Bail: ಜಾಮೀನು ಮಂಜೂರಾತಿಗೆ ನಕಲಿ ಶ್ಯೂರಿಟಿ

50 ಸಾವಿರ ರೂ. ಪಡೆದು ಬೇಲ್‌ ಕೊಡಿಸುತ್ತಿದ್ದ ಆರೋಪಿಗಳು

Team Udayavani, Dec 15, 2023, 10:05 AM IST

3-bng

ಬೆಂಗಳೂರು: ವಿವಿಧ ಪ್ರಕರಣಗಳಲ್ಲಿ ಬಂಧನ ಕ್ಕೊಳಗಾಗಿ ನ್ಯಾಯಾಲಯದಲ್ಲಿ ಜಾಮೀನು ಸಲ್ಲಿಸಿರುವ ಆರೋಪಿಗಳಿಗೆ ನಕಲಿ ದಾಖಲೆಗಳನ್ನು ಸಲ್ಲಿಸಿ ಶ್ಯೂರಿಟಿ ನೀಡುತ್ತಿದ್ದ ಒಬ್ಬ ಮಹಿಳೆ ಸೇರಿ 9 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಯಚೂರು ಮೂಲದ ವೀರೇಶ್‌ (37), ಅಮರೇಶ್‌ (38), ಕೊಪ್ಪಳದ ಗಂಗಾವತಿಯ ಉಮೇಶ್‌ ಕುಮಾರ್‌ (48), ಬೆಂಗಳೂರಿನ ಮಾದವಾರ ನಿವಾಸಿ ಪ್ರಕಾಶ್‌ (42), ಕೊಪ್ಪಳ ಜಿಲ್ಲೆಯ ಸಂತೋಷ್‌ (29), ಮೈಸೂರಿನ ನಂಜನಗೂಡು ನಿವಾಸಿ ಉಮೇಶ್‌ (49), ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ನಾಗರಾಜ್‌ (46), ಮಂಜುನಾಥ (48) ಮತ್ತು ಬೆಂಗಳೂರಿನ ಆರ್‌.ಟಿ.ನಗರ ನಿವಾಸಿ ತಬಸಮ್‌ (38) ಬಂಧಿತರು. ಆರೋಪಿಗಳಿಂದ 35 ನಕಲಿ ಆಧಾರ್‌ ಕಾರ್ಡ್‌ಗಳು ಮತ್ತು 7 ಸ್ವತ್ತಿನ ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

40-50 ಸಾವಿರಕ್ಕೆ ಜಾಮೀನು: ಆರೋಪಿಗಳು ಕೆ.ಜಿ.ರಸ್ತೆಯ ಮೈಸೂರು ಬ್ಯಾಂಕ್‌ ಸಮೀಪದ ಟೀ ಅಂಗಡಿ ಬಳಿಯೇ ಅಕ್ರಮ ಅಡ್ಡೆ ಮಾಡಿಕೊಂಡಿದ್ದರು. ಸಮೀಪದ ಕೋರ್ಟ್‌ಗೆ ವಿವಿಧ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಆರೋಪಿಗಳು ಅಥವಾ ಅವರ ಸಂಬಂಧಿಕರನ್ನು ಸಂಪರ್ಕಿಸುತ್ತಿದ್ದ ಆರೋಪಿಗಳು, ಇಂತಿಷ್ಟು ಹಣ ನೀಡಿದರೆ, ಶ್ಯೂರಿಟಿ ನೀಡುವುದಾಗಿ ಹೇಳುತ್ತಿದ್ದರು. ಅದರಂತೆ 40-50 ಸಾವಿರ ರೂ. ಪಡೆದು ನಕಲಿ ಆಧಾರ್‌ ಕಾರ್ಡ್‌, ಜಮೀನಿನ ಪಹಣಿ, ಸೇಲ್‌ ಡೀಡ್‌, ಮ್ಯೂಟೇಷನ್‌ಗಳನ್ನು ಕೋರ್ಟ್‌ಗೆ ಸಲ್ಲಿಸಿ ಶ್ಯೂರಿಟಿ ನೀಡಿ ಬಿಡುಗಡೆ ಮಾಡಿಸುತ್ತಿದ್ದರು. ಈ ಮಾಹಿತಿ ಪಡೆದ ಸಿಸಿಬಿಯ ಪೂರ್ವ ವಿಭಾಗ ಎಸಿಬಿ ಪುಟ್ಟಸ್ವಾಮಿಗೌಡ ಮತ್ತು ಇನ್‌ಸ್ಪೆಕ್ಟರ್‌ ವಿ.ಬಾಲಾಜಿ ನೇತೃತ್ವದ ತಂಡ ಕಾರ್ಯಾಚರಣೆ ಆರೋಪಿಗಳನ್ನು ಬಂಧಿಸಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಆರೋಪಿಗಳ ವಿಚಾರಣೆಯಲ್ಲಿ ಒಂದೇ ಹೆಸರಿನ ಬೇರೆ ಬೇರೆ ನಂಬರ್‌ ಇರುವ ಆಧಾರ್‌ ಕಾರ್ಡ್‌, ಬೇರೆ ಬೇರೆ ವ್ಯಕ್ತಿಗಳ ಆಧಾರ್‌ ಕಾರ್ಡ್‌, ಹೆಸರು ತಿದ್ದುಪಡಿ ಮಾಡಿರುವ ಜಮೀನಿನ ಪಹಣಿ ಹಾಗೂ ಮ್ಯೂಟೇಷನ್‌ಗಳನ್ನು ಕೋರ್ಟ್‌ಗೆ ಅಸಲಿ ದಾಖಲೆಗಳೆಂದು ಸಲ್ಲಿಸಿ ಸರ್ಕಾರಕ್ಕೆ ವಂಚಿಸಿದ್ದಾರೆ ಎಂಬುದು ಗೊತ್ತಾಗಿದೆ.

ಐದಾರು ವರ್ಷಗಳಿಂದ ಕೋರ್ಟ್‌ಗೆ ವಂಚನೆ

ಆರೋಪಿಗಳು ಸುಮಾರು ಐದಾರು ವರ್ಷಗಳಿಂದ ಇದೇ ಮಾದರಿಯಲ್ಲಿ ಸರ್ಕಾರ ಮತ್ತು ಕೋರ್ಟ್‌ಗೆ ವಂಚಿಸುತ್ತಿರುವುದು ಪತ್ತೆಯಾಗಿದೆ. ಈ ಹಿಂದೆಯೂ ಇದೇ ಮಾದರಿಯಲ್ಲಿ ನಕಲಿ ದಾಖಲೆ ಸಲ್ಲಿಸಿ ಕೋರ್ಟ್‌ಗೆ ವಂಚಿಸುತ್ತಿರುವುದು ಪತ್ತೆಯಾಗಿತ್ತು. ಹೀಗಾಗಿ ಆ ತಂಡಕ್ಕೂ ಈ ತಂಡಕ್ಕೂ ಸಂಬಂಧ ಇದೆಯೇ ಸೇರಿ ವಿವಿಧ ಆಯಾಮಗಳಲ್ಲಿ ಹೆಚ್ಚಿನ ತನಿಖೆ ನಡೆಸಲು ಹಲಸೂರು ಗೇಟ್‌ ಠಾಣೆ ಪೊಲೀಸರಿಗೆ ಪ್ರಕರಣ ವರ್ಗಾಯಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದರು. ಹಲಸೂರು ಗೇಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.