ಲಕ್ಷಣವಿಲ್ಲದವರಿಗೆ ಮನೆಯಲ್ಲೇ ಚಿಕಿತ್ಸೆ?

Team Udayavani, Jun 11, 2020, 5:23 AM IST

lakshana-mane

ಬೆಂಗಳೂರು: ಆರ್ಥಿಕ ಹೊರೆ ಜತೆಗೆ ಆಸ್ಪತ್ರೆಗಳ ಮೇಲಿನ ಒತ್ತಡ ತಗ್ಗಿಸುವ ನಿಟ್ಟಿನಲ್ಲಿ ಬಿಬಿಎಂಪಿ ಇನ್ನು ಮುಂದೆ ಸೋಂಕಿನ ಲಕ್ಷಣಗಳಿಲ್ಲದ “ಪಾಸಿಟಿವ್‌’ ಪ್ರಕರಣಗಳಿಗೆ ಅವರವರ ಮನೆಗಳಲ್ಲಿಯೇ ಚಿಕಿತ್ಸೆ ನೀಡಲು ಚಿಂತನೆ ನಡೆಸಿದೆ. ನಗರದಲ್ಲಿ ಸೋಂಕು ದೃಢಪಟ್ಟವರಲ್ಲಿ ಶೇ. 50ರಿಂದ 60ರಷ್ಟು ಜನರಲ್ಲಿ ಕೋವಿಡ್‌ 19 ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಇವರೆಲ್ಲರಿಗೂ ಮನೆಗಳಲ್ಲೇ ಚಿಕಿತ್ಸೆ ನೀಡುವ ಸಂಬಂಧ ಚರ್ಚೆ ನಡೆದಿದೆ.

ಪ್ರಸ್ತುತ ಲಕ್ಷಣಗಳಿಲ್ಲದ  ಪಾಸಿಟಿವ್‌ ಪ್ರಕರಣಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಇವರ ಪ್ರಾಥಮಿಕ ಹಾಗೂ ದ್ವಿತೀಯ ಸಂರ್ಪಕಿತರನ್ನೂ ಕ್ವಾರಂಟೈನ್‌ ಮಾಡಲಾ  ಗುತ್ತಿದೆ. ಇದಕ್ಕೆಲ್ಲ ಹಣ ಖರ್ಚಾಗುತ್ತಿದ್ದು, ಪಾಲಿಕೆ ಮತ್ತು ಸರ್ಕಾರಕ್ಕೂ  ಆರ್ಥಿಕವಾಗಿ  ಹೊರೆಯಾಗುತ್ತಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಮನೆಗಳಲ್ಲಿ ಮಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಿಕೊಳ್ಳಲಾಗುತ್ತಿದೆ.

ಅಪಾಯ ಕಡಿಮೆ: ಕೋವಿಡ್‌ 19ಗೆ ನಿರ್ದಿಷ್ಟ ಔಷಧಿ ಇಲ್ಲ. ಸದ್ಯ ಆಸ್ಪತ್ರೆಗಳಲ್ಲಿ ಸೋಂಕಿನ ಲಕ್ಷಣಗಳು (ಕೆಮ್ಮು, ಜ್ವರ, ಶೀತ ಹಾಗೂ ಉಸಿರಾಟದ ಸಮಸ್ಯೆ) ಇರುವವರಿಗೆ ಆಯಾ ಸಮಸ್ಯೆ ತಪ್ಪಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಆದರೆ, ಲಕ್ಷಣ ಇಲ್ಲದವರಿಗೆ ಅಂತಹ ಸಮಸ್ಯೆಗಳೇ ಇರುವುದಿಲ್ಲ. ಅಲ್ಲದೆ, ಇವರಿಂದ ಬೇರೆಯವರಿಗೆ ಸೋಂಕು ಹರಡುವ ಸಾಧ್ಯತೆಯೂ ಶೇ. 10ರಷ್ಟು ಮಾತ್ರ ಇರು ತ್ತದೆ. ಹೀಗಾಗಿ, ಹೆಚ್ಚು ಅಪಾಯ ಇರುವು ದಿಲ್ಲ ಎಂದು ಬಿಬಿಎಂಪಿ  ಆರೋಗ್ಯಾ ಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಪದೇ ಪದೆ ಪರೀಕ್ಷಿಸುವ ಅವಶ್ಯ ಕತೆಯೂ ಇರುವುದಿಲ್ಲ.

ಹೀಗಾಗಿ, ಇವರಿಗೆ ಮನೆಗಳಲ್ಲೇ ಚಿಕಿತ್ಸೆ ನೀಡುವುದು ಹಾಗೂ ಮನೆಯವರಿಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲು ಪಾಲಿಕೆ ಮುಂದಾಗಿದೆ. ಯಾರಿಗೆ  ಮನೆಯಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನ್‌ ಆಗಲು ಸೌಲಭ್ಯ ಇರುವುದಿಲ್ಲ, ಕೊಳೆ ಗೇರಿ ಹಾಗೂ ಕೆಲವು ಪ್ರದೇಶಗಳಲ್ಲಿನ ಲಕ್ಷಣ ರಹಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಸಂಬಂಧ  ಚರ್ಚೆ ನಡೆದಿದೆ. ಇದೇ ಮಾದರಿಯಲ್ಲಿ ಗರ್ಭಿಣಿಯರು, ವಯಸ್ಸಾದವರು ಮತ್ತು ಮಕ್ಕಳಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಚಿಂತನೆ ಇದೆ ಎಂದು ಬಿಬಿಎಂಪಿಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಮನೆ ಮಾತ್ರ ಕಂಟೈನ್ಮಂಟ್: ಯಾರಲ್ಲಾದರೂ ಕೋವಿಡ್‌ 19 ಕಾಣಿಸಿಕೊಂಡರೆ‌ ಅವರು ವಾಸವಿರುವ ನಿರ್ದಿಷ್ಟ ಪ್ರದೇಶವನ್ನು ಕಂಟೈನ್ಮೆಂಟ್‌ ಮಾಡಲಾಗುತ್ತಿದೆ. ಆದರೆ, ಲಕ್ಷಣಗಳಿಲ್ಲದ ಸೋಂಕಿತರಿಗೆ ಮನೆಗಳಲ್ಲೇ ಕಂಟೈನ್ಮೆಂಟ್‌  ಮಾಡಿದರೆ, ಆ ಪ್ರದೇಶವನ್ನು ಮಾತ್ರ ಕಂಟೈನ್ಮೆಂಟ್‌ ಎಂದು ಪರಿಗಣಿಸುವುದು ಹಾಗೂ ಸೋಂಕು ದೃಢಪಟ್ಟ ವ್ಯಕ್ತಿಯ ಕುಟುಂಬಸ್ಥರು ಹೊರಗೆ ಬರದಂತೆ ಎಚ್ಚರಿಕೆ ವಹಿಸುವಂತೆ ನೋಡಿಕೊಳ್ಳಲು ಸಾಧ್ಯವೇ ಎಂಬುದರ ಬಗ್ಗೆಯೂ  ಪಾಲಿಕೆ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.