ಕಸ ನಿರ್ವಹಣೆ ಉಪನಿಯಮ ಜಾರಿ ಪ್ರಕಟಣೆ: ಗೊಂದಲ

Team Udayavani, Jun 21, 2020, 5:43 AM IST

gondala bbmp

ಬೆಂಗಳೂರು: ನಗರದಲ್ಲಿ ಕಸ ಸಂಗ್ರಹಕ್ಕೆ ಮಾಸಿಕ 200 ರೂ. ಶುಲ್ಕ ಸಂಗ್ರಹ ಸೇರಿದಂತೆ ಕಸ ಉತ್ಪಾದನೆಗೆ ದಂಡ ವಿಧಿಸುವ ಅಂಶಗಳನ್ನು ಒಳಗೊಂಡ “ಘನತ್ಯಾಜ್ಯ ನಿರ್ವಹಣೆ ಉಪ ನಿಯಮಗಳು- 2020”ಅನ್ನು ಜಾರಿ ಮಾಡುವುದಾಗಿ ಬಿಬಿಎಂಪಿ ಪ್ರಕಟಣೆ ಹೊರಡಿಸಿರುವುದು ಸದ್ಯ ಗೊಂದಲಕ್ಕೆ ಕಾರಣವಾಗಿದೆ. ನಗರದಲ್ಲಿನ ಮನೆಗಳಿಂದ ಪ್ರತಿ ತಿಂಗಳು ಕಸ ಸಂಗ್ರಹಕ್ಕೆ ಮಾಸಿಕ 200 ರೂ. ಸಂಗ್ರಹ ಮಾಡುವ ಪ್ರಸ್ತಾವನೆಗೆ ಸಾರ್ವಜನಿಕ ವಲಯದಿಂದ  ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ನಗರದಲ್ಲಿ ಕಸ ಸಂಗ್ರಹ ಮಾಡುವುದಕ್ಕೆ ಯಾವುದೇ  ಕಾರಣಕ್ಕೂ ಶುಲ್ಕ ಸಂಗ್ರಹ ಮಾಡಬಾರದು. ಈ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಇತ್ತೀಚೆಗೆ ನಡೆದ ಪಾಲಿಕೆಯ ಕೌನ್ಸಿಲ್‌ ಸಭೆಯಲ್ಲಿ ವಿರೋಧ  ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಪ್ರತಿಕ್ರಿಯೆ ನೀಡಿದ ಮೇಯರ್‌ ಎಂ.ಗೌತಮ್‌ಕುಮಾರ್‌ ಅವರು, ಈ ನಿಯಮಗಳನ್ನು ಅಳವಡಿಸಿಕೊಳ್ಳಲು 90 ದಿನಗಳ ಕಾಲಾವಕಾಶವಿದ್ದು, ಸಾರ್ವಜನಿಕರಿಗೆ  ಹೊರೆಯಾಗುವಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದರು.

ಆದರೆ, ಅದರ ಬೆನ್ನಲ್ಲೇ ಬಿಬಿಎಂಪಿಯು ಘನ ತ್ಯಾಜ್ಯ ನಿರ್ವಹಣೆ ನಿಯಮಾವಳಿಗಳು 2020ಅನ್ನು ಸೆಕ್ಷನ್‌ 428ರ ಕೆಎಂಸಿ ಕಾಯ್ದೆ 1976ರ  ಪ್ರಕಾರ ಜಾರಿ ಮಾಡಲಾಗುತ್ತಿದೆ ಎಂದು ಪ್ರಕಟಣೆ ಹೊರಡಿಸಿದೆ. ಘನತ್ಯಾಜ್ಯ ನಿರ್ವಹಣೆ ನಿಯ ಮಾವಳಿಗಳು -2016ರ 15 ಇ ಮತ್ತು ಜಡ್‌ ಎಫ್ ನ ನಿಯಮಾವಳಿಗಳ  ಅನ್ವಯ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ನಿಯಮಾವಳಿಗಳಿಗೆ ಉಪನಿಯಮ ರಚನೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ರಚನೆ ಮಾಡಲಾಗಿದ್ದು, ಶೀಘ್ರ ಜಾರಿಗೆ ತರಲಾಗುವುದು.

ಘನತ್ಯಾಜ್ಯ ನಿಯಮಾವಳಿಗಳ ವಿವರ ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಈ ಸಂಬಂಧ ಕಿರುಹೊತ್ತಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಲಭ್ಯವಿದ್ದು, 200 ರೂ. ನೀಡಿ ಪಾಲಿಕೆಯ ಕೇಂದ್ರ ಕಚೇರಿಯಿಂದ ಆಸಕ್ತರು ಖರೀದಿಸಬಹುದು ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ. ಪಾಲಿಕೆ ಹೊರಡಿಸಿರುವ  ಸಾರ್ವಜನಿಕ ಪ್ರಕಟಣೆಯಿಂದ ಗೊಂದಲ ಸೃಷ್ಟಿಯಾಗಿ ದ್ದು, ಪಾಲಿಕೆಯ ನಿಲುವೇ ದ್ವಂದ್ವದಿಂದ ಕೂಡಿರುವ ಬಗ್ಗೆ ಆಕ್ಷೇಪಣೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.