ರವಿ ಪೂಜಾರಿ ವಿರುದ್ಧ ದೋಷಾರೋಪ ಸಲ್ಲಿಕೆ


Team Udayavani, Jun 6, 2020, 5:18 AM IST

sallike

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ನಗರದಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣಗಳ ತನಿಖೆ ಮುಕ್ತಾಯಗೊಳಿಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ  ಪಟ್ಟಿ ಸಲ್ಲಿಸಿದ್ದಾರೆ.

ತಿಲಕ್‌ ನಗರ ಠಾಣಾ ವ್ಯಾಪ್ತಿಯಲ್ಲಿ ಶಬನಂ ಬಿಲ್ಡರ್ ಕಚೇರಿ ಸಿಬ್ಬಂದಿ ಜೋಡಿ ಕೊಲೆ ಪ್ರಕರಣ ಹಾಗೂ ವೈಟ್‌ಫೀಲ್ಡ್‌ ಠಾಣೆ ವ್ಯಾಪ್ತಿಯಲ್ಲಿ ದೇವ ಸ್ಥಾನದ ಟ್ರಸ್ಟಿಯೊಬ್ಬರಿಂದ ಹಣ ಸುಲಿಗೆ ಪ್ರಕರಣಗಳಲ್ಲಿ ರವಿ ಪೂಜಾರಿ  ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಪ್ರಕರಣದಲ್ಲಿ ಈಗಾಗಲೇ 18 ಮಂದಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ತಿಳಿಸಿದರು.

ರವಿ ಪೂಜಾರಿ ಬಂಧನದ ಬಳಿಕ  ಪ್ರಕರಣದಲ್ಲಿ ಒಟ್ಟು 18 ಮಂದಿಯನ್ನು ಬಂಧಿಸಿದಂತಾಗಿದೆ. ಪ್ರಕರಣದಲ್ಲಿ ಪೂಜಾರಿ ಮೇಲೆ 514 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, 48 ಜನರ ಹೇಳಿಕೆ ಹಾಗೂ ಸಾಕ್ಷ ಸಂಗ್ರಹಿಸಲಾಗಿದೆ ಎಂದರು. ಅಂದಿನ ಪಾಲಿಕೆ  ಸದಸ್ಯ ಸಮೀವುಲ್ಲಾ ಶಬನಂ ಬಿಲ್ಡರ್ ನಡೆಸುತ್ತಿದ್ದು, ಅವರಿಗೆ ವಿದೇಶದಿಂದಲೇ ಬೆದರಿಕೆ ಕರೆ ಮಾಡಿದ್ದ ಪೂಜಾರಿ, ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ.

ಹಣ ನೀಡಲು ಒಪ್ಪದಿದ್ದಾಗ ಕೊಲೆ ಮಾಡುವುದಾಗಿ ಬೆದರಿಸಿದ್ದ.  ತಿಲಕ್‌ನಗರ ಠಾಣೆ ವ್ಯಾಪ್ತಿಯಲ್ಲಿ 2007 ರ ಫೆ. 15ರಂದು ಮುಸುಕುಧಾರಿಗಳಾಗಿ ಶಬನಂ ಕಚೇರಿಗೆ ಆಗಮಿಸಿದ್ದ ದುಷ್ಕರ್ಮಿಗಳು “ಶಬನಂ ಬಿಲ್ಡರ್’ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಶೈಲಜಾ ಹಾಗೂ ಕಾರು ಚಾಲಕ ರವಿ ಅವರನ್ನು  ಗುಂಡಿಕ್ಕಿ ಕೊಂದಿದ್ದರು. ಹತ್ಯೆ ಬಳಿಕ ಆರೋಪಿಗಳು ರವಿ ಪೂಜಾರಿ ಎಂಬ ಭಿತ್ತಿ ಪತ್ರವನ್ನು ಕಚೇರಿ ಗಾಜಿನ ಮೇಲೆ ಅಂಟಿಸಿ ಹೋಗಿದ್ದರು.

ಪೂಜಾರಿಯ ಸಹಚರರು ಎನ್ನಲಾದ ಕವಿರಾಜ್‌, ಮೋಹನ್‌, ಶಿವಾ, ಇಬ್ರಾಹಿಂ, ಮಹೇಶ್‌,  ಸಂತೋಷ್‌ ರೈ, ಪ್ರದೀಪ್‌, ಆಜಾದ್‌ ಹಾಗೂ ಉದಯ್‌ ಕುಮಾರ್‌ ಹೆಗ್ಡೆಯನ್ನು 2009ರಲ್ಲೇ ಬಂಧಿಸಲಾಗಿತ್ತು ಎಂದು ತನಿಖಾ ತಂಡದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ವೈಟ್‌ಫೀಲ್ಡ್‌ ಪ್ರಕರಣ: ವೈಟ್‌ಫೀಲ್ಡ್‌ ಠಾಣಾ ವ್ಯಾಪ್ತಿಯ  ದೇವಸ್ಥಾನವೊಂದರ ಟ್ರಸ್ಟಿಗೆ ಕರೆ ಮಾಡಿದ್ದ ರವಿ ಪೂಜಾರಿ ಜೀವ ಬೆದರಿಕೆಯೊಡ್ಡಿದ್ದ. ಅಲ್ಲದೆ, ಹಣ ಸುಲಿಗೆ ಮಾಡಿದ್ದ. ಈ ಪ್ರಕರಣದಲ್ಲೂ 200 ಪುಟಗಳ ದೋಷಾರೋಪ ಪಟ್ಟಿ  ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಅಧಿಕಾರಿ ವಿವರಿಸಿದರು.

ವಿದೇಶದಲ್ಲಿ ಅಡಗಿ ಕುಳಿತಿದ್ದ ಪಾತಕಿ ರವಿ ಪೂಜಾರಿ ಉದ್ಯಮಿ, ರಾಜಕಾರಣಿಗಳಿಗೆ ಹಣ ಬೇಡಿಕೆಯಿಡುತ್ತಿದ್ದ. ಈತನ ವಿರುದ್ಧ ಬೆಂಗಳೂರಿನಲ್ಲಿ 39,  ಮಂಗಳೂರಿನಲ್ಲಿ 36, ಉಡುಪಿಯಲ್ಲಿ 11, ಮೈಸೂರು, ಹುಬ್ಬಳ್ಳಿ- ಧಾರವಾಡ, ಕೋಲಾರ ಮತ್ತು ಶಿವಮೊಗ್ಗದಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.