ಒಂದೇ ದಿನ 13 ಮಂದಿಗೆ ಕೋವಿಡ್ 19
Team Udayavani, May 30, 2020, 5:47 AM IST
ಬೆಂಗಳೂರು: ನಗರದಲ್ಲಿ ಕೋವಿಡ್ 19 ವೈರಸ್ ಹಾವಳಿ ಹೆಚ್ಚಾಗಿದ್ದು, ಕಂಟೈನ್ಮೆಂಟ್ ವಾರ್ಡ್ ಪಾದರಾಯನಪುರದ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಅವರಿಗೆ ಕೋವಿಡ್ 19 ವೈರಸ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಶುಕ್ರವಾರ 13 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 300ರ ಗಡಿದಾಟಿದೆ.
ಬಿಬಿಎಂಪಿ ವ್ಯಾಪ್ತಿಯ ಪಾದರಾಯನಪುರ ವಾರ್ಡ್‌ನಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿದ್ದ ಹಿನ್ನೆಲೆ ವಾರ್ಡ್ ಅನ್ನೇ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿತ್ತು. ಬಳಿಕ ರ್‍ಯಾಂಡಮ್ ಪರೀಕ್ಷೆ ವೇಳೆಯೂ ಅನೇಕರಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆ ಸದ್ಯ ಸಾಮುದಾಯಿಕ ಸೋಂಕು ಪರೀಕ್ಷೆ ಈ ವಾರ್ಡ್‌ನಲ್ಲಿ ನಡೆಯುತ್ತಿದೆ.
ಈ ನಡುವೆ ವಾರ್ಡ್‌ನಲ್ಲಿ ಹೆಚ್ಚು ಓಡಾಟ ಹಿನ್ನೆಲೆ ಅಲ್ಲಿನ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಅವರು ಖಾಸಗಿ ಪ್ರಯೋಗಾಲಯದಲ್ಲಿ ಚಾಮರಾಜಪೇಟೆ ಶಾಸಕರೊಂದಿಗೆ ಸೋಂಕು ಪರೀಕ್ಷೆ ಮಾಡಿಸಿದ್ದಾರೆ. ಶುಕ್ರವಾರ ಸಂಜೆ ಸೋಂಕು ಪರೀಕ್ಷಾ ವರದಿ ಬಂದಿದ್ದು, ಶಾಸಕರ ಸೋಂಕು ಪರೀಕ್ಷಾ ವರದಿ ನೆಗೆಟಿವ್, ಪಾಲಿಕೆ ಸದಸ್ಯರದ್ದು ಪಾಸಿಟಿವ್ ಬಂದಿದೆ. ಇನ್ನು ಸೋಂಕು ದೃಢಪಟ್ಟ ಹಿನ್ನೆಲೆ ಪಾಲಿಕೆ ಸದಸ್ಯರ ಕುಟುಂಬಸ್ಥರು ಕ್ವಾರಂಟೈನ್ ಆಗಿದ್ದಾರೆ.
ಶನಿವಾರ ಬೆಳಗ್ಗೆ ಪ್ರಾಥಮಿಕ ಸಂಪರ್ಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರ ಪತ್ತೆ ಮಾಡಿ ಕ್ವಾರಂಟೈನ್ ಮಾಡಲಾಗುವುದು ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ