Udayavni Special

ಲಂಚದ ಆರೋಪ : ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಲಿಂಗರಾಜು ಅಮಾನತು

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕರ ಅಮಾನತು

Team Udayavani, Mar 5, 2021, 7:35 PM IST

ಹದಗಹಗಹಗ

ಬೆಂಗಳೂರು : ಸಾರ್ವಜನಿಕರು ಮತ್ತು ಸ್ಟೋನ್ ಕ್ರಷರ್ ಮಾಲೀಕರಿಗೆ ಲಂಚದ ಬೇಡಿಕೆ ಇಟ್ಟು,  ಅನಗತ್ಯವಾಗಿ  ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಬಿ.ಎಂ.ಲಿಂಗರಾಜು ಅವರನ್ನು ಅಮಾನತು ಮಾಡಲಾಗಿದೆ.

ಇದೇ ಆರೋಪದ ಮೇಲೆ ಎರಡು ವಾರಗಳ ಹಿಂದೆಯಷ್ಟೇ ಫಯಾಜ್ ಅಹಮ್ಮದ್ ಖಾನ್ ಎಂಬ ಭೂ ವಿಜ್ಞಾನಿಯನ್ನು ಸೇವೆಯಿಂದ ಅಮಾನತುಪಡಿಸಲಾಗಿತ್ತು. ಪ್ರಸ್ತುತ  ಬಿ.ಎಂ.ಲಿಂಗರಾಜು ಅವರು ಚಿತ್ರದುರ್ಗ ಜಿಲ್ಲೆಯಲ್ಲಿ ಗಣಿ ಮತ್ತು  ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಮೇಲೆ ಆರೋಪ ಕೇಳಿಬಂದಿದ್ದರಿಂದ ಇಲಾಖಾ ತನಿಖೆಗೆ ಆದೇಶಿಸಲಾಗಿತ್ತು.

ಈ ಹಿಂದೆ ಬಾಗಲಕೋಟೆ ಜಿಲ್ಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಸ್ಟೋನ್ ಕ್ರಷರ್ ಮಾಲೀಕರು ಮತ್ತು ಸಾರ್ವಜನಿಕರಿಂದ  ಲಂಚಕಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ  ಎದುರಿಸುತ್ತಿದ್ದರು.

ಗಣಿ ಮತ್ತು  ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಯವರು ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡಿದ ವೇಳೆ ಬಿ.ಎಂ.ಲಿಂಗರಾಜು ಅವರ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸಾರ್ವಜನಿಕರು ಮತ್ತು ಸ್ಟೋನ್ ಕ್ರಷರ್ ಮಾಲೀಕರು ದಾಖಲೆಗಳ ಸಮೇತ ದೂರು ಸಲ್ಲಿಸಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸಚಿವರು ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಲಿಂಗರಾಜು ವಿರುದ್ಧ ತನಿಖೆ ನಡೆಸಿದ ವೇಳೆ ಗುಲ್ಬರ್ಗ ಜಿಲ್ಲೆ, ಸ್ಟೋನ್ ಕ್ರಷರ್ ಇಂಡಸ್ಟ್ರೀಸ್ ಅಸೋಸಿಯೇಷನ್‍ನಿಂದ ಹೆಚ್ಚುವರಿ ರಾಜಧನ ಪಡೆದಿರುವುದು ಸಾಬೀತಾಗಿದೆ.

ಇದೇ ರೀತಿ  ಸುರಕ್ಷಿತ ವಲಯದ ಅಂತರ ಕಡಿಮೆಯಿದೆ ಎಂದು ನವೀಕರಣ ಅರ್ಜಿಯನ್ನು ತಿರಸ್ಕರಿಸಿ  ಕೆ.ಎಸ್.ಕಂಕಲೆ ಎಂಬುವರಿಂದ

₹ 10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಜಯದೇವ ಸ್ಟೋನ್ ಕ್ರಷರ್ ಅವರಿಂದ ಕ್ರಷರ್ ಘಟಕದ ನವೀಕರಣವನ್ನು, ಸುರಕ್ಷಿತವಲ್ಲದ ಕಾರಣ ನವೀಕರಣಕ್ಕೆ  ಸಾಕಷ್ಟು ಸತಾಯಿಸಿ ದೊಡ್ಡ ಮಟ್ಟದ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸಹ ತನಿಖೆಯಲ್ಲಿ ಗೊತ್ತಾಗಿದೆ.

ಲಿಂಗರಾಜು ಅವರಿಗೆ ದೊಡ್ಡ ಮಟ್ಟದ ಲಂಚಕ್ಕೆ ಬೇಡಿಕೆ ಇಟ್ಟಿದ್ದರಿಂದ  ಬ್ಯಾಂಕ್‍ನಿಂದ ಸಾಲ ಪಡೆದು ಆಸ್ತಿಪಾಸ್ತಿ ಮಾರಾಟ ಮಾಡಿ ಗುತ್ತಿಗೆದಾರರು ಆತ್ಮಹತ್ಯೆಗೆ ಪ್ರಯತ್ನಿಸಿರುವುದು ರುಜುವಾತಾಗಿದೆ.

ಅಧಿಕೃತ ಖನಿಜ ಪರಾವನಿಗೆ ಇಲ್ಲದೆ ಕಟ್ಟಡ ಕಲ್ಲು,ಕಲ್ಲಿನ ಸಾಗಾಣಿಕೆ, ದಾಸ್ತಾನು ಮಾಡಿರುವ ಜಯದೇವ ಸ್ಟೋನ್ ಕ್ರಷರ್ ಇವರಿಗೆ ನೋಟಿಸ್ ಜಾರಿ ಮಾಡಿ ಲಿಂಗರಾಜು ₹ 13.17 ಲಕ್ಷ ದಂಡ ಪಾವತಿಸಲು ನೋಟಿಸ್ ಜಾರಿ ಮಾಡಿದ್ದರು.

ಜಯದೇವ ಸ್ಟೋನ್ ಕ್ರಷರ್‍ನ್ನು ರದ್ದು ಮಾಡಿ ದುಬಾರಿ ದಂಡ ವಿಸಿರುವ ಕ್ರಮವನ್ನು ಪ್ರಾದೇಶಿಕ ಆಯುಕ್ತರು ರದ್ದುಪಡಿಸಿರುವುದು ಲಿಂಗರಾಜು ಕರ್ತವ್ಯ ಲೋಪಕ್ಕೆ ಮತ್ತೊಂದು ಸಾಕ್ಷಿ.

ವೆಂಕಟೇಶ್ವರ ಸ್ಟೋನ್ ಕ್ರಷರ್ಸ್ ಅವರ ದೂರು ಅರ್ಜಿಯನ್ನು ಅವಲೋಕಿಸಿದಾಗ ಕ್ರಷರ್ ನವೀಕರಣ ಮಾಡುವಾಗ ಲಿಂಗರಾಜು ಸತಾಯಿಸಿರುವುದು, ಮುಂದಿನ ಪರಾವನಗಿಯನ್ನು ನ್ಯಾಯಲಯದಿಂದಲೇ ಪಡೆಯಿರಿ ಎಂದು ಸೂಚನೆ ಕೊಟ್ಟಿದ್ದರು.

ಈ ಸಂಬಂಧ ಶ್ರದ್ದಾನಂದ ಸ್ಟೋನ್ ಕ್ರಷರ್ಸ್ ಅವರು ಉಚ್ಛ ನ್ಯಾಯಾಲಯದ ಮೊರೆ ಹೋಗಿ ಕ್ರಷರ್‍ನ್ನು ರದ್ದುಪಡಿಸಿದ ಆದೇಶವನ್ನು ಪ್ರಾದೇಶಿಕ ಆಯುಕ್ತರು ರದ್ದುಪಡಿಸಿ ಕಾನೂನು ಬದ್ದವಾಗಿ ಕ್ರಮ ಜರುಗಿಸಲು ನಿರ್ದೇಶನ ನೀಡಿದ್ದರು.

ಇದೇ ರೀತಿ  ಹಲವಾರು ಸ್ಟೋನ್ ಕ್ರಷರ್ ಮಾಲೀಕರಿಂದ ಲಂಚ ನೀಡಲು ಆಮಿಷವೊಡ್ಡಿದ್ದು ತನಿಖೆಯಿಂದ ಗೊತ್ತಾಗಿದೆ. ಈವೆಲ್ಲವನ್ನು ಪರಿಗಣಿಸಿ ಉಪನಿರ್ದೇಶಕ ಬಿ.ಎಂ.ಲಿಂಗರಾಜು ಅವರನ್ನು ಸೇವೆಯಿಂದ ಅಮಾನತು ಪಡಿಸಲಾಗಿದೆ.

ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಟ್ಟು ಹೋಗುವಂತಿಲ್ಲ ಎಂದು ಸೂಚಿಸಲಾಗಿದೆ.

ಟಾಪ್ ನ್ಯೂಸ್

nasa-released-milky-way-galaxy-images-taken-from-international-space-station

ಕ್ಷೀರಪಥದ ಅಮೋಘ ಚಿತ್ರ ಬಿಡುಗಡೆಗೊಳಿಸಿದೆ ನಾಸಾ..!

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಜನರೂ ಸಹಕಾರ ಬೇಕು: ಸಚಿವ ಬಿ.ಸಿ. ಪಾಟೀಲ್

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಜನರ ಸಹಕಾರ ಬೇಕು: ಸಚಿವ ಬಿ.ಸಿ. ಪಾಟೀಲ್

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ‌ಅಬ್ದುಲ್ ನಝೀರ್ ಗೆ ಮಾತೃ ವಿಯೋಗ

ಮೂಡುಬಿದಿರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ‌ಅಬ್ದುಲ್ ನಝೀರ್ ಗೆ ಮಾತೃ ವಿಯೋಗ

suresh-kumar

ಒಂದೆರಡು ದಿನದಲ್ಲಿ 1 ರಿಂದ 9 ತರಗತಿ ಪರೀಕ್ಷೆ ಬಗ್ಗೆ ನಿರ್ಧಾರ: ಸುರೇಶ್ ಕುಮಾರ್

Online Fraud , Dehali police has introdused new help line Number to public

ಬ್ಯಾಂಕ್ ಆನ್ ಲೈನ್ ವಂಚನೆಗೆ ಬ್ರೇಕ್ ಹಾಕಲು ದೆಹಲಿ ಪೊಲೀಸರ ಹೊಸ ಕ್ರಮ..! ಇಲ್ಲಿದೆ ಮಾಹಿತಿ.

ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ, ಎ.20ರಂದು ಮುಂದಿನ ತೀರ್ಮಾನ: ಬಿಎಸ್ ವೈ

ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ, ಎ.20ರಂದು ಮುಂದಿನ ತೀರ್ಮಾನ:ಬಿಎಸ್ ವೈ

ಬಂಟ್ವಾಳ: ಮನೆಮಂದಿ ನಾಟಕ ನೋಡಲು ಹೋಗಿದ್ದಾಗ ನಾಲ್ಕು ಮನೆಗೆ ನುಗ್ಗಿದ ಕಳ್ಳರು!

ಬಂಟ್ವಾಳ: ಮನೆಮಂದಿ ನಾಟಕ ನೋಡಲು ಹೋಗಿದ್ದಾಗ ನಾಲ್ಕು ಮನೆಗೆ ನುಗ್ಗಿದ ಕಳ್ಳರು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಜ್ಗಹಗಹದ್ಗಹಹ್ಗದ

ಅಂಬೇಡ್ಕರರದು ಬಹುಮುಖೀ ವ್ಯಕ್ತಿತ್ವ

ವೇತನ ಬಿಡುಗಡೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

ವೇತನ ಬಿಡುಗಡೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

Chithadurga

ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಸ್ಮರಣೀಯ: ರಾಧಿಕಾ

13-17

ವೇತನ ಬಿಡುಗಡೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

13-16

ಕೊರೊನಾ ಮುಕ್ತ ಜಿಲ್ಲೆಯಾಗಿಸಿ

MUST WATCH

udayavani youtube

ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

ಹೊಸ ಸೇರ್ಪಡೆ

HC directs to fill doctors’ posts in prisons

ಕಾರಾಗೃಹಗಳಲ್ಲಿ ವೈದ್ಯಾಧಿಕಾರಿಗಳ ಹುದ್ದೆ ಭರ್ತಿಗೆ ಹೈಕೋರ್ಟ್‌ ನಿರ್ದೇಶನ

incedent held at bangalore

ಹನಿಟ್ರ್ಯಾಪ್‌: ಇಬ್ಬರು ವಂಚಕರ ಬಂಧನ

nasa-released-milky-way-galaxy-images-taken-from-international-space-station

ಕ್ಷೀರಪಥದ ಅಮೋಘ ಚಿತ್ರ ಬಿಡುಗಡೆಗೊಳಿಸಿದೆ ನಾಸಾ..!

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಜನರೂ ಸಹಕಾರ ಬೇಕು: ಸಚಿವ ಬಿ.ಸಿ. ಪಾಟೀಲ್

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಜನರ ಸಹಕಾರ ಬೇಕು: ಸಚಿವ ಬಿ.ಸಿ. ಪಾಟೀಲ್

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ‌ಅಬ್ದುಲ್ ನಝೀರ್ ಗೆ ಮಾತೃ ವಿಯೋಗ

ಮೂಡುಬಿದಿರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ‌ಅಬ್ದುಲ್ ನಝೀರ್ ಗೆ ಮಾತೃ ವಿಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.