ಸಿಎಂ, ರಾಜ್ಯಪಾಲರ ಆರೋಗ್ಯ ಮಾಹಿತಿ ಸಂಗ್ರಹ
Team Udayavani, May 17, 2020, 3:55 AM IST
ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಆರೋಗ್ಯ ಸಮೀಕ್ಷೆಯ ಭಾಗವಾಗಿ ರಾಜ್ಯಪಾಲ ವಿ.ಆರ್.ವಾಲ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಮಾಹಿತಿಯನ್ನು ಶನಿವಾರ ಸಂಗ್ರಹಿಸಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ಕುಮಾರ್, ರಾಜ್ಯಸರ್ಕಾರದ ನಿರ್ದೇಶನದ ಮೇಲೆ ಮೇ.7 ರಿಂದ ಮನೆ-ಮನೆ ಆರೋಗ್ಯ ಸಮೀಕ್ಷೆ ಮಾಡುತ್ತಿದ್ದೇವೆ.
ಇದರಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ರಕ್ತದೊತ್ತಡ ಹಾಗೂ ಕಿಡ್ನಿ ಸಮಸ್ಯೆ ಸೇರಿದಂತೆ ಯಾವುದಾದರು ಕಾಯಿಲೆ ಇದೆಯೇ ಎಂಬ ಮಾಹಿತಿ ಕಲೆಹಾಕುತ್ತಿದ್ದೇವೆ. ಇದಕ್ಕಾಗಿ 3 ಸಾವಿರ ತಂಡಗಳನ್ನು ರಚನೆ ಮಾಡಿಕೊಳ್ಳಲಾಗಿದ್ದು, ನಗರದ 36 ಲಕ್ಷ ವಸತಿ ನಿಯಲಗಳ ಪೈಕಿ 13 ಲಕ್ಷ ವಸತಿ ನಿಲಯಗಳಲ್ಲಿ ಇರುವವರಿಂದ ಈಗಾಗಲೇ ಆರೋಗ್ಯ ಮಾಹಿತಿ ಪಡೆದುಕೊಂಡಿದ್ದೇವೆ ಎಂದರು.
ಆರೋಗ್ಯ ಸಮೀಕ್ಷೆಯ ಭಾಗವಾಗಿ ರಾಜ್ಯಪಾಲ ವಿ.ಆರ್.ವಾಲ ಹಾಗೂ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರ ನಿವಾಸಗಳಿಗೆ ತೆರಳಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಇದಕ್ಕಾಗಿ “ಹೆಲ್ತ್ ವಾಚ್’ ಮೊಬೈಲ್ ಆ್ಯಪ್ ಬಳಸಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?