಗೆ ಪ್ರದರ್ಶನ, ಮಾರಾಟ
ಸ್ತ್ರೀಯರ ವೇಷದಲ್ಲಿ ಫೈನಾನ್ಸ್ನಲ್ಲಿ ಕಳವಿಗೆ ಯತ್ನ: ಸೈರನ್ ಶಬ್ದ ಕೇಳಿ ಆರೋಪಿಗಳು ಪರಾರಿ
ಮೆಡಿಕಲ್ ಸೀಟ್ ನೆಪದಲ್ಲಿ ವಂಚನೆ: ವಂಚಿಸಿದ ಹಣ ಕೇಳಿದ್ದಕ್ಕೆ ಹನಿಟ್ರ್ಯಾಪ್